ಸುರಪುರ: ನಗರದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ರಿಟೇಲ್ ಹಬ್ಬ ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಭಾಗವಹಿಸಿದ್ದ ಪ್ರಾದೇಶಿಕ ವ್ಯವಸ್ಥಾಪಕ ಹನುಮಂತಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,ಕರ್ನಾಟಕ ಗ್ರಾಮೀಣ ಬ್ಯಾಂಕ್ ಮೂಲಕ ಗ್ರಾಹಕರಿಗೆ ಲಾಭದಾಯಕವಾದ ಯೋಜನೆಯನ್ನು ಜಾರಿಗೊಳಿಸಲಾಗಿದ್ದು ಗ್ರಾಹಕರು ಇದರ ಸದುಪಯೋಗ ಮಾಡಿಕೊಳ್ಳಬೇಕು ಎಂದು ತಿಳಿಸಿದರು.ಗೃಹ ಸಾಲ ಮತ್ತು ಕಾರ್ ಸಾಲದ ಬಡ್ಡಿದರದಲ್ಲಿ ಭಾರಿ ಕಡಿತ ಮಾಡಲಾಗಿದೆ.ಬಡ್ಡಿ ದರದಲ್ಲಿ ಶೇ ೫೦ ರಷ್ಟು ಕಡಿತಗೊಳಿಸಿದ್ದು ಗ್ರಾಹಕರು ಸಾಲದ ಮೇಲಿನ ಬಡ್ಡಿ ಕಡಿತದ ಲಾಭ ಪಡೆದುಕೊಳ್ಳುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದ ಶಾಖೆಯ ವ್ಯವಸ್ಥಾಪಕ ಪಿ.ಸಿ ಚವಾಣ್ ಮಾತನಾಡಿ,ಗ್ರಾಹಕರಿಗಾಗಿ ನಮ್ಮ ಕರ್ನಾಟಕ ಗ್ರಾಮೀಣ ಬ್ಯಾಂಕ್ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತದೆ ಗ್ರಾಹಕರು ಈ ಯೋಜನೆಗಳ ಲಾಭ ಪಡೆದುಕೊಳ್ಳಬೇಕೆಂದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸುರೇಶ ತಂಬಾಕೆ,ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಡಿ.ಜಿ ಸಾಗರ ಬಣದ ಜಿಲ್ಲಾ ಸಂಘಟನಾ ಸಂಚಾಲಕ ಶಿವಲಿಂಗ ಹಸನಾಪುರ ಹಾಗು ಬ್ಯಾಂಕಿನ ಎಲ್ಲಾ ಸಿಬ್ಬಂದಿಗಳು ಮತ್ತು ಅನೇಕ ಜನ ಗ್ರಾಹಕರು ಭಾಗವಹಿಸಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…