ಶಹಾಬಾದ: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಸಿಡಿಪಿಓ ಕಚೇರಿಯ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದರು.
ರಾಜ್ಯದಲ್ಲಿ ಮಹಿಳೆಯರ ಮತ್ತು ಮಕ್ಕಳ ಸರ್ವತೋಮುಖ ಅಭಿವೃದ್ಧಿಗಾಗಿ ಅಂಗನವಾಡಿ ನೌಕರರು ಸದಾಕಾಲ ದುಡಿಯುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ತಮ್ಮ ಜೀವನ ಹಂಗು ತೊರೆದು ಶ್ರಮಿಸಿದ್ದಾರೆ.ಅದರಲ್ಲಿ ೫೯ ಜನರು ಸಾವನಪ್ಪಿದ್ದಾರೆ. ಕೆಲವು ಕುಟುಂಬಗಳಲ್ಲಿ ಒಬ್ಬಂಟಿಯಾಗಿದ್ದಾರೆ.ಅಲ್ಲದೇ ಮೇಲಿಂದ ಮೇಲೆ ನಾನಾ ರೀತಿಯ ಯೋಜನೆಗಳಲ್ಲಿ ಅಂಗನವಾಡಿ ನೌಕರರನ್ನು ಬಳಸಿಕೊಳ್ಳುತ್ತಿದ್ದರೂ ಅವರಿಗೆ ಸಿಗಬೇಕಾದ ಸೌಲಭ್ಯಗಳು ಮಾತ್ರ ದಕ್ಕುತ್ತಿಲಜ್ಯೀ ಬಗ್ಗೆ ನಿವೃತ್ತಿಯಾದವರಿಗೆ ಇಡಗಂಟು ನೀಡಿಲ್ಲ.
ಈ ಬಗ್ಗೆ ಹಲವಾರು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.ಆದ್ದರಿಂದ ಜನೇವರಿ ೧೦ ರಂದು ಅಂಗನವಾಡಿ ಕೇಂದ್ರಗಳನ್ನು ಬಂದ್ ಮಾಡಿ ಮುಖ್ಯಮಂತ್ರಿ ಮನೆಗೆ ಚಲೋ ಹೋರಾಟ ನಡೆಸುತ್ತಿದ್ದೆವೆ ಎಂದರು.ಅಲ್ಲದೇ ವಿವಿಧ ಬೇಡಿಕೆಗಳಾದ ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ-ಯುಕೆಜಿ ಶಿಕ್ಷಣ ನೀಡಬೇಕು.ಅಂಗನವಾಡಿ ಕೇಂದ್ರಗಳು ಆಕರ್ಷಿಸುವ ಕೇಂದ್ರಗಳಾಗಬೇಕು.ನೌಕರರನ್ನು ಐಸಿಡಿಎಸ್‌ನ ೫ ಉದ್ದೇಶಗಳಿಗೆ ಬಿಟ್ಟು ಉಳಿದ ಕೆಲಸಗಳಿಗೆ ನಿರ್ಬಂಧಿಸಿ ಶಾಲಾ ಪೂರ್ವ ಶಿಕ್ಷಣಕ್ಕೆ ಒತ್ತು ನೀಡಬೇಕು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಫಾರಸ್ಸು ಮಾಡಿರುವ ೩೩೯.೪೮ ಲಕ್ಷ ಅನುದಾನ ಬಿಡುಗಡೆ ಮಾಡಬೇಕು.ಕನಿಷ್ಠ ವೇತನ ಜಾರಿ ಮಾಡಬೇಕು.ಅಂಗನವಾಡಿ ನೌಕರರನ್ನು ಖಾಯಂ ಆಗುವ ತನಕ ೨೬ ಸಾವಿರ ವೇತನ ನೀಡಬೇಕು.ಬಜೆಟ್‌ನಲ್ಲಿ ಕಡಿತವಾಗಿರುವ ೮೪೫೨.೩೮ ಕೋಟಿ ಹಣ ವಾಪಸ್ ನೀಡಬೇಕು.ಕೊರೊನಾ ಸಂದರ್ಭದಲ್ಲಿ ನಿಧನರಾದ ಕುಟುಂಬದವರಿಗೆ ಮಗಳು ಇಲ್ಲದಿದ್ದಾಗ ಸೊಸೆಗೆ ಅವರ ಹುದ್ದೆ ನೀಡಬೇಕು.ಈಗಾಗಲೇ ಸರಕಾರಿ ಶಾಲೆಯಲ್ಲಿ ಪ್ರಾರಂಭವಾಗುತ್ತಿರುವ ಮತ್ತು ಪ್ರಾರಂಭವಾಗಿರುವ ಎಲ್‌ಕೆಜಿ-ಯುಕೆಜಿಯನ್ನು ನಿಲ್ಲಿಸಬೇಕು.ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರನ್ನು ನೀಡಬೇಕೆಂದು ಆಗ್ರಹಿಸಿದರು.ನಂತರ ಸಿಡಿಪಿಓ ಬಸವರಾಜ ಹೊಸಮನಿ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಅಂಗನವಾಡಿ ನೌಕರರ ಸಂಘದ ತಾಲೂಕಾಧ್ಯಕ್ಷ ರುದ್ರಮ್ಮ ಕಟ್ಟಿಮನಿ, ಪ್ರಧಾನ ಕಾರ್ಯದರ್ಶಿ ಶೇಖಮ್ಮ ಕುರಿ, ಬಸಮ್ಮ ನಾಲವಾರ,ಪದ್ಮಾ ಶಹಾಬಾದ,ಧಾನಮ್ಮ ಪೇಠಸಿರೂರ,ಪಾರ್ವತಿ ಕಟ್ಟಿಮನಿ,ಮಲ್ಲಮ್ಮ ಮರತೂರಕರ್ ಸೇರಿದಂತೆ ಅನೇಕ ಅಂಗನವಾಡಿ ಕಾರ್ಯಕರ್ತರು ಹಾಜರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…