ಸುರಪುರ: ನಗರದ ಸಿಬಾರಬಂಡಿ ಬಳಿಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಮಂಗಳವಾರ ರಾತ್ರಿ ಹೈವೇ ಪೆಟ್ರೋಲಿಂಗ್ ಪೊಲೀಸರು ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದ ಕಡೆಯಿಂದ ಕುಂಬಾರಪೇಟೆ ಕಡೆಗೆ ಹೋಗುವಾಗ ಬೀದರ್ ಬೆಂಗಳೂರು ರಾಜ್ಯ ಹೆದ್ದಾರಿಯ ಸಿಬಾರಬಂಡಿ ಬಳಿಯಲ್ಲಿ ವ್ಯಕ್ತಿಯೊಬ್ಬ ರಸ್ತೆಯಲ್ಲಿ ಮೃತಪಟ್ಟಿದ್ದು, ಪೊಲೀಸರು ಮೃತದೇಹವನ್ನು ನೋಡಿದ ನಂತರ ಆಸ್ಪತ್ರೆಗೆ ಸಾಗಿಸಿದ್ದಾರೆ.
ಬುಧವಾರ ಸಂಜೆಯವರೆಗೂ ವ್ಯಕ್ತಿ ಯಾರೆಂಬುದು ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಶವವನ್ನು ಶಹಾಪುರದ ಆಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ ಎಂದು ಹೇಳಲಾಗಿದೆ. ರಸ್ತೆಯಲ್ಲಿ ಹೋಗುವ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದರಿಂದ ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಆದರೆ ಮೃತ ವ್ಯಕ್ತಿಯ ಸಾವಿಗೆ ನಿಖರ ಕಾರಣ ಏನೆಂಬುದು ಪೊಲೀಸ್ ತನಿಖೆಯಿಂದ ತಿಳಿದು ಬರಲಿದೆ.
ಕಲಬುರಗಿ: ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್, ಐಟಿ, ಬಿಟಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರೀಯಾಂಕ್ ಖರ್ಗೆ ಅವರ 46ನೇ ವರ್ಷದ…
ಕಲಬುರಗಿ: ವಕ್ಫ್ ಬೋರ್ಡ್ ವಿರುದ್ಧ ಹೋರಾಟ ಮಾಡುತ್ತಿರುವ ಯತ್ನಾಳ ಟೀಮ್ ಗೆ ಬೆಂಬಲವಿಲ್ಲ ಭಾರತೀಯ ಜನತಾ ಪಕ್ಷದ ಯುವ ಮುಖಂಡ…
ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…