ಕಲಬುರಗಿ: ಬೆಳಗಾವಿಯ ಆನಗೋಳದಲ್ಲಿ ಪ್ರತಿಷ್ಠಾಪಿಸಿದ್ದ ರಾಷ್ಟ್ರಭಕ್ತ, ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ನವರ ಪ್ರತಿಮೆಯನ್ನು ಭಗ್ನಗೊಳಿಸಿ, ವಿಕೃತಿ ಮೆರೆದಿರುವ ಘಟನೆ ಸಹಿಸಲಾಗದು ಎಂದು ಕಲಬುರಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷರೂ ಆದ,ಬಿಜೆಪಿ ಎಸ್ ಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಅಂಬಾರಾಯ ಅಷ್ಠಗಿ ಯವರು ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ನವರ ಬಲಗೈ ಬಂಟನಾಗಿ, ಬ್ರಿಟಿಷರ ಪಾಲಿಗೆ ಸಿಂಹಸ್ವಪ್ನವಾಗಿದ್ದ, ಕೆಚ್ಚೆದೆಯ ಸ್ವಾತಂತ್ರ್ಯ ಹೋರಾಟಗಾರ, ನಾಡಿನ ಹೆಮ್ಮೆಯ ಪುತ್ರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರ ಗೌರವಕ್ಕೆ ಚ್ಯುತಿ ತರುವ ಇಂತಹ ಹೀನ ಕೃತ್ಯ ಶಿಕ್ಷಾರ್ಹ ಅಪರಾಧವಾಗಿದೆ.
ತಿಳಕವಾಡಿ ಪೋಲಿಸರು ಈಗಾಗಲೇ ಪ್ರಕರಣ ಕೈಗೆತ್ತಿಕೊಂಡಿದ್ದು, ಸೂಕ್ತ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಅಂಬಾರಾಯ ಅಷ್ಠಗಿ ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…