ಎಂಇಎಸ್ ನಿಷೇಧಿಸುವಂತೆ ಸೋಪಿಸಾಬ್ ಆಗ್ರಹ

0
37

ರಾಮನಗರ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ದುಷ್ಕರ್ಮಿಗಳು ವಿಕೃತಗೊಳಿಸಿರುವ ಮತ್ತು ಸರಕಾರಿ ವಾಹನಗಳನ್ನು ಜಖಂ ಮಾಡಿರುವ ಘಟನೆ ನಾಗರಿಕ ಸಮಾಜ ತಲೆತಗ್ಗಿಸುವಂತಹದ್ದು ಎಂದು ಕರ್ನಾಟಕ ಪಿಂಜಾರ ನದಾಫ ಹಿತರಕ್ಷಣಾ ಸಮಿತಿ ರಾಜ್ಯ ಕಾರ್ಯಾಧ್ಯಕ್ಷ ಸೋಪಿಸಾಬ ಡಿ ಸುರಪುರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪ್ರತಿಮ ದೇಶಭಕ್ತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ವೀರಮರಣವನ್ನಪ್ಪಿ ದೇಶಕ್ಕೆ ತಮ್ಮನ್ನು ತಾವು ಸಮರ್ಪಣೆ ಮಾಡಿಕೊಂಡ ವೀರಯೋಧ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿರುವುದು ನಾಡಿನ‌ ಸ್ವಾಭಿಮಾನಿ ಸ್ವಾತಂತ್ರ್ಯ ಸೇನಾನಿಗೆ ಮಾಡಿದ ಅಪಮಾನವೆಂದು ತಿಳಿಸಿದ್ದಾರೆ.

Contact Your\'s Advertisement; 9902492681

ಈ‌ ಕೃತ್ಯಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮವನ್ನು ಸರ್ಕಾರ ತೆಗೆದುಕೊಳ್ಳಬೇಕು. ಕರ್ನಾಟಕದ‌ ಜನತೆ ಸಹನಾ ಪ್ರಿಯರೆಂದು ಎಂಇಎಸ್ ಪುಂಡರು ಮೇಲಿಂದ ಮೇಲೆ ಇಂತಹ ದುಂಡಾವರ್ತನೆ ಮಾಡುತ್ತಾ ಬರುತ್ತಿದ್ದು, ಸರ್ಕಾರ ಈ ವಿಷಯದಲ್ಲಿ ಸಹನೆಯಿಂದ ವರ್ತಿಸದೆ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಬೇಕೆಂದು ಆಗ್ರಹಿಸಿದ್ದಾರೆ.

ಈ ವಿಷಯದಲ್ಲಿ ರಾಜಕೀಯ ಮಾಡದೇ ಕನ್ನಡಿಗರ ಕರ್ನಾಟಕದ ಸ್ವಾಭಿಮಾನವನ್ನು ಉಳಿಸಲು ಮುಂದಾಗಬೇಕು. ರಾಜ್ಯ ಸರ್ಕಾರ ಯಾವುದೇ ಧರ್ಮ, ಜಾತಿ ಎಂದು ವಿಂಗಡಣೆ ಮಾಡದೇ ರಾಜ್ಯದಲ್ಲಿ ಎಂಇಎಸ್ ಅನ್ನು ನಿಷೇಧ ಮಾಡಬೇಕೆಂದು ಹೇಳಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here