ಕಲಬುರಗಿ: ಅಂದಿನ ಕಾಲದಲ್ಲಿ ನಿಜಾಮರ ಆಳ್ವಿಕೆಯಲ್ಲಿ ಅನೇಕ ತರಹದ ದಬ್ಬಾಳಿಕೆ-ವಿರೋಧದ ನಡುವೆಯೂ ಸಹ ಹೊರಗಡೆ ಉರ್ದು ನಾಮಫಲಕ ಹಾಕಿ ಒಳಗಡೆ ಕನ್ನಡ ಭಾಷೆ ಕಲಿಸುವುದರ ಮೂಲಕ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಜೀವಂತವಾಗಿರಿಸಿ, ಹನ್ನೇರಡನೆಯ ಶತಮಾನದ ಬಸವಾದಿ ಶರಣರ ತತ್ವಗಳನ್ನು ಅನುಸರಿಸಿಕೊಂಡು ಬಂದಿರುವ ಲಿಂ.ಶ್ರೀ ಡ.ಚನ್ನಬಸವ ಪಟ್ಟದ್ದೇವರು ಇಡೀ ಕನ್ನಡಿಗರ ಮನೆಯ ದೇವರಾಗಿದ್ದಾರೆ ಎಂದು ನಾಡಿನ ಹಿರಿಯ ಸಾಹಿತಿ ಡಾ.ಮ.ಗು.ಬಿರಾದಾರ ಹೇಳಿದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ನಗರದ ಅಕ್ಕಮಹಾದೇವಿ ಮಹಿಳಾ ಪದವಿ ಮಹಾವಿದ್ಯಾಲಯದ ಪ್ರಾಂಗಣದಲ್ಲಿ ಬುಧವಾರ ಆಯೋಜಿಸಿದ ಲಿಂ.ಶ್ರೀ ಡಾ.ಚನ್ನಬಸವ ಪಟ್ಟದ್ದೇವರ ಜಯಂತಿ ಹಾಗೂ ಭಾವೈಕ್ಯತೆಯ ಚಿಂತನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಅಂದಿನ ಸಮಾಜದಲ್ಲಿ ಬೇರೂರಿದ್ದ ಜಾತೀಯತೆ, ಮೂಢನಂಬಿಕೆ, ಮೇಲು-ಕೀಳು ಎಂಬ ಬೇಧ ಭಾವ ತೊಡೆದು ಹಾಕಿ ಕಲ್ಯಾಣ ರಾಜ್ಯದ ನಿರ್ಮಾಣ ಮಾಡಲು ಹನ್ನೇರಡನೆ ಶತಮಾನದಲ್ಲಿ ಬಸವಾದಿ ಶರಣರು ಶ್ರಮಿಸಿದ ಹಾಗೆಯೇ, ೨೦ ನೇ ಶತಮಾನದಲ್ಲಿ ಭಾಲ್ಕಿಯ ಚನ್ನಬಸವ ಪಟ್ಟದ್ದೇವರು ಅವಿರತವಾಗಿ ಶ್ರಮಿಸಿದ್ದಾರೆ ಎಂದು ಮಾರ್ಮಿಕವಾಗಿ ಹೇಳಿದರು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಕಸಾಪ ಜಿಲ್ಲಾಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಕನ್ನಡ ಭಾಷೆ ಜೀವಂತವಾಗಿರಲು ಭಾಲ್ಕಿಯ ಲಿಂ.ಶ್ರೀ ಡಾ.ಚನ್ನಬಸವ ಪಟ್ಟದ್ದೇವರು ಅಭೂತಪೂರ್ವ ಕಾರ್ಯಗಳೇ ಕಾರಣ. ಭಾಷೆಯ ಏಳಿಗೆಗೆ ಜತೆಗೆ ಹೈದ್ರಾಬಾದ ಕರ್ನಾಟಕ ವಿಮೋಚನೆಗಾಗಿಯೂ ಹೋರಾಡಿದ್ದಾರೆ. ಎಂಥ ಸಂದರ್ಭದಲ್ಲಿಯೂ ನಾಡು-ನುಡಿ-ಸಂಸ್ಕೃತಿಯ ವಿಷಯದಲ್ಲಿ ಯಾವುದೇ ರಾಜಿಗೆ ಒಪ್ಪಲಿಲ್ಲ. ಉರ್ದು ಫಲಕ ಹಾಕಿ ಕನ್ನಡ ಕಲಿಸಿದ್ದೇ ಜ್ವಲಂತ ನಿದರ್ಶನವಾಗಿದೆ ಎಂದ ಅವರು, ಇಂಥ ಶ್ರೇಷ್ಠ ಪೂಜ್ಯರ ಜಯಂತಿಯನ್ನು ಈ ವರ್ಷದಿಂದ ಕನ್ನಡ ಸಾಹಿತ್ಯ ಪರಿಷತ್ತಿನಿಂದ ಪ್ರತಿ ವರ್ಷ ಅರ್ಥಪೂರ್ಣವಾಗಿ ಆಚರಿಸಲು ಪರಿಷತ್ತಿನ ಕೇಂದ್ರ ಸಮಿತಿಯ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಅವರು ನಿರ್ದೇಶನ ನೀಡಿದ್ದು, ಪರಿಷತ್ತಿನ ಘನತೆಯನ್ನು ಹೆಚ್ಚಿಸಿದಂತಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಅಂಬಾರಾಯ ಹಾಗರಗಿ, ಜಿಲ್ಲಾ ಕಸಾಪದ ಗೌರವ ಕಾರ್ಯದರ್ಶಿಗಳಾದ ಶಿವರಾಜ ಅಂಡಗಿ, ಸುರೇಸ ಬಡಿಗೇರ, ಗೌರವ ಕೋಶಾಧ್ಯಕ್ಷ ಡಾ.ಶರಣರಾಜ್ ಛಪ್ಪರಬಂದಿ ಮಾತನಾಡಿದರು.
ಪ್ರಮುಖರಾದ ಜಗದೀಶ ಮರಪಳ್ಳಿ, ರವೀಂದ್ರಕುಮಾರ ಭಂಟನಳ್ಳಿ, ಬಿ.ಎಂ.ಪಾಟೀಲ ಕಲ್ಲೂರ, ವಿಶ್ವನಾಥ ತೊಟ್ನಳ್ಳಿ, ಶ್ರೀಕಾಂತ ಪಾಟೀಲ ತಿಳಗೂಳ, ಪ್ರಬುಲಿಂಗ ಮೂಲಗೆ, ವಿದ್ಯಾಸಾಗರ ದೇಶಮುಖ, ಶರಣಪ್ಪ ದೇಸಾಯಿ ಸೇರಿದಂತೆ ಅನೆಕರು ಉಪಸ್ಥಿತರಿದ್ದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಮುಂದಿನ ದಿನಗಳಲ್ಲಿ ಈ ಭಾಗದ ವಿದ್ಯಾರ್ಥಿ ಹಾಗೂ ಯುವ ಜನತೆಗಾಗಿ ಕಾವ್ಯ ಕಮ್ಮಟ, ವಿವಿಧ ಸ್ಪರ್ಧೆಗಳು, ಚಿಗುರು ಕವಿಗೋಷ್ಠಿ, ಮಕ್ಕಳ ಕಾವ್ಯ ಸೌರಭ ಸೇರಿದಂತೆ ಅನೇಕ ರಚನಾತ್ಮಕ ಕಾರ್ಯಕ್ರಮಗಳನ್ನು ಆಯೋಜಿಸಿ, ಸಾಹಿತ್ಯ ಸೌಗಂಧವನ್ನು ಪಸರಿಸಲಾಗುವುದು. -ವಿಜಯಕುಮಾರ ಪಾಟೀಲ ತೇಗಲತಿಪ್ಪಿ, ಅಧ್ಯಕ್ಷರು, ಜಿಲ್ಲಾ ಕಸಾಪ, ಕಲಬುರಗಿ.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…