ಬಿಸಿ ಬಿಸಿ ಸುದ್ದಿ

ಸದನದಲ್ಲಿ ಇಂದು ರಾಯಣ್ಣ ಕಾವು

ಬೆಳಗಾವಿ: ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದು ಮತ್ತು ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿರುವ ಘಟನೆಯಿಂದ ‘ಕುಂದಾ ನಗರಿ’ ಬೂದಿ ಮುಚ್ಚಿದ ಕೆಂಡದಂತಾಗಿದ್ದು, ಸೋಮವಾರ ವಿಧಾನಮಂಡಲದ ಉಭಯ ಸದನಗಳಲ್ಲೂ ಈ ವಿಷಯ ಭಾರಿ ವಾಕ್ಸಮರಕ್ಕೆ ಕಾರಣವಾಗುವ ನಿರೀಕ್ಷೆಯಿದೆ.

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನಿಭಾಯಿಸುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗಿದೆ. ಎಂಇಎಸ್ ಅನ್ನು ಮಟ್ಟ ಹಾಕಬೇಕು ಮತ್ತು ಗೃಹ ಸಚಿವರು ರಾಜೀನಾಮೆ ನೀಡಬೇಕು’ ಎಂದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರದ ಮೇಲೆ ಪ್ರಹಾರ ನಡೆಸಲು ‘ಅಸ್ತ್ರ’ಗಳನ್ನು ಹರಿತ ಮಾಡಿಕೊಂಡಿವೆ.

ಇತ್ತ ಬೆಳಗಾವಿ ನಗರದಲ್ಲಿ ಉದ್ವಿಗ್ನ ಪರಿಸ್ಥಿತಿ ಮುಂದುವರೆದಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ನಿಷೇಧಾಜ್ಞೆ ಮುಂದುವರಿದಿದೆ.

ಬೆಳಗಾವಿಯಲ್ಲಿ ಎಂಇಎಸ್ ಮುಖಂಡ ದೀಪಕ್‌ ದಳವಿ ಮುಖಕ್ಕೆ ಮಸಿ ಎರಚಿದ ಬಳಿಕ ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಕನ್ನಡ ಬಾವುಟ ಸುಟ್ಟು ಹಾಕಲಾಗಿತ್ತು. ಇದನ್ನು ಜೆಡಿಎಸ್‌ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿತ್ತು. ಅದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದರು. ಇದಕ್ಕೆ ಪ್ರತೀಕಾರವೆಂಬಂತೆ ಕಿಡಿಗೇಡಿಗಳು ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ವಿರೂಪಗೊಳಿಸಿದರು. ಬೆಂಗಳೂರಿನಿಂದ ಬಂದಿರುವ ಸರ್ಕಾರಿ ವಾಹನಗಳ ಮೇಲೆ ಎಂಇಎಸ್‌ ಕಾರ್ಯಕರ್ತರು ದಾಳಿ ನಡೆಸಿದ ಪ್ರಕರಣಗಳು ನಡೆದಿವೆ. ಈ ಘಟನೆಗಳಿಂದ ಬೆಳಗಾವಿಯಲ್ಲಿ ಆತಂಕ ನೆಲೆಸಿದೆ.

ಈ ಮಧ್ಯೆ ಕೆಲವು ಕನ್ನಡ ಪರ ಸಂಘಟನೆಗಳು ಪ್ರತಿಭಟನೆಗಾಗಿ ಬೆಂಗಳೂರಿನಿಂದ ವಾಹನಗಳಲ್ಲಿ ಬೆಳಗಾವಿಯತ್ತ ಹೊರಟಿರುವುದು ಪೊಲೀಸರಿಗೆ ತಲೆನೋವು ತಂದಿದೆ.

ಮಹಾರಾಷ್ಟ್ರ ಮತ್ತು ಎಂಇಎಸ್‌ನ ಕಿಡಿಗೇಡಿಗಳ ವರ್ತನೆಗಳ ಬಗ್ಗೆ ಜೆಡಿಎಸ್‌ ದೊಡ್ಡ ಮಟ್ಟದಲ್ಲಿ ಪ್ರಸ್ತಾಪಿಸಲಿದೆ. ಮತ್ತೊಂದೆಡೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಮತ್ತು ವಿಧಾನಪರಿಷತ್‌ ಸದಸ್ಯ ಆರ್‌.ಶಂಕರ್ ಅವರ ವಿರುದ್ಧ ಭೂಕಬಳಿಕೆ ಆರೋಪದ ವಿಷಯವನ್ನು ಮುಂದಿಟ್ಟುಕೊಂಡು ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಬೆನ್ನಲ್ಲೇ, ಬೆಳಗಾವಿ ಘಟನೆ ಮುನ್ನೆಲೆಗೆ ಬಂದಿದೆ.

ಶುಕ್ರವಾರ ಎರಡೂ ಸದನಗಳಲ್ಲಿ ಬೈರತಿ ವಿಷಯವಾಗಿ ಕಾಂಗ್ರೆಸ್‌ ಧರಣಿ ನಡೆಸಿ, ರಾಜೀನಾಮೆಗೆ ಆಗ್ರಹಿಸಿತ್ತು. ಸೋಮವಾರವೂ ಪಟ್ಟು ಮುಂದುವರೆಸಲು ತೀರ್ಮಾನಿಸಿತ್ತು. ಅಲ್ಲದೆ, ಶೇ 40 ಕಮಿಷನ್‌ ಮತ್ತು ಬಿಟ್‌ ಕಾಯಿನ್‌ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಗೆ ಆಗ್ರಹಿಸುವ ಕಾಂಗ್ರೆಸ್‌ನ ಕಾರ್ಯತಂತ್ರ ಯಾವ ತಿರುವು ಪಡೆಯಲಿದೆ ಎಂಬ ಕುತೂಹಲವೂ ಇದೆ.

ಕಾಂಗ್ರೆಸ್‌ ನಾಯಕರು ಎಂಇಎಸ್‌ ಮತ್ತು ಶಿವಸೇನೆಗಳ ಕಿಡಿಗೇಡಿ ವರ್ತನೆಯ ವಿಷಯವನ್ನು ಯಾವ ರೀತಿ ಪ್ರಸ್ತಾಪಿಸಲಿದ್ದಾರೆ ಮತ್ತು ಎಷ್ಟು ಮಹತ್ವ ನೀಡಲಿದ್ದಾರೆ ಎಂಬುದು ಸೋಮವಾರ ನಡೆಯುವ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನವಾಗಲಿದೆ.

ಮಹಾರಾಷ್ಟ್ರದಲ್ಲಿ ಶಿವಸೇವೆ ನೇತೃತ್ವದ ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್‌ ಭಾಗಿಯಾಗಿದೆ. ಮಹಾರಾಷ್ಟ್ರದ ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಬೆಳಗಾವಿಯ ಎಂಇಎಸ್‌ಗೆ ಬಹಿರಂಗವಾಗಿ ಬೆಂಬಲ ನೀಡಿದ್ದಾರೆ. ಇದು ಕಾಂಗ್ರೆಸ್‌ಗೆ ನುಂಗಲಾರದ ತುತ್ತಾಗಿದೆ.

ಎಂಇಎಸ್‌ ನಡೆಸುತ್ತಿರುವ ಕೃತ್ಯಗಳ ಬಗ್ಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದು, ಸೋಮವಾರ ಸದನಕ್ಕೆ ಹಾಜರಾಗಿ ವಿಷಯ ಪ್ರಸ್ತಾಪಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಈ ಮಧ್ಯೆ ಮತಾಂತರ ನಿಷೇಧ ಮಸೂದೆಯನ್ನು ಮಂಡಿಸುವ ಸಂಬಂಧ ಸೋಮವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ಪಡೆಯಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ಎಲ್ಲ ಶಾಸಕರು ಕಡ್ಡಾಯವಾಗಿ ಹಾಜರಿರುವಂತೆ ವಿಪ್‌ ಹೊರಡಿಸಲೂ ಪಕ್ಷ ತೀರ್ಮಾನಿಸಿದೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

19 mins ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

10 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

10 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

10 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago