ಶಹಾಬಾದ:ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಿ ತಹಸೀಲ್ದಾರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದ ಅಲ್ಪಾವಧಿ ಹಾಗೂ ವಾಣಿಜ್ಯಗಳು ಹಾಳಾಗಿ ಹೋಗಿದೆ.ಇದರಿಂದ ರೈತರ ಬದುಕು ಸಾಲದ ಸುಳಿಯಲ್ಲಿ ಸಿಲುಕಿ ನಲಗುವಂತಾಗಿದೆ.ಆದರೂ ರೈತರ ಹಿತದೃಷ್ಟಿ ಕಾಯದೇ ವಿಧಾನ ಪರಿಷತ್ ಚುನಾವಣೆಯಲ್ಲಿಯೇ ಕಾಲಹರಣ ಮಾಡಿ ರೈತರ ಧ್ವನಿಗೆ ಕವಡೆ ಕಾಸಿನ ಕಿಮ್ಮತ್ತು ನೀಡುತ್ತಿಲ್ಲ. ಪ್ರತಿ ವರ್ಷ ಬೆಳೆಯುತ್ತಿದ್ದ ಇಳುವರಿಗಿಂದ ಈ ವರ್ಷ ಅರ್ಧದಷ್ಟು ಕಡಿಮೆಯಾಗಿದೆ. ಗೊಬ್ಬರ ದುಬಾರಿ, ಔಷಧಿ ದುಬಾರಿ, ಕಳೆ ಕೀಳುವ ಕೆಲಸಗಾರರ ಹಣ ದುಬಾರಿಗೆ ಸಂಕಷ್ಟ ಪಡುವ ಸ್ಥಿತಿ ನಿರ್ಮಾಣವಾಗಿದೆ.ಆದ್ದರಿಂದ ಸರ್ಕಾರ ರೈತರ ನೆರವಿಗೆ ಬರಬೇಕು.
ಬೆಳೆ ಪರಿಹಾರ ಸರಿಯಾಗಿ ಬಂದಿಲ್ಲ.ಕೆಲವರಿಗೆ ಬಂದಿದ್ದು, ಕೆಲವರಿಗೆ ಇನ್ನೂ ಬಂದಿಲ್ಲ. ಸರ್ಕಾರದ ನೀತಿ ಎಡಬಿಡಂಗಿಯಾಗಿದೆ. ಕಲ್ಯಾಣ ಕರ್ನಾಟಕ್ಕೆ ೫೦ ಕೋಟಿ ರೂ. ವಿಶೇಷ ಪ್ಯಾಕೇಜ ಘೋಷಿಸಬೇಕೆಂದು ಆಗ್ರಹಿಸಿದರು.ಅಲ್ಲದೇ ಚಳಿಗಾಲದ ಅಧಿವೇಶನದಲ್ಲಿ ಇದು ಘೋಷಣೆ ಮಾಡಬೇಕು.ತೊಗರಿ ಬೋರ್ಡ ಬಲಪಡಿಸಿ ಕಲಬುರಗಿ ತೊಗರಿ ದ್ವಿದಳ ಧಾನ್ಯಗಳು ಪಲ್ಸ್‌ಸ್ ಬೋರ್ಡಿಗೆ ಹಣ ಬಿಡುಗಡೆ ಮಾಡಬೇಕು. ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರ ಬೆಳೆ ಸಾಲದ ರೂಪದಲ್ಲಿ ಹಣ ಕಡಿತ ಮಾಡುವುದನ್ನು ನಿಲ್ಲಿಸಬೇಕು.
ಪ್ರತಿ ಕ್ವಿಂಟಾಲ್ ತೊಗರಿಗೆ ೮೬೫೯ ರೂ.ಒಗರಿ ಖರೀದಿ ಕೇಂದ್ರ ಪ್ರಾರಂಭಿಸಿಬೇಕು.ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಬಡ ಕೃಷಿ ಕೂಲಿಕಾರರಿಗೆ ೨೦೦ ದಿನಗಳ ಮಾನವ ದಿನಗಳು ಸೃಜಿಸಬೇಕು ಸೇರಿದಂತೆ ಅನೇಕ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ತಹಸೀಲ್ದಾರ ಗುರುರಾಜ ಸಂಗಾವಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು. ಕೆಪಿಆರ್‌ಎಸ್ ಚಿತ್ತಾಪೂರ ತಾಲೂಕಾಧ್ಯಕ್ಷ ಸಾಯಬಣ್ಣ ಗುಡುಬಾ, ಶಹಾಬಾದ ತಾಲೂಕಾ ಸಂಚಾಲಕ ರಾಯಪ್ಪ ಹುರಮುಂಜಿ, ಉಪಾಧ್ಯಕ್ಷ ವೀರಯ್ಯಸ್ವಾಮಿ ತರನಳ್ಳಿ, ವಿಶ್ವರಾಜ ಫೀರೋಜಬಾದ,ಮಲ್ಲಿಕಾರ್ಜುನ ಬುರ್ಲಿ, ಶಿವಕುಮಾರ, ಈರಪ್ಪ ಹುರಮುಂಜಿ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…