ಕಲಬುರಗಿ: ಅಪೌಷ್ಠಿಕತೆ ನಿವಾರಣೆ ಹಿನ್ನೆಯಲ್ಲಿ ಶಾಲಾ ಮಕ್ಕಳಿಗೆ ರಾಜ್ಯ ಸರಕಾರ ಮೊಟ್ಟೆ ವಿತರಣೆ ಯೋಜನೆಯನ್ನು ಪ್ರೌಡ ಶಾಲಾ ಮಕ್ಕಳಿಗೂ ವಿಸ್ತರಿಸಬೇಕೆಂದು ಪ್ರಬುದ್ಧ ಭಾರತ ಸಂಘರ್ಷ ಸಮಿತಿ ಸಾರ್ವಜನಿಕ ಶಿಕ್ಷಣ ಇಲಾಖೆಯ ವಿಭಾಗಿಯ ಹೆಚ್ಚುವರಿ ಆಯುಕ್ತರಾದ ನಳಿನ ಅತುಲ ಮತ್ತು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಆಗ್ರಹಿಸಿದರು.
ಶೇ ೭೫ ರಷ್ಟು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದು ಈ ಸಮಸ್ಯೆ ನಿವಾರಣೆಗೆ ಸರ್ಕಾರ ಮೊಟ್ಟೆ ವಿತರಣಾ ಯೋಜನೆ ಜಾರಿಗೆ ತಂದಿದೆ. ಯೋಜನೆಯಿಂದ ಶಾಲೆಯ ದಾಖಲಾತಿ ಮತ್ತು ಹಾಜರಾತಿಯಲ್ಲಿ ಗಣನೀಯ ಏರಿಕೆ ಕಾಣುತ್ತಿದೆ. ಶಾಲೆಯಲ್ಲಿ ಪ್ರತಿಶತ 80ರಷ್ಟು ಮಕ್ಕಳು ಮೊಟ್ಟೆ ಬೇಕು ಎನ್ನುವ ಬೇಡಿಕೆ ಇಟ್ಟಿದ್ದಾರೆ. ಅಪೌಷ್ಟಿಕತೆ ಮತ್ತು ಮಕ್ಕಳ ಆರೋಗ್ಯದ ಕುರಿತು ಗಮನವಿರದ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಮಕ್ಕಳ ಆಹಾರದಲ್ಲಿ ರಾಜಕೀಯ ಮಾಡಲು ಹೊರಟಿದ್ದಾರೆ ಎಂದು ಅಸಮಧಾನ ವ್ಯಕ್ತಪಡಿಸಿದರು.
ಈ ಕ್ಷುಲ್ಲಕ ರಾಜಕಾರಣವನ್ನು ಬದಿಗೊತ್ತಿ ಸರ್ಕಾರ ತೆಗೆದುಕೊಂಡ ಈ ಗಟ್ಟಿ ನಿರ್ಧಾರವನ್ನು ಮುಂದುವರಿಸಿಕೊಂಡು ಹೋಗಬೇಕು ಜೊತೆಗೆ ಮೊಟ್ಟೆ ವಿತರಣೆ ಯೋಜನೆ ಯೋಜನೆಯನ್ನು 10ನೇ ತರಗತಿಯ ಮಕ್ಕಳಿಗೆ ವಿತರಣೆ ಮಾಡಬೇಕು ಈ ಸಂದರ್ಭದಲ್ಲಿ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಅಶ್ವೀನಿ ಮದನಕರ್, ಪೂಜಾ ಸಿಂಗೆ ಭವಾನಿಪ್ರಸಾದ ಇದ್ದರು.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…