ಬಿಸಿ ಬಿಸಿ ಸುದ್ದಿ

ನಾಡೋಜ ಡಾ.ಮಹೇಶ ಜೋಶಿ ಅವರ ಕಾರ್ಯಕ್ಕೆ ಭಾಲ್ಕಿ ಶ್ರೀಗಳ ಹರ್ಷ

ಭಾಲ್ಕಿ: ಸಮಸ್ತ ಕನ್ನಡಿಗರ ಹೆಮ್ಮೆಯ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಧ್ಯಕ್ಷರಾಗಿ ಆಯ್ಕೆಯಾದ ನಂತರ ನಾಡೋಜ ಡಾ.ಮಹೇಶ ಜೋಶಿ ಅವರು ಗಡಿಭಾಗದ ಭಾಲ್ಕಿ ಹಿರೇಮಠಕ್ಕೆ ಭೇಟಿ ನೀಡಿದರು.

ಆ ಸಂದರ್ಭದಲ್ಲಿ ಹಿರೇಮಠ ಸಂಸ್ಥಾನದ ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಹಿರಿಯ ಗುರುಗಳಾದ ಲಿಂಗೈಕ್ಯ ಡಾ.ಚನ್ನಬಸವ ಪಟ್ಟದ್ದೇವರು ಕನ್ನಡ ನಾಡು-ನುಡಿ ರಕ್ಷಣೆಗಾಗಿ ಮಾಡಿರುವ ಹೋರಾಟದ ನೆನಪುಗಳನ್ನು ಬಿಚ್ಚಿಡುತ್ತಾ ಅವರ ಜಯಂತ್ಯೋತ್ಸವವನ್ನು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಆಚರಿಸಬೇಕೆಂದು ಜೋಶಿ ಅವರಿಗೆ ಮನವಿ ಮಾಡಿಕೊಂಡಿದ್ದರು. ಇದಕ್ಕೆ ಬೀದರ ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಸುರೇಶ ಚನ್ನಶೆಟ್ಟಿ ಅವರು ಅನುಮೋದಿಸಿದರು.

ಪೂಜ್ಯರ ಅಪ್ಪಣೆಯ ಮೇರೆಗೆ ಸನ್ಮಾನ್ಯ ಶ್ರೀ ಜೋಶಿ ಅವರು ಪ್ರತಿವರ್ಷ ಡಿಸೆಂಬರ್ ೨೨ ಕ್ಕೆ ಪೂಜ್ಯ ಶ್ರೀ ಡಾ.ಚನ್ನಬಸವ ಪಟ್ಟದ್ದೇವರ ಜಯಂತ್ಯೋತ್ಸವವನ್ನು ಪರಿಷತ್ತಿನ ಎಲ್ಲಾ ಜಿಲ್ಲಾ/ಗಡಿನಾಡು ಘಟಕಗಳಲ್ಲಿ ಆಚರಿಸಬೇಕೆಂದು  ಪ್ರಕಟಣೆ ಹೊಡಿಸಿರುವುದು ಕಲ್ಯಾಣ ಕರ್ನಾಟಕ ಭಾಗದ ಕನ್ನಡ ಮನಸ್ಸುಗಳಿಗೆ ಅಪಾರ ಸಂತೋಷವನ್ನುಂಟು ಮಾಡಿದೆ.

ಪೂಜ್ಯ ಶ್ರೀ ಡಾ.ಚನ್ನಬಸವ ಪಟ್ಟದ್ದೇವರು ಸ್ವಾತಂತ್ರ ಪೂರ್ವದಲ್ಲಿಯೇ ಗಡಿಭಾಗದಲ್ಲಿ ಕನ್ನಡದ ಡಿಂ.ಡಿಮ್ ಬಾರಿಸಿದ ಧೀಮಂತರು. ಉರ್ದು ಹಾಗೂ ಮರಾಠಿ ಭಾಷೆಯ ಪ್ರಾಬಲ್ಯದಲ್ಲಿಯೂ ಕನ್ನಡದ ಉಳಿವಿಗಾಗಿ ಹೊರಗೆ ಉರ್ದು ನಾಮಫಲಕ ಹಾಕಿ ಒಳಗಡೆ ಕನ್ನಡ ಕಲಿಸಿದವರು. ಜೀವನದುದ್ದಕ್ಕೂ ಕನ್ನಡತ್ವ ಹಾಗೂ ಬಸವತತ್ವ ಉಳಿಸಿ ಬೆಳೆಸಿದ ಕನ್ನಡದ ಪಟ್ಟದ್ದೇವರೆಂದೇ ಖ್ಯಾತರಾದವರು. ಅವರ ಜಯಂತ್ಯೋತ್ಸವವನ್ನು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಆಚರಿಸುವ ನಿರ್ಧಾರ ತೆಗೆದುಕೊಂಡ ನಾಡೋಜ ಡಾ.ಮಹೇಶ ಜೋಶಿ ಅವರಿಗೆ ಇಡೀ ಕಲ್ಯಾಣ ಕರ್ನಾಟಕದ ಜನತೆಯ ಪರವಾಗಿ ಭಾಲ್ಕಿ ಹಿರೇಮಠ ಸಂಸ್ಥಾನದ ಪೂಜ್ಯ ಶ್ರೀ ಡಾ.ಬಸವಲಿಂಗ ಪಟ್ಟದ್ದೇವರು ಹರ್ಷವನ್ನು ವ್ಯಕ್ತಪಡಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago