ಬಿಸಿ ಬಿಸಿ ಸುದ್ದಿ

ಸಂಗೊಳ್ಳಿ ರಾಯಣ್ಣನ ಪ್ರತಿಮೆಗೆ ಅವಮಾನ : ಐತಿಹಾಸಿಕ ಪ್ರಮಾಧ

  • ಕುಶಲ

ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಮತ್ತು ಬೆಳಗಾವಿ ಜಿಲ್ಲೆಯಲ್ಲಿ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿರೂಪಗೊಳಿಸಿದ ಪ್ರಕರಣಗಳ ಸಂಬಂಧ ಬೆಳಗಾವಿಯಲ್ಲಿ ಹಿಂಸಾಚಾರವಾಗಿದೆ. ಅದರಲ್ಲೂ ಸದ್ಯ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು ಈ ಸಂದರ್ಭದಲ್ಲೇ ಹಿಂಸಾಚಾರವಾಗಿರುವುದು ಉದ್ದೇಶ ಪೂರ್ವಕ ಕೃತ್ಯದಂತೆ ಕಂಡುಬರುತ್ತಿದೆ.

ಕನ್ನಡ ಅಸ್ಮಿತೆ ವಿಚಾರದಲ್ಲಿ ಯಾವುದೇ ಸರಕಾರಗಳು ನಿರ್ಲಕ್ಷ್ಯ ವಹಿಸುವುದು ತಪ್ಪು. ಅದರಲ್ಲೂ ಮಹಾರಾಷ್ಟ್ರದಲ್ಲಿ ಕನ್ನಡ ಧ್ವಜಕ್ಕೆ ಅಲ್ಲಿನ ದುಷ್ಕರ್ಮಿಗಳು ಬೆಂಕಿ ಹಚ್ಚಿದಾಗಲೇ ರಾಜ್ಯ ಸರಕಾರ ಎಚ್ಚೆತ್ತುಕೊಳ್ಳಬೇಕಿತ್ತು. ಜತೆಗೆ, ಮಹಾರಾಷ್ಟ್ರ ಸರಕಾರದ ಜತೆ ಮಾತನಾಡಿ, ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ದುಷ್ಕರ್ಮಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ಒತ್ತಾಯಿಸಬಹುದಿತ್ತು. ಆದರೆ ಕನ್ನಡ ಧ್ವಜಕ್ಕೆ ಬೆಂಕಿ ಇಟ್ಟ ಪ್ರಕರಣ ಸಂಬಂಧ ಸರಕಾರದ ಕಡೆಯಿಂದ ತೀಕ್ಷ್ಣ ಪ್ರತಿಕ್ರಿಯೆ ವ್ಯಕ್ತವಾಗಲಿಲ್ಲ. ಇದು ಎಲ್ಲೋ ಒಂದು ಕಡೆಯಲ್ಲಿ ಕನ್ನಡಿಗರ ಕೋಪಕ್ಕೂ ಕಾರಣವಾಗಿತ್ತು.

ಈ ವಿಚಾರ ಸಂಬಂಧ ಸೇಡು ತೀರಿಸಿಕೊಳ್ಳುವ ಉದ್ದೇಶದಿಂದಲೇ ಬೆಂಗಳೂರಿನಲ್ಲಿ ಛತ್ರಪತಿ ಶಿವಾಜಿ ಪ್ರತಿಮೆಗೆ ಮಸಿ ಬಳಿಯಲಾಗಿದೆ. ಸದ್ಯ ಈ ಪ್ರಕರಣದಲ್ಲಿ ಏಳು ಮಂದಿಯನ್ನು ಬಂಧಿಸಿದ್ದು, ಇವರು ಕನ್ನಡ ಧ್ವಜಕ್ಕೆ ಅವಮಾನ ಮಾಡಿದ್ದರಿಂದಲೇ ಈ ಕೃತ್ಯ ಎಸಗಿದ್ದಾಗಿ ಪ್ರಾಥಮಿಕ ಮೂಲಗಳು ಹೇಳಿವೆ. ಅಂದರೆ, ಸರಕಾರ ಏನೂ ಕ್ರಮ ಕೈಗೊಳ್ಳಲಿಲ್ಲ ಎಂಬ ಕಾರಣಕ್ಕಾಗಿ ಇವರು ಈ ಕೃತ್ಯಕ್ಕೆ ಮುಂದಾಗಿರುವುದು ಸತ್ಯ. ಒಂದು ವೇಳೆ ಸರಕಾರವೇ ಧ್ವಜ ಸುಟ್ಟವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಬಗ್ಗೆ ಮಾತನಾಡಿದ್ದರೆ, ಕನ್ನಡಿಗರು ಸಂಯಮದಿಂದ ಇರುತ್ತಿದ್ದರು.

ಇನ್ನು ಬೆಳಗಾವಿಯಲ್ಲಿ ಎಂಇಎಸ್‌ ಮತ್ತು ಶಿವಸೇನೆ ಪುಂಡರ ಹಾವಳಿಯೂ ಹೆಚ್ಚಾಗಿದೆ. ಇದರ ಪರಿಣಾಮವೇ ಬೆಳಗಾವಿ ಜಿಲ್ಲೆಯ ಅನಗೋಳದ ಕನಕದಾಸ ಕಾಲನಿಯಲ್ಲಿದ್ದ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ವಿರೂಪ ಮಾಡಿದ್ದಾರೆ. ಕನ್ನಡ ನೆಲದಲ್ಲೇ ಇಂಥ ಬೆಳವಣಿಗೆಗಳು ಆಗಬಾರದಿತ್ತು. ಆದರೂ, ಸಮಾಜದಲ್ಲಿ ಅಶಾಂತಿ ಉಂಟು ಮಾಡಲೇಬೇಕು ಎಂಬ ಉದ್ದೇಶದಿಂದಲೇ ಈ ಕೆಲಸ ಮಾಡಿರುವುದು ಸ್ಪಷ್ಟವಾಗಿದೆ.

ನಾಡು-ನುಡಿ ಎಂಬ ಭಾವನಾತ್ಮಕ ವಿಚಾರ ಬಂದಾಗ ಅದು ಯಾವುದೇ ಸರಕಾರವಿರಲಿ, ಗಟ್ಟಿ ನಿರ್ಧಾರವನ್ನೇ ತೆಗೆದುಕೊಳ್ಳಬೇಕು. ಇಲ್ಲಿ ರಾಜಕೀಯಕ್ಕಿಂತ ಹೆಚ್ಚಾಗಿ, ಭಾವನಾತ್ಮಕ ವಿಚಾರಗಳಿಗೆ ಹೆಚ್ಚಿನ ಗಮನ ನೀಡಬೇಕು. ಸಂಗೊಳ್ಳಿ ರಾಯಣ್ಣನ ವಿಚಾರವಾಗಲಿ ಅಥವಾ ಛತ್ರಪತಿ ಶಿವಾಜಿಯಾಗಲಿ, ಈ ಇಬ್ಬರ ವಿಚಾರದಲ್ಲೂ ಸರಕಾರ ದೃಢ ನಿರ್ಧಾರವನ್ನೇ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ, ಜನ ಸಾಮರಸ್ಯದಲ್ಲಿ ಜೀವನ ಮಾಡಲು ಸಾಧ್ಯವಾಗುವುದಿಲ್ಲ.

ಅಲ್ಲದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಹೇಳಿದ ಹಾಗೆ, ದೇಶಕ್ಕಾಗಿ ಹೋರಾಟ ಮಾಡಿದವರಿಗೆ ಅವಮಾನ ಸಲ್ಲದು. ದೇಶ ಎಂಬ ವಿಚಾರ ಬಂದಾಗ, ಕಿತ್ತೂರ ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ, ಛತ್ರಪತಿ ಶಿವಾಜಿಗೆ ತಮ್ಮದೇ ಆದ ಮಹತ್ವದ ಸ್ಥಾನವಿದೆ. ಇವರಿಗೆ ಅವಮಾನ ಮಾಡುವ ಸಂಗತಿ ನಾಗರಿಕ ಸಮಾಜ ಒಪ್ಪುವಂಥದ್ದಲ್ಲ.

emedialine

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

8 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

8 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

8 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago