ಸುರಪುರ: ಪದೆ ಪದೆ ಕನ್ನಡ ವಿರೋಧಿ ಚಟುವಟಿಕೆಗಳನ್ನು ನಡೆಸುವ ಮೂಲಕ ನಾಡದ್ರೋಹಿಗಳಾಗಿರುವ ಎಮ್‌ಇಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ರಾಜ್ಯದಲ್ಲಿ ಬ್ಯಾನ್ ಮಾಡಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಕನ್ನಡಿಗರ ಸಾರಥ್ಯದಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಶಿವಮೋನಯ್ಯ ಎಲ್.ಡಿ ನಾಯಕ ಒತ್ತಾಯಿಸಿದರು.
ವೇದಿಕೆಯಿಂದ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ ಮಾತನಾಡಿ,ಕೊಲ್ಲಾಪುರದಲ್ಲಿ ಕನ್ನಡ ಧ್ವಜವನ್ನು ಸುಟ್ಟಿರುವುದು, ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಧ್ವಂಸಗೊಳಿಸಿರುವುದು ಮತ್ತು ಕರ್ನಾಟಕದ ಸಾರಿಗೆ ಬಸ್‌ಗಳ ಮೇಲೆ ಕಲ್ಲು ಎಸೆದಿರುವ ಗೂಂಡಾಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಜೊತೆಗೆ ಈ ಸಂಘಟನೆಗಳು ರಾಜ್ಯದಲ್ಲಿ ಬ್ಯಾನ್ ಮಾಡುವ ಜೊತೆಗೆ ಇದರ ಮುಖಂಡರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು ಇಲ್ಲದಿದ್ದಲ್ಲಿ ಸಂಘಟನೆಯಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿ ನಂತರ ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಸೀಲ್ ಸಿರಸ್ತೆದಾರ ಮೂಲಕ ಸಲ್ಲಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆ ತಾಲೂಕು ಉಪಾಧ್ಯಕ್ಷ ರಾಮನಗೌಡ ಮಾಲಿ ಪಾಟೀಲ, ತಿಮ್ಮನಗೌಡ ಪೊಲೀಸ್ ಪಾಟೀಲ್ ಮಾಳಪ್ಪ ಕಿರದಳ್ಳಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದ್ದರಿಂದ ಕೆಲಕಾಲ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ಪರದಡುವಂತಾಗಿತ್ತು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…