ಕಲಬುರಗಿ: ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ಹಲಸಿ ಗ್ರಾಮದಲ್ಲಿ ಬಸವಣ್ಣನವರ ಭಾವಚಿತ್ರಕ್ಕೆ ಮಸಿ ಬಳೆದು ಅಪಮಾನ ಮಾಡಿರುವ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ ಶಿಕ್ಷಿಸಬೇಕು ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಯುವ ಘಟಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತ್ ರೆಡ್ಡಿ ಪೆಟ್ ಸಿರೂರ್ ಆಗ್ರಹಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ಅವರು, ಇತ್ತಿಚಿನ ದಿನಮಾನಗಳಲ್ಲಿ ಇಂತಹ ಘಟನೆಗಳು ಹೆಚ್ಚಾಗುತ್ತಿದ್ದು, ಸಮಾಜದ ಶಾಂತಿ ಕದಡುವ ಕೆಲಸ ವಾಗುತ್ತಿದೆ ಈ ನಿಟ್ಟಿನಲ್ಲಿ ಸರ್ಕಾರ ಸೂಕ್ತ ಹಾಗೂ ಸಮೊರ್ಪಕ ನಿಲುವು ತಳೆಯಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಮಹಾಪುರುಷರು, ಸಮಾಜ ಸುಧಾರಕರು, ಸ್ವಾತಂತ್ರö್ಯ ಹೋರಾಟಗಾರರು ಹಾಗೂ ಸಮಾಜಕ್ಕೆ ಕೊಡುಗೆ ನೀಡಿದ ಮಾಹ ಪುರುಷರ ಪುತ್ಥಳಿಗಳಿಗೆ ಅವಮಾನ ಘಟನೆಗಳಿಂದ ಪ್ರಜ್ಞಾವಂತರು ತಲೆತಗ್ಗಿಸುವಂತಾಗಿದೆ. ಈ ಘಟನೆಗಳಿಂದ ಸಮಾಜದಲ್ಲಿ ಪುಂಡರು, ಲಂಪಟರು ಹೆಚ್ಚಾಗುತ್ತಿದ್ದಾರೆ ಎಂಬ ಸಂದೇಶ ಹೊರಹೋಗುತ್ತಿದ್ದು ರಾಜ್ಯದ ಭವ್ಯ ಪರಂಪರೆ ಹಾಗೂ ಇತಿಹಾಸದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಸರಿಯಾದುದಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆದ್ದರಿಂದ ಸರ್ಕಾರ ಈ ಸಮಸ್ಯೆಗೆ ಸಮರ್ಪಕ ಪರಿಹಾರ ಕಂಡುಕೊಳ್ಳಲು ಚಿಂತಕರ, ಧಾರ್ಮಿಕ ಮುಖಂಡರ ಹಾಗೂ ಖ್ಯಾತ ಸಾಹಿತಿಗಳ ಸಮಿತಿ ರಚಿಸಬೇಕು ಮತ್ತು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…