ಬೆಳಗಾವಿ: ಸಭಾಪತಿ ಆದೇಶ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ನ 14 ಸದಸ್ಯರನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.
ಬೆಳಗಾವಿ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ವಿಧಾನ ಪರಿಷತ್ ನಲ್ಲಿ ಭೂ ಹಗರಣ ಸಂಬಂಧ ಸಚಿವ ಭೈರತಿ ಬಸವರಾಜ್ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ್ದರು.
ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಸದಸ್ಯರು ಘೋಷಣೆ ಕೂಗಲು ಆರಂಭಿಸಿದ್ದಾರೆ. ಸಭಾಪತಿ ಬಸವರಾಜ್ ಹೊರಟ್ಟಿಯವರು, ಕಾಂಗ್ರೆಸ್ ಸದಸ್ಯರಿಗೆ ಚರ್ಚೆಗೆ ಅವಕಾಶ ನೀಡಲಾಗುವುದು ಧರಣಿ ಕೈಬಿಡುವಂತೆ ಸೂಚಿಸಿದರೂ ಸದನದಲ್ಲಿ ಧರಣಿ ಮುಂದುವರೆಸಿದ್ದಾರೆ.
ಸಭಾಪತಿಗಳ ಆದೇಶ ಉಲ್ಲಂಘನೆ ಹಿನ್ನೆಲೆಯಲ್ಲಿ ಎಸ್.ಆರ್.ಪಾಟೀಲ್, ಬಿ.ಕೆ.ಹರಿಪ್ರಸಾದ್ ಸೇರಿದಂತೆ 14 ಸದಸ್ಯರನ್ನು ಸದನದಿಂದ 1 ದಿನದ ಮಟ್ಟಿಗೆ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…