ಬಿಸಿ ಬಿಸಿ ಸುದ್ದಿ

ಸಮುದಾಯ ಆರೋಗ್ಯ ಕೇಂದ್ರದ ವಾತಾವರಣ ಬದಲಾಗಬೇಕಿದೆ: ಸುರೇಶ ವರ್ಮಾ

ಶಹಾಬಾದ: ಖಾಸಗಿ ಆಸ್ಪತ್ರೆಗಳಿಗೂ ಕಡಿಮೆ ಇಲ್ಲವೆನ್ನುವ ರೀತಿಯಲ್ಲಿ ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದ ವಾತಾವರಣ ಬದಲಾಗಬೇಕಿದೆ ಎಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.

ಅವರು ಶುಕ್ರವಾರ ನಗರದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಆಸ್ಪತ್ರೆಯಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು.ಸರೊಯಾದ ಸಮಯಕ್ಕೆ ವೈದ್ಯರು ಸೇರಿದಂತೆ ಸಿಬ್ಬಂದಿ ವರ್ಗವದರು ಹಾಜರಾಗಬೇಕು. ಆಗ ಮಾತ್ರ ಸರಕಾರಿ ಆಸ್ಪತ್ರೆ ಜೀವಂತವಾಗಿಡುವಲ್ಲಿ ಸಾಧ್ಯ ಎಂದರು. ಜನರಿಗೆ ಗುಣಮಟ್ಟದ ಚಿಕಿತ್ಸೆ ನೀಡುವುದೂ ಸೇರಿದಂತೆ ಕೇವಲ ರೋಗಿಗಳನ್ನ? ಅಲ್ಲ ಚಿಕಿತ್ಸಾಲಯಗಳು ಕೂಡ ಜೀವಂತವಾಗಿರಬೇಕು. ವೈದ್ಯರ ಸಲಹೆಯಂತೆ ಆರೋಗ್ಯ ಕೇಂದ್ರದ ಆವರಣವನ್ನು ಸ್ವಚ್ಛವಾಗಿಡಲು ಕೆಕೆಆರ್‌ಡಿಬಿಯಿಂದ ಅನುದಾನ ನೀಡುವಂತೆ ಪತ್ರ ಬರೆಯಲಾಗುವುದು.ಅಲ್ಲದೇ ಆಸ್ಪತ್ರೆಗೆ ಬೇಕಾದ ಮೂಲ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ನಗರಸಭೆಯ ಅಧ್ಯಕ್ಷ ಅಂಜಲಿ ಗಿರೀಶ ಕಂಬಾನೂರ ಮಾತನಾಡಿ, ವೈದ್ಯೋ ನಾರಾಯಣೇ ಹರಿ ಎನ್ನುವ ಮಾತಿನಂತೆ ವೈದ್ಯರನ್ನು ದೇವರಿಗೆ ಹೋಲಿಕೆ ಮಾಡಲಾಗುತ್ತದೆ. ಸರ್ಕಾರಿ ಆಸ್ಪತ್ರೆಗಳಿಗೆ ಬರುವಂತಹ ಬಹುತೇಕರು ಬಡಕುಟುಂಬದ ಹಿನ್ನೆಲೆಯುಳ್ಳವರಾಗಿದ್ದು ಅಂತಹವರಿಗೆ ಸೂಕ್ತ ಚಿಕಿತ್ಸೆ ನೀಡುವ ವಿ?ಯದಲ್ಲಿ ಧನಾತ್ಮಕ ಚಿಂತನೆಗಳು ವೈದ್ಯರಿಂದಾಗಬೇಕಾಗಿದೆ ಎಂದರು.

ಸರ್ಕಾರಿ ಆಸ್ಪತ್ರೆಗಳಿಗೆ ಬರುವಂತಹ ಬಹುತೇಕ ರೋಗಿಗಳು ಹಣಕಾಸಿನ ತೊಂದರೆಯನ್ನು ಅನುಭವಿಸುವಂತಹವರೇ ಹೆಚ್ಚು ಆರ್ಥಿಕ ತೊಂದರೆಯಿಂದ ಬಳಲುವವರಿಗಾಗಿಯೇ ಸರ್ಕಾರಿ ಆಸ್ಪತ್ರೆಗಳು ಎನ್ನುವಂತಾಗಿದೆ. ಸರ್ಕಾರವೂ ಕೂಡ ಸಕಲ ರೀತಿಯ ಸೌಲಭ್ಯಗಳನ್ನು ಸರ್ಕಾರಿ ಆಸ್ಪತ್ರೆಗಳಿಗೆ ಒದಗಿಸಲಾಗುತ್ತಿದ್ದು ಅವುಗಳನ್ನು ರೋಗಿಗಳಿಗೆ ತಲುಪಿಸುವ ಕಾರ್ಯ ಎಲ್ಲ ವೈದ್ಯಕೀಯ ಸಿಬ್ಬಂದಿಯಿಂದಾಗಬೇಕಾಗಿದೆ ಎಂದರು.

ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಶೀದ್ ಮರ್ಚಂಟ್, ಬಿಜೆಪಿ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಮಾಜಿ ನಗರಸಭೆಯ ಅಧ್ಯಕ್ಷ ಗಿರೀಶ ಕಂಬಾನೂರ, ವೈದ್ಯಾಧಿಕಾರಿ ಮಹ್ಮದುಬ್ದುಲ್ ರಹೀಮ್, ನಗರಸಭೆಯ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕುಮಾರ ಚವ್ಹಾಣ, ಶರಣಬಸಪ್ಪ ಪಗಲಾಪೂರ,ನಗರಸಭೆಯ ಸದಸ್ಯರಾದ ಡಾ.ಅಹ್ಮದ್ ಪಟೇಲ್, ರವಿ ರಾಠೋಡ, ಸಿದ್ರಾಮ ಕುಸಾಳೆ ಸೇರಿದಂತೆ ಆಸ್ಪತ್ರೆಯ ಸಿಬ್ಬಂದಿ ವರ್ಗದವರು ಇದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

17 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago