ಜುಲೈ 20 ರಂದು ಪತ್ರಿಕಾ ದಿನಾಚರಣೆ

2
126

ಶಹಾಪುರ: ಶಹಾಪುರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜುಲೈ 20 ರಂದು ಬೆಳಿಗ್ಗೆ 10:30 ಕ್ಕೆ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಜಯಾ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ನಾರಾಯಣಾಚಾಯ೯ ಸಗರ ಪ್ರಕಟಣೆಗೆ ತಿಳಿಸಿದ್ದಾರೆ.

ಈ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಶ್ರೀ ವೇದಮೂರ್ತಿ ಬಸವಯ್ಯ ಶರಣರು ಶ್ರೀ ಚರಬಸವೇಶ್ವರ ಸಂಸ್ಥಾನ ಗದ್ದುಗೆ ವಹಿಸಿಕೊಳ್ಳಲಿದ್ದು, ಜನಪ್ರಿಯ ಶಾಸಕರಾದ ಶರಣಬಸಪ್ಪಗೌಡ ದರ್ಶನಾಪುರ ಉದ್ಘಾಟಿಸಲಿದ್ದಾರೆ.ಏಕದಂಡಿಗಿ ಮಠದ ಅಜೇಂದ್ರ ಮಹಾಸ್ವಾಮಿಗಳು ಉಪನ್ಯಾಸ ನೀಡಲಿದ್ದು,ಮುಖ್ಯ ಅತಿಥಿಗಳಾಗಿ ಚಂದ್ರಶೇಖರ ಸಾಹು ಆರಬೋಳ, ಪತ್ರಕರ್ತರ ಸಂಘದ ರಾಜ್ಯ ಕಾರ್ಯದರ್ಶಿಗಳಾದ ಸಂಜೀವರಾವ್ ಕುಲಕರ್ಣಿ, ಪತ್ರಕರ್ತರ ಸಂಘದ ಯಾದಗಿರಿ ಜಿಲ್ಲಾಧ್ಯಕ್ಷರಾದ ಶ್ರೀ ಬಿ.ಎಂ. ಜಗದೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

Contact Your\'s Advertisement; 9902492681

ಈ ಸಮಾರಂಭದಲ್ಲಿ ಸಮಾಜದ ವಿವಿಧ ರಂಗಗಳಲ್ಲಿ ಸಾಧನೆ ಮಾಡಿದ ಸಾಧಕರಿಗೆ ಗುರುತಿಸಿ ಗೌರವಿಸಿ ಸನ್ಮಾನಿಸಲಿದ್ದು ಈ ಸಂದರ್ಭದಲ್ಲಿ ಪತ್ರಿಕಾ ವಿತರಕರನ್ನು ಕೂಡ ಸನ್ಮಾನಿಸಿದ್ದೇವೆ ಎಂದು ತಿಳಿಸಿದ್ದಾರೆ.

2 ಕಾಮೆಂಟ್ಗಳನ್ನು

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here