ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣದ ಸಂಬಂಧ ವಿಚಾರಣೆಗೆ ಹಾಜರಾಗದೆ ತಪ್ಪಿಸಿಕೊಂಡು ಮಾಜಿ ಗೃಹ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಶಾಸಕ ಆರ್.ರೋಷನ್ ಬೇಗ್ ಅವರನ್ನು ಎಸ್‌ಐಟಿ ವಶಕ್ಕೆ ತೆಗೆದುಕೊಂಡಿದ್ದು, ಮಂಗಳವಾರ ಅಧಿಕೃತವಾಗಿ ಬಂಧನ ಪ್ರಕ್ರಿಯೆ ಪೂರ್ಣಗೊಳಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಸೋಮವಾರ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ವಿಶೇಷ ವಿಮಾನದ ಮೂಲಕ ಮುಂಬೈಗೆ ಪಯಣಿಸಲು ರೋಷನ್ ಬೇಗ್ ಸಜ್ಜಾಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಎಸ್.ಐ.ಟಿ ತಂಡ, ಡಿಸಿಪಿ ಎಸ್.ಗಿರೀಶ್ ನೇತೃತ್ವದದಲ್ಲಿ ಕಾರ್ಯಾಚರಣೆ ನಡೆಸಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ ಎನ್ನಲಾಗಿದೆ.
ಇದರೊಂದಿಗೆ ಬಹುಕೋಟಿ ವಂಚನೆ ಪ್ರಕರಣದಲ್ಲಿ ಸರ್ಕಾರಿ ಅಧಿಕಾರಿಗಳ ಬಳಿಕ ಪೊಲೀಸರ ಬಲೆಗೆ ಬಿದ್ದ ಮೊದಲ ರಾಜಕಾರಣಿ ರೋಷನ್ ಬೇಗ್ ಆಗಿದ್ದಾರೆ.