ಪಂಚಮಸಾಲಿ 2ಎ ಮೀಸಲಾತಿ : ಬೆಳಗಾವಿಯಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದೇನು?

0
13

ಬೆಳಗಾವಿ: ಕಳೆದ ಮೂರ ತಿಂಗಳಿಂದ ತಣ್ಣಗಿದ್ದ 2ಎ ಮೀಸಲಾತಿ ಹೋರಾಟ ಬೆಳಗಾವಿ ಅಧಿವೇಶನ ನಡೆಯುವ ವೇಳೆ ಮತ್ತೆ ಮುನ್ನೆಲೆಗೆ ಬಂದಿದೆ. ಪಂಚಮಸಾಲಿ ಸಮುದಾಯಕ್ಕೆ ಸೆ.15ರೊಳಗೆ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಅ.1ರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು.

ಸಮಸ್ಯೆ ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆಯ ಬಳಿಕ 2ಎ ಮೀಸಲಾತಿ ಘೋಷಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಈಗ ಮೂರು ಬಹುತೇಕ ಮೂರು ತಿಂಗಳ ನಂತರವೂ ಸಿಎಂ ಅದನ್ನೇ ಪುನರುಚ್ಚರಿಸಿದ್ದಾರೆ.

Contact Your\'s Advertisement; 9902492681

ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.

ಕೂಡಲಸಂಗಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳು ಹಾಗೂ ಸಮಾಜದ ಶಾಸಕರೊಂದಿಗೆ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದರು.

ಮೀಸಲಾತಿ ನೀಡುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಂವಿಧಾನಾತ್ಮಕವಾಗಿ ಪರಿಶೀಲಿಸಲಾಗುವುದು. ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡಲಾಗಿದೆ. ವರದಿ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಲಾಗುವುದು. ಚುನಾವಣೆ ನೀತಿ ಸಂಹಿತೆ ಇದ್ದುದರಿಂದ ಎಲ್ಲೆಡೆಯಿಂದ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.

ಗೊಂಡ, ಟೋಕರಿ ಕೋಳಿ ಜಾತಿಗಳ ಸಿಂಧುತ್ವ ಸಮಸ್ಯೆ: ಎಸ್.ಟಿ ಟೋಕರಿ ಕೋಳಿ, ಎಸ್ಟಿ ಗೊಂಡ ಸೇರಿದಂತೆ ವಿವಿಧ ಜಾತಿಗಳ ಸಿಂಧುತ್ವ ಪ್ರಮಾಣವನ್ನು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ (ಜಾಗೃತಿ ಕೋಶ) ವರದಿ ಪಡೆದ ನಂತರವೇ ನೀಡಬೇಕೆಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಜಿಲ್ಲೆಯ ಗಣ್ಯರ ನೇತೃತ್ವದಲ್ಲಿ ಗೊಂಡ ಮತ್ತು ಟೋಕರಿ ಕೋಳಿ ಸಮಾಜದ ಮುಖಂಡರು ಸಿಎಂ ಬಸವರಾಜ ಬೊಮ್ಮಾಯಿರವರಿಗೆ ಮನವಿ ಸಲ್ಲಿಸಿದರು.

ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್, ವಿಧಾನ ಪರಿಷತ್ ಸದಸ್ಯರಾದ ರಘುನಾಥರಾವ್ ಮಲ್ಕಾಪುರೆ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳ ಮುಖಂಡತ್ವದಲ್ಲಿ ಗುರುವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಗೊಂಡ ಮತ್ತು ಟೋಕರಿ ಕೋಳಿ ಸಮಾಜದ ಮುಖಂಡರು, ರಾಜ್ಯದಲ್ಲಿ 51 ವಿವಿಧ ಬುಡಕಟ್ಟಿನ ಜಾತಿಗಳು ಪರಿಶಿಷ್ಟ ಪಂಗಡದಲ್ಲಿರುತ್ತವೆ.

ಆದರೆ ಕೇವಲ 12 ಜಾತಿಗಳಿಗೆ ಮಾತ್ರ ಸಿಂಧುತ್ವ ಪ್ರಮಾಣ ಪತ್ರ ಪಡೆಯಲು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ವರದಿ ಕಡ್ಡಾಯಗೊಳಿಸಿರುವುದರಿಂದ ಗೊಂಡ ಮತ್ತು ಟೋಕರಿ ಕೋಳಿ ಜಾತಿ ಜನಾಂಗಕ್ಕೆ ಅನ್ಯಾಯವಾಗುತ್ತಿದೆ. ಭಾರತ ಸಂವಿಧಾನದ ಪರಿಚ್ಛೇದ 15ರಲ್ಲಿ ಜಾತಿ, ಧರ್ಮ, ಹುಟ್ಟಿದ ಸ್ಥಳ ಮತ್ತು ಲಿಂಗ ಇವುಗಳಲ್ಲಿ ಯಾವುದೇ ತಾರತಮ್ಯ ಮಾಡಲು ಅವಕಾಶ ಇರುವುದಿಲ್ಲ. ಆದರೆ ಉಲ್ಲೇಖಿತ ಆದೇಶದಲ್ಲಿ 51 ಜಾತಿಗಳ ಪೈಕಿ ಕೇವಲ 12 ಜಾತಿಗಳಿಗೆ ಮಾತ್ರ ಸೀಮಿತಗೊಳಿಸಿ, ಸಿಂಧುತ್ವ ಪ್ರಮಾಣ ಪತ್ರಕ್ಕೆ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ವರದಿ ಕಡ್ಡಾಯಗೊಳಿಸಿ, ಸಂವಿಧಾನದ ಆಶಯಗಳಿಗೆ ಧಕ್ಕೆ ಉಂಟು ಮಾಡಲಾಗಿದೆ ಎಂದು ಮುಖ್ಯಮಂತ್ರಿ ಗಮನಕ್ಕೆ ತರಲಾಯಿತು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here