ಬಿಸಿ ಬಿಸಿ ಸುದ್ದಿ

ಶೌರ್ಯಪ್ರಶಸ್ತಿ ವಿಜೇತರಿಗೆ ಅನುದಾನ ಮೊತ್ತ ಹೆಚ್ಚಳ

ಬೆಳಗಾವಿ: ಭಾರತವು 1971 ರಲ್ಲಿ ಪಾಕಿಸ್ತಾನದ ವಿರುದ್ಧದ ಯುದ್ದದಲ್ಲಿ ಜಯಸಾಧಿಸಿ 50 ವರ್ಷ ಪೂರೈಸಿದ ಸಂದರ್ಭದಲ್ಲಿ ಹಮ್ಮಿಕೊಳ್ಳಲಾದ “ವಿಜಯ ದಿವಸ” ಕಾರ್ಯಕ್ರಮದಲ್ಲಿ ಭಾಗವಹಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು 1971ರ ಇಂಡೋ-ಪಾಕ್ ಯುದ್ಧದಲ್ಲಿ ಹುತಾತ್ಮರಾದ ಯೋಧರಿಗೆ ಗೌರವ ಸಮರ್ಪಿಸಿದರು.

ಬೆಳಗಾವಿಯ ಮರಾಠಿ ಲಘು ಪದಾತಿ ದಳ ಕೇಂದ್ರ(ಎಂ.ಎಲ್.ಐ.ಆರ್.ಸಿ)ದ ಆವರಣದಲ್ಲಿ ಗುರುವಾರ(ಡಿ.16) ಹಮ್ಮಿಕೊಳ್ಳಲಾಗಿದ್ದ ವಿಜಯ ದಿವಸ” ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದರು.

1971 ರ ಇಂಡೋ-ಪಾಕ್ ಯುದ್ಧದಲ್ಲಿ ಪಾಕಿಸ್ತಾನವನ್ನು ಬಗ್ಗುಬಡಿದು ಬಾಂಗ್ಲಾ ದೇಶ ಉದಯಕ್ಕೆ ಕಾರಣರಾದ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದ ಬಳಿಕ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಂಡೋ-ಪಾಕ್ ಯುದ್ಧವು ಚರಿತ್ರೆಯಲ್ಲಿ ಭಾರತದ ಶಕ್ತಿಗೆ ಸ್ಥಾನ ಒದಗಿಸಿದೆ. ದೇಶವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಇದು ನಮಗೆ ಮತ್ತಷ್ಟು ಸ್ಫೂರ್ತಿಯಾಗಿದೆ ಎಂದು ತಿಳಿಸಿದರು.

ಸೇನೆ ದೇಶ ರಕ್ಷಣೆಯ ಜತೆಗೆ ಆಂಯರಿಕ ಭದ್ರತೆಯಲ್ಲೂ ಪ್ರಮುಖ‌ ಪಾತ್ರ ವಹಿಸುತ್ತಿದೆ. ಗಡಿಯಾಚೆಗಿನ ಸವಾಲುಗಳನ್ನು ಸಮರ್ಥವಾಗಿ ಎದುರಿಸುತ್ತಿದೆ. ಇಂಡೋ-ಪಾಕ್ ಯುದ್ಧವು ದೇಶದ ಮೂರೂ ಸೇನಾ ಪಡೆಗಳ ಕಾರ್ಯಕ್ಷಮತೆಗೆ ಸಾಕ್ಷಿ. 13 ದಿನಗಳ ಯುದ್ಧದಲ್ಲಿ ಅನೇಕ ಜನರು ಹುತಾತ್ಮರಾದರು. 90 ಸಾವಿರಕ್ಕೂ ಅಧಿಕ ಪಾಕಿಸ್ತಾನ ಸೈನಿಕರು ಶರಣಾದರು. ಈ ಯುದ್ಧ ಕಲೆಯು ಇಡೀ ಜಗತ್ತು ಭಾರತದ ಸೇನಾಶಕ್ತಿಯ ಕಡೆ ನೋಡುವಂತೆ ಆಯಿತು.

ಈ ಯುದ್ಧದ ಬಳಿಕ ಭಾರತ ಸೇನೆ ಮತ್ತಷ್ಟು ಬಲಿಷ್ಢವಾಗಿದೆ. ಪ್ರಸ್ತುತ ಸಮರಕಲೆಯಲ್ಲಿ ತಂತ್ರಜ್ಞಾಯಪ್ರಮುಖ ಪಾತ್ರ ವಹಿಸುತ್ತಿದೆ. ಭಾರತ ಕೂಡ ಬದಲಾಗುತ್ತಿರುವ ಸನ್ನಿವೇಶಕ್ಕೆ ತಕ್ಕಂತೆ ಬಲಿಷ್ಠಗೊಳ್ಳುತ್ತಿದೆ. ಪ್ರಧಾನಮಂತ್ರಿಗಳ ನೇತೃತ್ವದಲ್ಲಿ ಭಾರತೀಯ ಸೇನೆಯು ಗಡಿಯನ್ನು ಸುರಕ್ಷಿತವಾಗಿಸಿದೆ. ಇಂಡೋ-ಪಾಕ್ ಯುದ್ಧವು ಚರಿತ್ರೆಯಲ್ಲಿ ಭಾರತದ ಶಕ್ತಿಗೆ ಸ್ಥಾನ ಒದಗಿಸಿದೆ. ದೇಶವನ್ನು ಬಲಿಷ್ಠಗೊಳಿಸುವ ನಿಟ್ಟಿನಲ್ಲಿ ಇದು ನಮಗೆ ಮತ್ತಷ್ಟು ಸ್ಫೂರ್ತಿಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಇದೇ ಸಂದರ್ಭದಲ್ಲಿ ಇತ್ತೀಚೆಗೆ ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಸಿಡಿಎಸ್ ಬಿಪಿನ್ ರಾವುತ್ ಹಾಗೂ ಇತರ ಹನ್ನೆರಡು ಜನರಿಗೆ ಕೂಡ ಅವರು ನುಡಿ ನಮನ ಸಲ್ಲಿಸಿದರು. ಭಾರತ ಮಾತೆ ಸೇವೆ ಸಲ್ಲಿಸುವುದು ನಮ್ಮೆಲ್ಲರ ಕರ್ತವ್ಯ ನಾವು ಯಾವುದೇ ವೃತ್ತಿಯಲ್ಲಿ ಇದ್ದರೂ ದೇಶ ಸೇವೆಗೆ ಸಮರ್ಪಿಸಿಕೊಳ್ಳಬೇಕು.

ಶೌರ್ಯಪ್ರಶಸ್ತಿ ಅನುದಾನ ಹೆಚ್ಚಳ: ರಾಜ್ಯ ಸರಕಾರವು ಪರಮವೀರ ಚಕ್ರ, ಮಹಾವೀರಚಕ್ರ, ಅಶೋಕ ಚಕ್ರ ಸೇರಿದಂತೆ ವಿವಿಧ ಶೌರ್ಯ ಪ್ರಶಸ್ತಿ ವಿಜೇತರಿಗೆ ಒಂದು ಬಾರಿ ನೀಡಲಾಗುತ್ತಿರುವ ಅನುದಾನ ಮೊತ್ತವನ್ನು ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು.

ಅನುದಾನ ಮೊತ್ತವನ್ನು ಪರಮವೀರ ಚಕ್ರ ಪ್ರಶಸ್ತಿಗೆ 1.50 ಕೋಟಿ; ಮಹಾವೀರ ಚಕ್ರ 1 ಕೋಟಿ; ಅಶೋಕ ಚಕ್ರ1.50 ಕೋಟಿ, ಕೀರ್ತಿ ಚಕ್ರ 1 ಕೋಟಿ; ವೀರಚಕ್ರ ಹಾಗೂ ಶೌರ್ಯ ಚಕ್ರ 50 ಲಕ್ಷ ಹಾಗೂ ವಿವಿಧ ಸೇನಾ ಮೆಡಲ್ ಗಳಿಗೆ 15 ಲಕ್ಷ ರೂಪಾಯಿ ನಿಗದಿಪಡಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದರು.

ರಾಜ್ಯ ಸರಕಾರವು ಯಾವಾಗಲೂ ಸೈನಿಕರ ಕಲ್ಯಾಣಕ್ಕೆ ಆದ್ಯತೆ ನೀಡುತ್ತಿದೆ. ನಿವೃತ್ತ ಯೋಧರು ಹಾಗೂ ಹುತಾತ್ಮರ ಕುಟುಂಬದ ಸದಸ್ಯರ ಕ್ಷೇಮಾಭಿವೃದ್ಧಿ ಗೆ ಬದ್ಧವಾಗಿದೆ ಎಂದರು. ಕರ್ನಾಟಕ ಮತ್ತು ಕೇರಳ ಉಪ ಕ್ಷೇತ್ರದ ಜನರಲ್ ಕಮಾಂಡಿಂಗ್ ಆಫೀಸರ್ ಮೇಜರ್ ಜನರಲ್ ಜೆ.ವಿ.ಪ್ರಸಾದ್, ಡಿಜಿಪಿ ಪ್ರವೀಣ ಸೂದ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಕೂಡ ಯುದ್ಧ ಸ್ಮಾರಕಕ್ಕೆ ಮಾಲಾರ್ಒಣೆ ಮಾಡುವ ಮೂಲಕ ಹುತಾತ್ಮ ಯೋಧರಿಗೆ ಗೌರವ ಸಮರ್ಪಿಸಿದರು.

ಶಾಸಕ ಅನಿಲ್ ಬೆನಕೆ, ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಎಂ.ಎಲ್.ಐ.ಆರ್.ಸಿ. ಕಮಾಂಡಂಟ್ ಬ್ರಿಗೇಡಿಯರ್ ರೋಹಿತ್ ಚೌಧರಿ, ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್, ಹಿರಿಯ ಸೇನಾಧಿಕಾರಿಗಳು, ನಿವೃತ್ತ ಯೋಧರು, ಗಣ್ಯರು ಸೇರಿದಂತೆ ನೂರಾರು ಜನರು ವಿಜಯ ದಿವಸ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

14 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

24 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

24 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

24 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago