ಶಹಾಬಾದ:ವಿಧಾನಸಭೆ ಅಧಿವೇಶನದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿರುವ ಮಾಜಿ ಸಭಾಪತಿ ರಮೇಶಕುಮಾರ ಅವರನ್ನು ಪಕ್ಷದಿಂದಲೇ ವಜಾಗೊಳಿಸಬೇಕೆಂದು ಆಗ್ರಹಿಸಿ ಶನಿವಾರ ಬಿಜೆಪಿ ಮಹಿಳಾ ಮೋರ್ಚಾದಿಂದ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮೋರ್ಚಾ ಜಿಲ್ಲಾಧ್ಯಕ್ಷ ಭಾಗಿರಥಿ ಗುನ್ನಾಪೂರ ಮತ್ತು ನಗರಾಧ್ಯಕ್ಷೆ ಜಯಶ್ರೀ ಸೂಡಿ ನೇತೃತ್ವದಲ್ಲಿ ನಗರದ ನೆಹರು ವೃತ್ತದಲ್ಲಿ ಪ್ರತಿಭಟನೆ ನಡೆಸಿ ಘೋಷಣೆ ಕೂಗಲಾಯಿತು.ನಂತರ ತಹಸೀಲ್ದಾರ ಸುರೇಶ ವರ್ಮಾ ಅವರಿಗೆ ಮನವಿ ಮತ್ರ ಸಲ್ಲಿಸಲಾಯಿತು.
ರಮೇಶಕುಮಾರ ಹೇಳಿಕೆ ನೀಡುವ ಮೂಲಕ ಇಡೀ ಮಹಿಳಾ ಸಮಾಜಕ್ಕೆ ಅವಮಾನಿಸಿದ್ದಾರೆ.ಒಬ್ಬ ಹಿರಿಯ ಮುತ್ಸದಿ ರಾಜಕಾರಣಿಯಾಗಿ ರೇಪಗೆ ಸಂಬಂಧಿಸಿದಂತೆ, ತಲನಾತ್ಮಕವಾಗಿ ಆಡಿರುವ ಮಾತುಗಳಿಂದ ಪ್ರಜ್ಞಾವಂತ ಸಮಾಜ ತಲೆ ತಗ್ಗಿಸುವಂತೆ ನಡೆದುಕೊಂಡಿದ್ದಾರೆ ಎಂದು ಕಿಡಿಕಾರಿದರು. ಹೇಳಿಕೆ ಹೇಳಿ ಕ್ಷಮೆಯಾಚನೆ ಮಾಡಿದ್ದಾರೆ.ಆದರೆ ಇಂತಹ ಹೇಳಿಕೆ ಹೇಳುವುದು ನಾಚಿಕೆಗೇಡಿನ ಸಂಗತಿ.ಅವರನ್ನು ಪಕ್ಷದಿಂದಲೇ ವಜಾಗೊಳಿಸಬೇಕೆಂದು ಒತ್ತಾಯಿಸಿದರು.
ಆರಿತಿ,ಸುನೀತಾ,ಸಂತೋಷಿ,ಸರಸ್ವತಿ, ಶ್ರೀದೇವಿ, ಮಂಜುಳಾ,ಮೆಹಬೂಬೆ,ಲಾಲಬಿ,ಸಯ್ಯದಾ ಬಿ, ಲಕ್ಷ್ಮಿಬಾಯಿ,ಶೋಭಾ, ಮಹಾದೇವಿ, ಬಸಮ್ಮ,ನಾದಾ,ಜಯಶ್ರೀ.ಜಿ, ಗಂಗಮ್ಮ,ಮಹಾಂತಮ್ಮ,ಅನುಪಮಾ,ಪ್ರಗತಿ,ಜಗದೇವಿ,ಪ್ರೇಮಾ,ಭದ್ರಸೇನಾ,ಯಾಸ್ಮಿನ್, ಕನಕಪ್ಪ ದಂಡಗುಲಕರ್,ದಿನೇಶ ಗೌಳಿ, ವಿರೇಶ ಬಂದಳ್ಳಿ, ದೇವೆಂದ್ರಪ್ಪ ಯಲಗೋಡಕರ್,ಸದಾನಂದ ಕುಂಬಾರ,ಸುಭಾಷ ಜಾಪೂರ,ಬಸವರಾಜ ಬಿರಾದಾರ, ಶಿವಾಜಿ,ಸಂಜಯ ವಿಟಕರ್,ಜಗದೀಶ ಪಾಟೀಲ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…