ಸುರಪುರ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಮೂರ್ತಿ ಧ್ವಂಸ ಹಾಗು ಬಸವೇಶ್ವರರ ನಾಮಫಲಕ ಅವಮಾನ ಖಂಡಿಸಿ ನಗರದ ತಹಸೀಲ್ ಕಚೇರಿ ಮುಂದೆ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗಿದೆ.
ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಅಯ್ಯಣ್ಣ ಹಾಲಬಾವಿ ಮಾತನಾಡಿ,ಎಮ್‌ಇಎಸ್ ಸಂಘಟನೆ ಪದೆ ಪದೆ ಕನ್ನಡಕ್ಕೆ ಅವಮಾನಿಸುವ ಕೆಲಸ ಮಾಡುತ್ತಿದೆ.ಈಗ ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನವರ ಮೂರ್ತಿ ಧ್ವಂಸಗೊಳಿಸಿರುವುದು ಮತ್ತು ಬಸವೇಶ್ವರರ ನಾಮಫಲಕಕ್ಕೆ ಅವಮಾನಿಸಿರುವುದು ಖಂಡನಿಯ ಸಂಗತಿಯಾಗಿದೆ.ಅಲ್ಲದೆ ಕೊಲ್ಲಾಪುರದಲ್ಲಿ ಕನ್ನಡ ಧ್ವಜವನ್ನು ಸುಟ್ಟಿದ್ದಾರೆ ಮತ್ತು ಮಹಾರಾಷ್ಟ್ರದಲ್ಲಿ ಕರ್ನಾಟಕ ಸಾರಿಗೆ ಬಸ್‌ಗೆ ಕಲ್ಲೆಸೆದು ದುಸ್ಕೃತ್ಯ ನಡೆಸಿದ್ದಾರೆ.ಇಂತಹ ಕಿಡಗೇಡಿತನ ನಡೆಸಿರುವ ಎಮ್‌ಇಎಸ್ ಮತ್ತು ಶಿವಸೇನೆ ಸಂಘಟನೆಗಳನ್ನು ರಾಜ್ಯದಿಂದ ನಿಷೇಧಿಸಬೇಕು ಮತ್ತು ಮೂರ್ತಿ ಧ್ವಂಸಗೊಳಿಸಿದ ಗೂಂಡಾಗಳನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿದರು.
ನಂತರ ರಾಜ್ಯಪಾಲರಿಗೆ ಬರೆದ ಮನವಿಯನ್ನು ತಹಸೀಲ್ ಸಿಬ್ಬಂದಿ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಂಘದ ತಾಲೂಕು ಅಧ್ಯಕ್ಷ ಹಣಮಂತ್ರಾಯ ಮಡಿವಾಳ,ಮುಖಂಡರಾದ ವೆಂಕಟೇಶ ಕುಪಗಲ್,ರಾಘು ಕುಪಗಲ್,ತಿಪ್ಪಣ್ಣ ಜಂಪಾ,ಪ್ರಭು ದೊರೆ,ಮಾನಪ್ಪ ಕೊಂಬಿನ್,ಅವಿನಾಶ ಕೊಡೇಕಲ್,ಭೀಮಣ್ಣ ತಿಪ್ಪನಟಗಿ,ಮೌನೇಶ ಅರಳಹಳ್ಳಿ,ಯಂಕೋಬ ದೊರೆ,ಯಂಕಪ್ಪ ದಾಸರ,ಹಣಮಂತ್ರಾಯ ಕರ್ನಾಳ,ಮರೆಪ್ಪ ಹೆಮನೂರ,ಮರೆಪ್ಪ ನಗರಗುಂಡ,ದೇವಪ್ಪ ಪೂಜಾರಿ,ಲಕ್ಷ್ಮಣ ನಾಯಕ,ರಂಗಯ್ಯ ಸುರಪುರ,ಬಸಣ್ಣ ಬೋವಿ ಸೇರಿದಂತೆ ಅನೇಕರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…