ಬಿಸಿ ಬಿಸಿ ಸುದ್ದಿ

ಪುಣೆ ಮೀರುಸುವಂತೆ ಬೆಳಗಾವಿ ಅಭಿವೃದ್ಧಿ : ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ

ಬೆಳಗಾವಿ: ‘ಕರ್ನಾಟಕದ ಮಕುಟಮಣಿಯಂತಿರುವ ಬೆಳಗಾವಿಯನ್ನು ಮಹಾರಾಷ್ಟ್ರದ ಪುಣೆಯನ್ನೂ ಮೀರಿಸುವಂತಹ ಶೈಕ್ಷಣಿಕ ಮತ್ತು ಸಾಂಸ್ಕೃತಿಯ ನಗರವನ್ನಾಗಿ ಬೆಳೆಸಬೇಕು ಎನ್ನುವುದು ನಮ್ಮ ಹೊಂಗನಸಾಗಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು.

ಇಲ್ಲಿನ ತಿಲಕವಾಡಿಯಲ್ಲಿರುವ ಜಿಎಸ್‌ಎಸ್‌ ವಿಜ್ಞಾನ ಕಾಲೇಜಿನಲ್ಲಿ ನೂತನವಾಗಿ ಆರಂಭಿಸಲಾಗುತ್ತಿರುವ ಭೌತವಿಜ್ಞಾನ ಮತ್ತು ಪ್ರಾಣಿವಿಜ್ಞಾನ ಸ್ನಾತಕೋತ್ತರ ಕೋರ್ಸ್‌ಗಳನ್ನು ಮಂಗಳವಾರ ಉದ್ಘಾಟಿಸಿ ಅವರು ಮಾತನಾಡಿದರು.

‘ಬೆಳಗಾವಿಯ ಇಂದಿನ ಬೆಳವಣಿಗೆಗೆ ಇಲ್ಲಿರುವ ಅತ್ಯುತ್ತಮ ಶಿಕ್ಷಣ ಸಂಸ್ಥೆಗಳೇ ಕಾರಣವಾಗಿವೆ. ಇದನ್ನು ಜಾಗತಿಕ ಗುಣಮಟ್ಟದೊಂದಿಗೆ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯಲಾಗುವುದು. ಈ ನಗರವು ನಾವೀನ್ಯತೆ, ಆವಿಷ್ಕಾರ ಮತ್ತು ತಂತ್ರಜ್ಞಾನಗಳಿಗೆ ಪರ್ಯಾಯ ಹೆಸರಾಗುವಂತೆ ಬೆಳೆಸಲಾಗುವುದು’ ಎಂದು ನುಡಿದರು.

‘ಉತ್ತಮ ಶಿಕ್ಷಣದಿಂದ ಮಾತ್ರ ಪರಿವರ್ತನೆಯ ಗಾಳಿ ಬೀಸುವಂತೆ ಮಾಡಬಹುದು. ಇದನ್ನು ಮನಗಂಡು ಪ್ರಧಾನಿ ನರೇಂದ್ರ ಮೋದಿ ಅವರು ಸತತ 5 ವರ್ಷಗಳ ಪರಿಶ್ರಮದ ನಂತರ 3ನೇ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2020ರಲ್ಲಿ ಜಾರಿಗೆ ತಂದರು. ಇದನ್ನು ಅನುಷ್ಠಾನಗೊಳಿಸುವಲ್ಲಿ ರಾಜ್ಯವು ಮೊದಲ ಸ್ಥಾನದಲ್ಲಿದ್ದು, ಏಳೆಂಟು ರಾಜ್ಯಗಳು ನಮ್ಮನ್ನೇ ಅನುಸರಿಸುತ್ತಿವೆ’ ಎಂದು ತಿಳಿಸಿದರು.

‘ಎನ್‌ಇಪಿ ಜಾರಿಗೆಂದೇ ಕರ್ನಾಟಕವು ಕೇಂದ್ರ ಸರ್ಕಾರಕ್ಕಿಂತಲೂ ಮೊದಲೇ 2020ರಲ್ಲಿ ಕಾರ್ಯಪಡೆ ರಚಿಸಿತು. ಇದರಲ್ಲಿ ಶಿಕ್ಷಣದ ಜತೆಗೆ ನೈತಿಕತೆ ಮತ್ತು ಮೌಲ್ಯಗಳನ್ನು ರೂಢಿಸಲು ಕೂಡ ಒತ್ತು ಕೊಡಲಾಗಿದೆ. ಈ ಮೂಲಕ ಭಾರತೀಯತೆಯೊಂದಿಗೆ ವಿದ್ಯಾರ್ಥಿಗಳ ಸರ್ವಾಂಗೀಣ ವಿಕಸನ ಸಾಧ್ಯವಾಗಲಿದೆ’ ಎಂದು ಪ್ರತಿಪಾದಿಸಿದರು.

‘ಇಂದು ಸ್ಪರ್ಧೆಯು ಜಾಗತಿಕ ಮಟ್ಟದಲ್ಲಿದೆ. ಈ ಪೈಪೋಟಿಯಲ್ಲಿ ಗೆಲ್ಲಬೇಕೆಂದರೆ ಗುಣಮಟ್ಟದ ಶಿಕ್ಷಣವೊಂದೇ ಆಯುಧವಾಗಿದೆ. ಇದರ ಜತೆಗೆ ಅಗತ್ಯ ಕೌಶಲಗಳನ್ನೂ ಒದಗಿಸಲಾಗುತ್ತಿದೆ. ಅಮೆರಿಕ ಹೇಗೆ ಅವಕಾಶಗಳ ದೇಶವಾಗಿದೆಯೋ ಹಾಗೆಯೇ ದೇಶದಲ್ಲಿ ಕರ್ನಾಟಕವು ಉಜ್ವಲ ಭವಿಷ್ಯದ ಕನಸನ್ನು ನನಸು ಮಾಡುವ ರಾಜ್ಯವಾಗಿದೆ’ ಎಂದು ತಿಳಿಸಿದರು.

‘ಎನ್‌ಇಪಿ ಮೂಲಕ ರಾಜ್ಯದ ಶೈಕ್ಷಣಿಕ ವಲಯದ ಚಿತ್ರಣವನ್ನೇ ಆಮೂಲಾಗ್ರವಾಗಿ ಮತ್ತು ಸಕಾರಾತ್ಮಕವಾಗಿಯೂ ಬದಲಿಸಲಾಗುತ್ತಿದೆ’ ಎಂದರು. ಸೌತ್ ಕೊಂಕಣ್ ಎಜುಕೇಷನ್ ಸೊಸೈಟಿಯ ಅಧ್ಯಕ್ಷ ಶಾನಭಾಗ್, ವಿಧಾನಪರಿಷತ್ ಸದಸ್ಯ ಅರುಣ್ ಶಹಾಪುರ, ಪ್ರಾಂಶುಪಾಲೆ ಬಿಂಬಾ ನಾಡಕರ್ಣಿ ಪಾಲ್ಗೊಂಡಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

8 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

18 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

18 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

18 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago