ಬಿಸಿ ಬಿಸಿ ಸುದ್ದಿ

ಕನ್ನಡ ಬಾವುಟವನ್ನು ಸುಟ್ಟಿರುವುದು ಅಕ್ಷಮ್ಯವಾದ ಅಪರಾಧ: ಮಹೇಶ್ ಜೋಶಿ

ಬೆಳಗಾವಿ: ‘ನಮ್ಮ ಅಸ್ಮಿತೆಯಾಗಿರುವ ಕನ್ನಡ ಬಾವುಟ ಸುಟ್ಟಿರುವುದು ಅಕ್ಷಮ್ಯ ಅಪರಾಧ. ಈ ಕೃತ್ಯ ಎಸಗಿದ ಹೇಡಿಗಳ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿ ಒತ್ತಾಯಿಸಿದರು.

ನಗರದ ಬಸವರಾಜ ಕಟ್ಟೀಮನಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಬೆಳಗಾವಿಯಲ್ಲಿ ನಡೆಯುವ ಅಧಿವೇಶನ ಹಾಗೂ ಕರ್ನಾಟಕ ರಾಜ್ಯೋತ್ಸವಕ್ಕೆ ಪರ್ಯಾಯವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಮಹಾಮೇಳಾವ ಆಯೋಜಿಸುವುದು ಸರಿಯಲ್ಲ. ಗಡಿಯಲ್ಲಿ ಕನ್ನಡಿಗರನ್ನು ಕೆರಳಿಸುತ್ತಿರುವ ಈ ಸಂಘಟನೆಯನ್ನು ರಾಜ್ಯದಲ್ಲಿ ನಿಷೇಧಿಸಬೇಕೆಂದು ಸರ್ಕಾರವನ್ನು ಒತ್ತಾಯಿಸಲಾಗುವುದು’ ಎಂದರು.

‘ಗಡಿನಾಡಿನಲ್ಲಿ ಕನ್ನಡಿಗರು-ಮರಾಠಿಗರು ಒಂದಾಗಿ ಬದುಕುತ್ತಿದ್ದಾರೆ. ಕರ್ನಾಟಕ ಮತ್ತು ಮಹಾರಾಷ್ಟ್ರದ ಮಧ್ಯೆ ಐತಿಹಾಸಿಕ ಹಾಗೂ ಭಾವನಾತ್ಮಕ ಸಂಬಂಧವಿದೆ. ಆದರೆ, ಅವಿವೇಕಿಗಳು ನಾಡವಿರೋಧಿ ಚಟುವಟಿಕೆ ಕೈಗೊಳ್ಳುತ್ತಿದ್ದಾರೆ. ಎಂಇಎಸ್‌ನ ಪುಂಡಾಟಿಕೆ ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

‘ಕನ್ನಡ ಭಾಷೆ, ಸಾಹಿತ್ಯ, ಕಲೆ ಹಾಗೂ ಸಂಸ್ಕೃತಿಯ ರಕ್ಷಣೆ, ಅಭಿವೃದ್ಧಿ ಹಾಗೂ ಪ್ರಸಾರವೇ ಕ.ಸಾ.ಪ. ಮೂಲ ಉದ್ದೇಶವಾಗಿದೆ. ಗಡಿ ಭಾಗದ ಕನ್ನಡ ಶಾಲೆಗಳ ಉಳಿವಿಗೆ ಶ್ರಮಿಸಲಾಗುವುದು’ ಎಂದ ಅವರು, ‘ಕನ್ನಡದ ಬೆಳವಣಿಗೆಗೆ ಶ್ರಮಿಸಿದ ಮಹನೀಯರ ಹೆಸರನ್ನು ಆಯಾ ಗ್ರಾಮದ ಬಸ್‌ ತಂಗುದಾಣಗಳಿಗೆ ನಾಮಕರಣ ಮಾಡಬೇಕು’ ಎಂದು ಒತ್ತಾಯಿಸಿದರು.

ಅಧಿಕಾರ ಸ್ವೀಕರಿಸಿದ ಮಂಗಲಾ ಮೆಟಗುಡ್ಡ ಮಾತನಾಡಿ, ‘ಜಿಲ್ಲೆಯಲ್ಲಿ ಅಪೂರ್ಣ ಹಂತದಲ್ಲಿರುವ ಕನ್ನಡ ಭವನಗಳ ನಿರ್ಮಾಣ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸಬೇಕು. ಪ್ರತಿ ತಾಲ್ಲೂಕಿನಲ್ಲಿ ಕನ್ನಡ ಭವನ ಕಟ್ಟಲು ಆರ್ಥಿಕ ನೆರವು ಒದಗಿಸಬೇಕು. ಜಿಲ್ಲೆಯ ಸಾಹಿತಿಗಳ ಸಾಕ್ಷ್ಯಚಿತ್ರ ನಿರ್ಮಿಸಬೇಕು’ ಎಂದು ಕೋರಿದರು.

ಮಹಾಂತೇಶ ಮೆಣಸಿನಕಾಯಿ ಅವರ ‘ನಮ್ಮ ರಾಷ್ಟ್ರೀಯ ಹಬ್ಬಗಳು’ ಕೃತಿ ಹಾಗೂ ಸುನೀಲ ಸಾಣಿಕೊಪ್ಪ ಅವರ ‘ಬಯಲು ಗೀತೆ’ ಕವನಸಂಕಲನ ಲೋಕಾರ್ಪಣೆಗೊಳಿಸಲಾಯಿತು. ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಸಾಹಿತಿ ಪ್ರೊ.ಚಂದ್ರಶೇಖರ ಅಕ್ಕಿ ಅಧ್ಯಕ್ಷತೆ ವಹಿಸಿದ್ದರು. ಗೋವಾ ಕನ್ನಡ ಮಹಿಳಾ ಮಂಡಳದ ಅಧ್ಯಕ್ಷೆ ಜಯಶ್ರೀ ಹೊಸಮನಿ, ಯ.ರು. ಪಾಟೀಲ, ಮೋಹನ ಪಾಟೀಲ, ವಿ.ಎಂ. ಅಂಗಡಿ ಇದ್ದರು.

ಕ.ಸಾ.ಪ. ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮೊದಲ ಬಾರಿ ಬೆಳಗಾವಿಗೆ ಆಗಮಿಸಿದ ಮಹೇಶ ಜೋಶಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು. ಶ್ರೀಕೃಷ್ಣದೇವರಾಯ ವೃತ್ತದಿಂದ ಬಸವರಾಜ ಕಟ್ಟಿಮನಿ ಸಭಾಂಗಣದವರೆಗೆ ವಾದ್ಯಮೇಳದೊಂದಿಗೆ ಮೆರವಣಿಗೆಯಲ್ಲಿ ಕರೆತರಲಾಯಿತು. ರಾಣಿ ಚನ್ನಮ್ಮನ ಪ್ರತಿಮೆಗೆ ಜೋಶಿ ಮಾಲಾರ್ಪಣೆ ಮಾಡಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

11 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

21 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

21 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

21 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago