ಬೆಂಗಳೂರು: ಬೋಗಸ್ ಪ್ರಮಾಣ ಪತ್ರ ಸೃಷ್ಟಿಸಿ ಕೋಟ್ಯಂತರ ರೂ. ಬೆಲೆ ಬಾಳುವ 22 ಎಕರೆ ಭೂಮಿಯನ್ನು ಕಬಳಿಸಿದ ಅಕ್ರಮಕ್ಕೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ್ ಮತ್ತು ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ವಿರುದ್ಧ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸುತ್ತಿದ್ದ ವಿಚಾರಣೆಗೆ ಹೈಕೋರ್ಟ್ ಧಾರವಾಡ ಪೀಠ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಭೂ ಹಗರಣದಿಂದ ತಲೆದಂಡಕ್ಕೆ ಸಿಲುಕಿದ್ದ ಬೈರತಿ ಬಸವರಾಜ್ ಅವರಿಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ.ಭೂ ಹಗರಣಕ್ಕೆ ಸಂಬಂಧಿಸಿದಂತೆ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ವಿಚಾರಣೆಯನ್ನು ಪ್ರಶ್ನಿಸಿ ಸಚಿವ ಭೈರತಿ ಬಸವರಾಜ್, ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಇವರ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸುನೀಲ್ ದತ್ ಯಾದವ್ ಪೀಠ ನಡೆಸಿ ಮಧ್ಯಂತರ ತಡೆಯಾಜ್ಞೆ ನೀಡಿದೆ. ಹಿಂದಿನ ಖಾಸಗಿ ದೂರಿನಲ್ಲಿರುವ ಅಂಶಗಳೇ ಪ್ರಸ್ತುತ ಖಾಸಗಿ ದೂರಿನಲ್ಲಿವೆ. ಪಕ್ಷಕಾರರ ನಡುವೆ ಕೆಲವು ಸಿವಿಲ್ ವಿವಾದಗಳು ಬಾಕಿ ಇವೆ. ಹೀಗಾಗಿ, ಮುಂದಿನ ವಿಚಾರಣೆವರೆಗೆ ಮಧ್ಯಂತರ ತಡೆ ನೀಡಲು ಇದು ಸೂಕ್ತ ಪ್ರಕರಣವಾಗಿದೆ ಎಂದು ಪೀಠ ಆದೇಶದಲ್ಲಿ ಹೇಳಿದೆ.
ಏನಿದು ಅಕ್ರಮ : ಸಚಿವ ಬೈರತಿ ಬಸವರಾಜ್, ವಿಧಾನ ಪರಿಷತ್ ಸದಸ್ಯ ಆರ್. ಶಂಕರ್, ನಿವೃತ್ತ ಸಬ್ ರಿಜಿಸ್ಟರ್ ಎಂ. ಮಾದಪ್ಪ ಅವರು ನಕಲಿ ದಾಖಲೆ ಸೃಷ್ಟಿಸಿ ದಿ. ಅಣ್ಣಯ್ಯಪ್ಪ ಅವರ ನಕಲಿ ಸಹಿ ಸೃಷ್ಟಿಸಿ 22. 43 ಎಕರೆ ಭೂಮಿಯನ್ನು ಕಬಳಿಸಿದ್ದಾರೆ ಎಂಬುದು ಆರೋಪ. ಮಾದಪ್ಪ ಅವರ ತಂದೆ ಅಣ್ಣಯ್ಯಪ್ಪ ಕೃಷಿಕ ಕುಟುಂಬವಾಗಿತ್ತು.
ಅಣ್ಣಯ್ಯಪ್ಪ ಬದುಕಿರುವವರೆಗೂ ಆಸ್ತಿ ವಿಭಜನೆ ನಡೆದಿರಲಿಲ್ಲ. ಅಣ್ಣಯ್ಯಪ್ಪ ಬದುಕಿರುವಾಗಲೇ ಸಂಬಂಧಿ ಮಾದಪ್ಪ ಮತ್ತು ಪಿಳ್ಳ ಮಾದಪ್ಪ ಅವರು ಶಾಸಕ ಬೈರತಿ ಬಸವರಾಜ್, ವಿಧಾನ ಪರಿಷತ್ ಸದಸ್ಯ ಆರ್ ಶಂಕರ್ ಮತ್ತು ಅರುಣ್ ಜತೆ ಗೂಡಿ ಅಣ್ಣಯ್ಯಪ್ಪನ ನಕಲಿ ಸಹಿ ಸೃಷ್ಟಿಸಿದ್ದಾರೆ. ಈ ಮೂಲಕ ಕಲ್ಕರೆ ಗ್ರಾಮದ ಸರ್ವೆ ನಂ. 375 /2 ರಲ್ಲಿರುವ 22. 43 ಎಕರೆ ಜಮೀನಿನ ಮಾರಾಟ ಪತ್ರವನ್ನು 2003, ಮೇ. 1 ರಂದು ಸೃಷ್ಟಿಸಿ ಅಂದೇ ಆರೋಪಿ ಬೈರತಿ ಬಸವರಾಜ್ ಹೆಸರಿಗೆ ನೋಂದಣಿ ಮಾಡಿಸಲಾಗಿತ್ತು ಎಂದು ಆರೋಪಿಸಲಾಗಿತ್ತು.
ಈ ಸಂಬಂಧ ಸಲ್ಲಿಸಿದ್ದ ಖಾಸಗಿ ದೂರನ್ನು ವಿಚಾರಣೆ ನಡೆಸಿದ್ದ ನ್ಯಾಯಾಲಯ ಪ್ರಕರಣ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೆ.ಆರ್. ಪುರಂ ಪೊಲೀಸರಿಗೆ ಸೂಚನೆ ನೀಡಲಾಗಿತ್ತು. ಪ್ರಕರಣ ಕುರಿತು ತನಿಖೆ ನಡೆಸಿದ್ದ ಕೆ.ಆರ್. ಪುರಂ ಪೊಲೀಸರು ಬಿ ವರದಿ ಸಲ್ಲಿಸಿದ್ದರು. ಬಿ ವರದಿಯನ್ನು 2021ರ ಸೆಪ್ಟೆಂಬರ್ 9ರಂದು ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿರಸ್ಕರಿಸಿತ್ತು. ಆ ಬಳಿಕ ಈ ಪ್ರಕರಣ 42ನೇ ಎಸಿಎಂಎಂ ನ್ಯಾಯಾಲಯಕ್ಕೆ ವರ್ಗಾವಣೆಯಾಗಿತ್ತು.
ಈ ನ್ಯಾಯಾಲಯ ಖಾಸಗಿ ದೂರನ್ನು ವಿಚಾರಣೆಗೆ ಅಂಗೀಕರಿಸಿ 2021ರ ನ. 25 ರಂದು ಬೈರತಿ ಬಸವರಾಜ್, ಆರ್.ಶಂಕರ್, ಮಾದಪ್ಪ ಮತ್ತು ಪಿಳ್ಳಮಾದಪ್ಪ, ನಿವೃತ್ತ ಹಿರಿಯ ಸಬ್ ರಿಜಿಸ್ಟ್ರಾರ್ ಅರುಣ್ ಕಲ್ಗುಚ್ಕಿ ಅವರಿಗೆ ಸಮನ್ಸ್ ನೀಡಿತ್ತು. ಈ ಎರಡು ಕೋರ್ಟ್‌ಗಳು ನೀಡಿದ್ದ ಆದೇಶ ರದ್ದುಕೋರಿ ಬೈರತಿ ಬಸವರಾಜ್ ಹೈಕೋರ್ಟ್ ಮೆಟ್ಟಿಲೇರಿದ್ದು ಮಧ್ಯಂತರ ಆದೇಶದಿಂದ ರಿಲೀಫ್ ಸಿಕ್ಕಿದೆ.
ಬೆಳಗಾವಿ ಅಧಿವೇಶನದಲ್ಲಿ ಕೋಲಾಹಲ: ಸಚಿವ ಭೈರತಿ ಬಸವರಾಜ್ ಅವರ ಭೂ ಅಕ್ರಮ ಬೆಳಗಾವಿ ಅಧಿವೇಶನದಲ್ಲಿ ಕೂಡ ಗಮನ ಸೆಳೆದಿತ್ತು. ಆಡಳಿತ ಮತ್ತು ವಿರೋಧ ಪಕ್ಷದ ನಡುವಿನ ಆರೋಪ ಮತ್ತು ಪ್ರತ್ಯಾರೋಪಕ್ಕೆ ನಾಂದಿ ಹಾಡಿತ್ತು. ಬೈರತಿ ಬಸವರಾಜ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಪ್ರತಿ ಪಕ್ಷ ಆಗ್ರಹಿಸಿತ್ತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…