ಪಾಲಿಕೆ ಆಯುಕ್ತರ ಮತ್ತು ಪುರಸಭೆಯ ಸಿಬ್ಬಂದಿಯ ಹಲ್ಲೆಗೆ ಖಂಡನೆ

0
273

ಶಹಾಬಾದ:ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಹಾಗೂ ಚಿತ್ತಾಪೂರ ಪುರಸಭೆಯ ಕಂದಾಯ ನಿರೀಕ್ಷಕ ರಾಹುಲ ಕಾಂಬಳೆ ಮೇಲೆ ಹಲ್ಲೆಯನ್ನು ಕರ್ನಾಟಕ ರಾಜ್ಯ ಪೌರ ಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಮುತ್ತಣ್ಣ ಭಂಡಾರಿ ತೀವ್ರವಾಗಿ ಖಂಡಿಸಿದ್ದಾರೆ.

ಅವರು ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರು ಜಿಲ್ಲೆಯಲ್ಲಿ ಪ್ರಾಮಾಣಿಕ ಕರ್ತವ್ಯದ ಮೂಲಕವೇ ತಮ್ಮನ್ನು ವಿಶಿಷ್ಟವಾಗಿ ಗುರುತಿಸಿಕೊಂಡಿದ್ದಾರೆ.ಇಂತಹ ಅಧಿಕಾರಿ ಮೇಲೆ ವಿನಾಕಾರಣ ಮಾರಾಣಾಂತಿಕ ಹಲ್ಲೆ ನಡೆಸಿ ಅಧಿಕಾರಿಗಳಲ್ಲಿ ಭಯದ ವಾತಾವರಣ ಸೃಷ್ಟಸಲಾಗುತ್ತಿದೆ ಎಂದು ದೂರಿದರು.

Contact Your\'s Advertisement; 9902492681

ಅಲ್ಲದೇ ಚಿತ್ತಾಪೂರ ಪುರಸಭೆಯ ಕಂದಾಯ ನಿರೀಕ್ಷಕ ರಾಹುಲ ಕಾಂಬಳೆ ಮೇಲೆ ವಿನಾಕಾರಣ ಹಲ್ಲೆ ನಡೆಸಲಾಗಿದೆ.ಒಂದು ವೇಳೆ ಸಿಬ್ಬಂದಿಯ ಬಗ್ಗೆ ದೂರು ಇದ್ದರೇ ಮೇಲಾಧಿಕಾರಿಗಳ ಗಮನಕ್ಕೆ ತರಬೇಕು.ಅದನ್ನು ಬಿಟ್ಟು ಹಲ್ಲೆ ಮಾಡುವುದು ಅಪರಾಧ. ಭವಿಷ್ಯದಲ್ಲಿ ಇಂಥ ಘಟನೆಗಳು ನಡೆಯದಂತೆ ನೌಕರರಿಗೆ ಸೇವಾ ಭದ್ರತೆ ನೀಡಬೇಕು.

ಕರ್ತವ್ಯ ನಿರ್ವಹಣೆಯಲ್ಲಿ ಅಡ್ಡಿಪಡಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.ಒಂದು ವೇಳೆ ತಪ್ಪಿತಸ್ಥರನ್ನು ಬಂಧಿಸದಿದ್ದಲ್ಲಿ ಹಂತ ಹಂತವಾಗಿ ರಾಜ್ಯಾದಾದ್ಯಂತ ಉಗ್ರ ಹೋರಾಟ ಕೈಗೊಳ್ಳಲಾಗುವುದೆಂದು ಎಚ್ಚರಿಕೆ ನೀಡಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here