ಬೆಳಗಾವಿ: ವಿವಿಧ ಕುಡಿಯುವ ನೀರಿನ ಯೋಜನೆಗಳು ಮತ್ತು ನೀರಾವರಿ ಯೋಜನೆಗಳಿಗೆ ₹1,332.21 ಕೋಟಿ ಅನುದಾನ ಒದಗಿಸಲು ಸೋಮವಾರ ಇಲ್ಲಿ ನಡೆದ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ.
ಜಲ್ ಜೀವನ್ ಮಿಷನ್ ಯೋಜನೆಯಡಿ ಹಾವೇರಿ ಜಿಲ್ಲೆಯ ಸವಣೂರು, ಶಿಗ್ಗಾವಿ, ಹಾನಗಲ್ ಮತ್ತು ಹಾವೇರಿ ತಾಲ್ಲೂಕಿನ 285 ಗ್ರಾಮಗಳ (291 ಜನವಸತಿಗಳಿಗೆ), ಬಹುಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಯನ್ನು ₹645 ಕೋಟಿ ಅಂದಾಜು ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು ಎಂದು ಮೂಲಗಳು ತಿಳಿಸಿತೀರ್ಮಾನಗಳು ಆಲಮಟ್ಟಿ ಎಡದಂಡೆ ಕಾಲುವೆ ಕಿ.ಮೀ 0.00 ರಿಂದ 68.24 ವರೆಗಿನ (ಬಾಕಿ ಉಳಿದ) ಕಾಲುವೆ ಜಾಲದ ಹಾಗೂ ವಿತರಣಾ ಕಾಲುವೆಗಳ ಸ್ಟ್ರಕ್ಚರ್ ಒಳಗೊಂಡಂತೆ ಆಧುನೀಕರಣ ಕಾಮಗಾರಿಗಳನ್ನು ₹75,41 ಕೋಟಿ ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ ನೀಡಲಾಯಿತು.
ಕಲಬುರಗಿ ಜಿಲ್ಲೆ ಸೇಡಂ ತಾಲ್ಲೂಕಿನ ಕಾಗಿಣಾ ನದಿಯಿಂದ ನೀರನ್ನೆತ್ತಿ 3,150 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸುವ ₹143.80 ಕೋಟಿಗಳ ಯಡ್ಡಳ್ಳಿ ಏತ ನೀರಾವರಿ ಹಾಗೂ ತೆರ್ನಳ್ಳಿ ಏತ ನೀರಾವರಿ ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ.
ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಜಾರಿಗೊಳಿಸುತ್ತಿರುವ ಸುರಪುರ, ಶಹಾಪುರ ಮತ್ತು ತಾವರೆಗೇರಾ ಪಟ್ಟಣಗಳ ಕುಡಿಯುವ ನೀರು ಸರಬರಾಜು ಯೋಜನೆಗಳ ಒಟ್ಟಾರೆ ₹381.87 ಕೋಟಿಗಳ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ.
ಪ್ರಮುಖ ತೀರ್ಮಾನಗಳು :ಬೆಂಗಳೂರು ವಿಶ್ವವಿದ್ಯಾಲಯದ ವಿಶ್ವೇಶ್ವರಯ್ಯ ಎಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕಲ್ ವಿಭಾಗದ ಹೊಸ ಕಟ್ಟಡ ನಿರ್ಮಾಣಕ್ಕೆ ₹85 ಕೋಟಿ.
* ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ಮತ್ತು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿಗಳ ಹಣಕಾಸಿನ ಸ್ಥಿತಿಗತಿ ಸುಧಾರಣೆಗಾಗಿ ಸಾಲದ ಪುನರ್ ರಚನೆ ಮತ್ತು ರಾಜ್ಯ ಸರ್ಕಾರದಿಂದ ಇವೆರಡೂ ಕಂಪನಿಗಳಿಗೆ ಬಡ್ಡಿ ರಹಿತ ಸಾಲಗಳನ್ನು ಷೇರು ಬಂಡವಾಳವಾಗಿ ಪರಿವರ್ತಿಸಲು ಒಪ್ಪಿಗೆ.
* ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆಗೆ ಹೆಚ್ಚುವರಿಯಾಗಿ ₹50 ಕೋಟಿ ಷೇರು ಬಂಡವಾಳ ಬಿಡುಗಡೆಗೆ ಅನುಮತಿ.
* ಕೃತಕ ಬುದ್ಧಿಮತ್ತೆ, ಯಾಂತ್ರೀಕೃತ ಕಲಿಕೆ, ವಿದ್ಯುತ್ ಚಾಲಿತ ವಾಹನಗಳು, ವೈದ್ಯ ತಂತ್ರಜ್ಞಾನ ವಲಯಗಳ ನಾವೀನ್ಯತೆ ಮತ್ತು ತೀವ್ರ ತಾಂತ್ರಿಕ ನವೋದ್ಯಮ ಕಂಪನಿಗಳನ್ನು ಬೆಂಬಲಿಸಲು ₹100 ಕೋಟಿ ಬಂಡವಾಳ ನಿಧಿ ಸ್ಥಾಪಿಸಲು ಒಪ್ಪಿಗೆ.
* ಕೊಡಗು ಜಿಲ್ಲೆಯ ಕುಶಾಲನಗರ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಒಪ್ಪಿಗೆ.
ಕೆಪಿಎಸ್‌ಸಿ ಮಸೂದೆ ಮುಂದಕ್ಕೆ :ಕೆಪಿಎಸ್‌ಸಿ 2011 ನೇ ಬ್ಯಾಚ್‌ನ 362 ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ ರಕ್ಷಣೆಗಾಗಿ ತಿದ್ದುಪಡಿ ಮಸೂದೆಯ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದರೂ, ಯಾವುದೇ ತೀರ್ಮಾನ ತೆಗೆದುಕೊಳ್ಳಲಿಲ್ಲ. ಇದನ್ನು ಮುಂದಿನ ಸಂಪುಟ ಸಭೆಯಲ್ಲಿ ಪರಿಶೀಲಿಸಲು ತೀರ್ಮಾನಿಸಲಾಯಿತು ಎಂದು ಮೂಲಗಳು ಹೇಳಿವೆ.
ಕಾನೂನಿನ ಕೆಲವು ಅಂಶಗಳ ಬಗ್ಗೆ ಇನ್ನಷ್ಟು ವಿಸ್ತೃತ ಚರ್ಚೆಯ ಅಗತ್ಯವಿದೆ ಎಂಬ ಸಲಹೆ ಸಭೆಯಲ್ಲಿ ಕೇಳಿ ಬಂದಿತು. ಇದರಿಂದಾಗಿ ಮಸೂದೆಯು ಮುಂದಿನ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.
ಧಾರವಾಡ-ಬೆಳಗಾವಿ ರೈಲು ಮಾರ್ಗಕ್ಕೆ ₹927 ಕೋಟಿ :ಧಾರವಾಡ- ಕಿತ್ತೂರು- ಬೆಳಗಾವಿ ನೂತನ ರೈಲು ಮಾರ್ಗ ನಿರ್ಮಾಣಕ್ಕಾಗಿ ₹927.40 ಕೋಟಿ ಮೊತ್ತದ ಯೋಜನೆಗೆ ಸಚಿವ ಸಂಪುಟ ಆಡಳಿತಾತ್ಮಕ ಅನುಮೋದನೆ ನೀಡಿದೆ.
2021-22 ನೇ ಸಾಲಿನ ಐಇಬಿಆರ್ ಅಡಿ ಕರ್ನಾಟಕ ನೀರಾವರಿ ನಿಗಮಕ್ಕೆ ಅವಧಿ ಸಾಲಗಳ ಮೂಲಕ ₹650 ಕೋಟಿ, ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ₹250 ಕೋಟಿ, ಕಾವೇರಿ ನೀರಾವರಿ ನಿಗಮಕ್ಕೆ ₹250 ಕೋಟಿ ಮತ್ತು ಕೃಷ್ಣಾ ಭಾಗ್ಯ ಜಲ ನಿಗಮಕ್ಕೆ ₹500 ಕೋಟಿ ಹಣ ಸಂಗ್ರಹಿಸಲು ಮತ್ತು ಸರ್ಕಾರಿ ಖಾತರಿಗೂ ಒಪ್ಪಿಗೆ ನೀಡಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…