ಸುರಪುರ: ತಾಲೂಕಿನ ಆಲ್ದಾಳ ಗ್ರಾಮ ಪಂಚಾಯತಿಯನ್ನು ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಅವ್ಯವಹಾರ ನಡೆಸಲಾಗಿದೆ ಎಂದು ಆರೋಪಿಸಿ ಅಂಬೇಡ್ಕರ್ ಸೇನೆ ಸಂಘಟನೆಯಿಂದ ನಗರದ ತಾಲೂಕು ಪಂಚಾಯತಿ ಮುಂದೆ ಪ್ರತಿಭಟನೆ ನಡೆಸಲಾಗಿದೆ.
ಈ ಸಂದರ್ಭದಲ್ಲಿ ಅನೇಕ ಮುಖಂಡರು ಮಾತನಾಡಿ,ಆಲ್ದಾಳ ಗ್ರಾಮ ಪಂಚಾಯತಿಯಲ್ಲಿ ಉದ್ಯೋಗ ಖಾತ್ರಿ ಯೋಜನೆಯ ಜಾಬ್ ಕಾರ್ಡ್‌ಗಳನ್ನು ನಕಲಿ ತಯಾರಿಸಿ ಹಣ ಲಪುಟಾಯಿಸಲಾಗಿದೆ,ಇದಕ್ಕೆ ಅಲ್ಲಿಯ ಗ್ರಾಮ ಪಂಚಾಯತಿ ಅಭೀವೃಧ್ಧಿ ಅಧಿಕಾರಿ,ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಗು ಜೆ.ಇ ಮತ್ತು ಕಂಪ್ಯೂಟರ್ ಆಪರೇಟರ್ ಕಾರಣ ಆದ್ದರಿಂದ ನಕಲಿ ಜಾಬ್ ಕಾರ್ಡ್ ಸೃಷ್ಟಿ ಮತ್ತು ನಡೆದ ಅವ್ಯವಹಾರವನ್ನು ತನಿಖೆಗೊಳಪಡಿಸಿ ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಇಲ್ಲವಾದಲ್ಲಿ ಸೇನೆ ಉಗ್ರ ಪ್ರತಿಭಟನೆ ನಡೆಸಲಿದೆ ಎಂದು ಆಗ್ರಹಿಸಿದರು.
ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಮರೇಶ ಮೂಡಲದಿನ್ನಿ ಮನವಿಯನ್ನು ಸ್ವೀಕರಿಸಿ ಮಾತನಾಡಿ,ನಿಮ್ಮ ಮನವಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ನಿಲ್ಲಿಸಿದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾಧ್ಯಕ್ಷ ರಾಜು ಕಟ್ಟಿಮನಿ,ಮೂರ್ತಿ ಬೊಮ್ಮನಹಳ್ಳಿ,ರಮೇಜರಾಜಾ,ಮಂಜುನಾಥ ದೊಡ್ಮನಿ,ಜಾಕೀರ ಹುಸೇನ್,ದೇವರಾಜ ಕೊಂಬಿನ್,ನಿಂಗರಾಜ ಮಂಗಿಹಾಳ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…