ಶಹಾಬಾದ: ವಿವಿಧ ವಿಷಯಗಳನ್ನು ಚರ್ಚಿಸಲು ನಗರದ ಮರಗೋಳ ಕಾಲೇಜಿನ ಬಳಿಯ ಭೀರಲಿಂಗೇಶ್ವರ ದೇವಸ್ಥಾನದಲ್ಲಿ ಡಿಸೆಂಬರ್ ೧೯ ರಂದು ಬೆಳಿಗ್ಗೆ ೧೧ ಗಂಟೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘದಿಂದ ಕುರುಬ ಸಮಾಜದ ಬಂಧುಗಳಿಗೆ ಸಭೆಯನ್ನು ಕರೆಯಲಾಗಿದೆ ಎಂದು ಕರ್ನಾಟಕ ಪ್ರದೇಶ ಕುರುಬರ ಸಂಘದ ತಾಲೂಕಾಧ್ಯಕ್ಷ ಮಲ್ಕಣ್ಣಾ ಮುದ್ದಾ ತಿಳಿಸಿದ್ದಾರೆ.
ಅವರು ಶುಕ್ರವಾರ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ, ತಾಲೂಕಿನಲ್ಲಿ ಕುರುಬ ಸಮಾಜದ ಸಮಾವೇಶ ಮಾಡಬೇಕೋ ಅಥವಾ ಕನಕದಾಸರ ಜಯಂತಿ ಮಾಡಬೇಕು ಎನ್ನುವ ವಿಚಾರ ಕುರಿತು ಚರ್ಚಿಸಲು ಸಭೆ ಕರೆಯಲಾಗಿದೆ.ಅಲ್ಲದೇ ತಾಲೂಕಿನಲ್ಲಿ ಕ್ರಾಂತಿವೀರ ಸಂಗೋಳಿ ರಾಯಣ್ಣ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುವುದು. ತಾಲೂಕಿನ ಕರ್ನಾಟಕ ಪ್ರದೇಶ ಕುರುಬರ ಸಂಘದ ಎಲ್ಲಾ ಗ್ರಾಮ ಘಟಕಗಳನ್ನು ಇದೇ ಸಂದರ್ಭದಲ್ಲಿ ಆಯ್ಕೆ ಮಾಡುವ ನಿಟ್ಟಿನಲ್ಲಿ ಸಭೆ ಕರೆಯಲಾಗಿದ್ದು ಕುರುಬ ಸಮಾಜದ ಬಂಧುಗಳು ಆಗಮಿಸಬೇಕಾಗಿ ಕೋರಲಾಗಿದೆ.
ಈ ಒಂದು ಸಭೆಗೆ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾಧ್ಯಕ್ಷ ತಿಪ್ಪಣ್ಣ ಬಳಬಟ್ಟಿ, ಸಂಗೋಳಿ ರಾಯಣ್ಣ ಜಿಲ್ಲಾಧ್ಯಕ್ಷ ಪರಮೇಶ್ವರ ಆಲಗೂಡ, ಕರ್ನಾಟಕ ಪ್ರದೇಶ ಕುರುಬರ ಸಂಘದ ಮಾಜಿ ಅಧ್ಯಕ್ಷ ದೇವೆಂದ್ರಪ್ಪ ಮರತೂರ, ಭಂಕೂರ ಜಿಪಂ ಮಾಜಿ ಸದಸ್ಯ ಮಲ್ಲಿಕಾರ್ಜುನ ಪೂಜಾರಿ, ಮರಲಿಂಗ ಕಮರಡಗಿ ಇತರರು ಆಗಮಿಸಲಿದ್ದಾರೆ ಎಂದು ತಿಳಿಸಿದರು.