ಹಾವೇರಿ: ಐಎಂಸಿ ಕೇಂದ್ರ ತಂಡವು ಜಿಲ್ಲೆಯಲ್ಲಿ ಶನಿವಾರ ಪ್ರವಾಸ ಕೈಗೊಂಡು 2021-22ನೇ ಸಾಲಿನ ನವೆಂಬರ್ ತಿಂಗಳಲ್ಲಿ ಸತತ ಮಳೆಯಿಂದ ಹಾನಿಯಾದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿತು.
ಕೇಂದ್ರ ತಂಡವು ಬೆಳಿಗ್ಗೆ 9.40ರಿಂದ ಶಿಗ್ಗಾವಿ ತಾಲ್ಲೂಕಿನ ಕುನ್ನೂರು, ದುಂಡಸಿ, ಅರಟಾಳ, ಹೊಸೂರು ಗ್ರಾಮಗಳ ಪ್ರದೇಶಕ್ಕೆ ಭೇಟಿ ನೀಡಿ, ನೆರೆ ಸಂತ್ರಸ್ತರ ಅಹವಾಲು ಆಲಿಸಿತು.
ನಂತರ ಬೆಳಿಗ್ಗೆ 10.30ಕ್ಕೆ ಶಿಗ್ಗಾವಿಯಲ್ಲಿ ತಹಶೀಲ್ದಾರ್ ಕಚೇರಿಯಲ್ಲಿ ಪವರ್ ಪಾಯಿಂಟ್ ಪ್ರಸೆಂಟೇಶನ್ ವೀಕ್ಷಣೆ ಮಾಡಿತು. ಮಧ್ಯಾಹ್ನ 12.30ಕ್ಕೆ ಸವಣೂರು ತಾಲ್ಲೂಕಿನ ಹೊಸಮನ್ನಂಗಿ, ಹಳೇಮನ್ನಂಗಿ ಪ್ರದೇಶಗಳಿಗೆ ಭೇಟಿ ನೀಡಲಿದೆ. ಮಧ್ಯಾಹ್ನ 1.45ಕ್ಕೆ ಹಾವೇರಿಗೆ ಆಗಮಿಸುವರು. ಮಧ್ಯಾಹ್ನ 3.45ಕ್ಕೆ ಹಿರೇಕೆರೂರು ತಾಲ್ಲೂಕಿನ ಚನ್ನಹಳ್ಳಿ, ದಂಡಿಗಿಹಳ್ಳಿ ಹಾಗೂ ರಾಣೆಬೆನ್ನೂರು ಪ್ರದೇಶಗಳಿಗೆ ಅಧಿಕಾರಿಗಳು ಭೇಟಿ ನೀಡಲಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…