ಸುರಪುರ: ಗೃಹ ರಕ್ಷಕದಳದ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತರ ಒಕ್ಕೂಟದಿಂದ ಪ್ರತಿಭಟನೆ ನಡೆಸಲಾಗಿದೆ.ನಗರದ ಸರ್ದಾರ ವಲ್ಲಭಬಾಯಿ ಪಟೇಲ್ ವೃತ್ತದ ಬಳಿಯಲ್ಲಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ವೆಂಕೋಬ ದೊರೆ ಬೊಮ್ಮನಹಳ್ಳಿ ಮಾತನಾಡಿ,ಗೃಹ ರಕ್ಷಕದಳದ ಸಿಬ್ಬಂದಿಯವರು ಹಗಲಿರಳು ಸೇವೆ ಸಲ್ಲಿಸುತ್ತಾರೆ.ಅಲ್ಲದೆ ಕೊರೊನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ತಮ್ಮ ಸೇವೆ ನೀಡಿದ್ದಾರೆ.ಆದರೆ ಗೃಹ ರಕ್ಷಕರಿಗೆ ಯಾವುದೇ ಸಾಮಾಜಿಕ ಭದ್ರತೆ ಎಂಬುದು ಇಲ್ಲವಾಗಿದೆ.ಕೇವಲ ದಿನಗೂಲಿ ಕೆಲಸಗಾರರಂತೆ ಅವರ ಸೇವೆಯನ್ನು ಪಡೆದುಕೊಂಡು ಅವರಿಗೆ ಯಾವುದೇ ಸೌಲಭ್ಯಗಳನ್ನು ನೀಡದೆ ವಂಚಿಸಲಾಗುತ್ತಿದೆ.
ಆದ್ದರಿಂದ ಕೂಡಲೇ ಗೃಹ ರಕ್ಷಕದಳದ ಸಿಬ್ಬಂದಿಯನ್ನು ಪೊಲೀಸರಂತೆ ಖಾಯಂ ನೇಮಕ ಮಾಡಿಕೊಳ್ಳಬೇಕು.ಪೊಲೀಸರಿಗೆ ದೊರೆಯುವ ಸೌಲಭ್ಯಗಳನ್ನು ಇವರಿಗೂ ನೀಡಬೇಕು ಮತ್ತು ಮಾಸಿಕ ವ್ಯವಸ್ಥೆಯನ್ನು ಜಾರಿಗೊಳಿಸಬೇಕು ಇಲ್ಲವಾದಲ್ಲಿ ಒಕ್ಕೂಟದಿಂದ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.
ನಂತರ ಗೃಹಸಚಿವರಿಗೆ ಬರೆದ ಮನವಿಯನ್ನು ತಹಸೀಲ್ ಕಚೇರಿ ಸಿಬ್ಬಂದಿಗಳ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಒಕ್ಕೂಟದ ರಾಜ್ಯ ಉಪಾಧ್ಯಕ್ಷ ನಾಗಣ್ಣ ಕಲ್ಲದೇವನಹಳ್ಳಿ,ಜಿಲ್ಲಾ ಕಾರ್ಯದರ್ಶಿ ರಾಜು ದರಬಾರಿ,ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶಿವಶಂಕರ ಹೊಸ್ಮನಿ,ರೈತ ಘಟಕದ ಅಧ್ಯಕ್ಷ ಗೋಪಾಲ ಬಾಗಲಕೋಟೆ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…