ಸುರಪುರ: ಉದ್ಯೋಗ ಖಾತ್ರಿ ಯೋಜನೆಯಲ್ಲಿನ ಅವ್ಯವಹಾರ ತನಿಖೆಗೆ ಆಗ್ರಹಿಸಿ ಕರ್ನಾಟಕ ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಒಕ್ಕೂಟ ದಿಂದ ಪ್ರತಿಭಟನೆ ನಡೆಸಲಾಗಿದೆ.ನಗರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಅನೇಕ ಮುಖಂಡರು ಮಾತನಾಡಿ,ಸುರಪುರ ಮತ್ತು ಹುಣಸಗಿ ತಾಲೂಕಿನ ಅನೇಕ ಗ್ರಾಮ ಪಂಚಾಯತಿಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಭಾರಿ ಅವ್ಯವಹಾರ ನಡೆಸಲಾಗುತ್ತಿದೆ.ಕೂಲಿ ಕಾರ್ಮಿಕರ ಹೆಸರಲ್ಲಿ ನಕಲಿ ಜಾಬ್‌ಕಾರ್ಡ್‌ಗಳನ್ನು ಮಾಡಿ ಅವುಗಳನ್ನು ಮುಖಂಡರು ತಮ್ಮ ಬಳಿಯೆ ಇಟ್ಟುಕೊಂಡು ಹಣವನ್ನು ಲೂಟಿ ಮಾಡಲಾಗುತ್ತಿದೆ.ಇದರ ಕುರಿತು ಲೋಕಾಯುಕ್ತರಿಂದ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕು ಮತ್ತು ನಿಯಮನುಸಾರ ಕಾಮಗಾರಿಗಳ ಮಾಡಿದ್ದರ ಬಗ್ಗೆಯೂ ತನಿಖೆಯಾಗಲಿ ಎಂದು ಆಗ್ರಹಿಸಿದರು.
ನಂತರ ಪ್ರತಿಭಟನಾ ಸ್ಥಳಕ್ಕೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಮೂಡಲದಿನ್ನಿ ಆಗಮಿಸಿ ಮನವಿಯನ್ನು ಸ್ವೀಕರಿಸಿ ನಿಮ್ಮ ಮನವಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ನಿಲ್ಲಿಸಿದರು.
ಸುಮಾರು ಅರ್ಧಗಂಟೆಗು ಹೆಚ್ಚುಕಾಲ ರಸ್ತೆ ತಡೆನಡೆಸಿದ್ದರಿಂದ ವಾಹನ ಸವಾರರು ಪರದಾಡುವಂತಾಯಿತು.ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಬೊಮ್ಮನಹಳ್ಳಿ,ರಾಜ್ಯ ಉಪಾಧ್ಯಕ್ಷ ನಾಗಣ್ಣ ಕಲ್ಲದೇವನಹಳ್ಳಿ,ಪ್ರಧಾನ ಕಾರ್ಯದರ್ಶಿ ಭೀಮರಾಯ ಸಿಂದಗೇರಿ,ಜಿಲ್ಲಾ ಕಾರ್ಯದರ್ಶಿ ಎನ್.ರಾಜು ದರಬಾರಿ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಿವಶಂಕರ ಹೊಸ್ಮನಿ,ತಾಲೂಕು ರೈತ ಘಟಕದ ಅಧ್ಯಕ್ಷ ಗೋಪಾಲ ಬಾಗಲಕೋಟೆ,ಶರಣಪ್ಪ ತೆಗ್ಗಳ್ಳಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…