ಬೆಳಗಾವಿ: ಪ್ರಪ್ರಥಮ ಬಾರಿಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆದ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಉತ್ತರ ಕರ್ನಾಟಕ ದೇವಸ್ಥಾನಗಳ ಅಭಿವೃದ್ದಿಗೆ ವಿಶೇಷ ಕಾರ್ಯಸೂಚಿ ರಚಿಸುವಂತೆ ಮಾನ್ಯ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವರು ಹಾಗೂ ರಾಜ್ಯ ಧಾರ್ಮಿಕ ಪರಿಷತ್ತಿನ ಅಧ್ಯಕ್ಷರಾದ ಶಶಿಕಲಾ ಜೊಲ್ಲೆ ಅವರು ಸೂಚನೆ ನೀಡಿದರು.
ಉತ್ತರ ಕರ್ನಾಟಕದ ದೇವಸ್ಥಾನಗಳ ಅಭಿವೃದ್ದಿಯ ಬಗ್ಗೆ ಚರ್ಚಿಸಲು ಪ್ರಪ್ರಥಮ ಬಾರಿಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ 3 ನೇ ರಾಜ್ಯ ಧಾರ್ಮಿಕ ಪರಿಷತ್ತಿನ 15 ನೇ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಉತ್ತರ ಕರ್ನಾಟಕ ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು.
ಸವದತ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದ ಸಮಗ್ರ ಅಭಿವೃದ್ದಿ: ಬೆಳಗಾವಿ ಜಿಲ್ಲೆಯಲ್ಲಿರುವ ಪ್ರಮುಖ ಎ ದರ್ಜೆಯ ದೇವಸ್ಥಾನ ಸವದತ್ತಿಯ ರೇಣುಕಾ ಯಲ್ಲಮ್ಮ. ಈ ದೇವಸ್ಥಾನಕ್ಕೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ಪ್ರತಿವರ್ಷ ಆಗಮಿಸುತ್ತಾರೆ. ಭಕ್ತರುಗಳಿಗೆ ಹೆಚ್ಚಿನ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸಮಗ್ರ ಅಭಿವೃದ್ದಿಯ ಕುರಿತು ವಿಶೇಷ ಚರ್ಚೆ ನಡೆಸಲಾಯಿತು.
ಈಗಾಗಲೇ 3.58 ಕೋಟಿ ವೆಚ್ಚದಲ್ಲಿ ಬಳಿಗಾರ ಕಟ್ಟೆ ರಸ್ತೆಯ ಅಭಿವೃದ್ದಿ ಕಾರ್ಯದ ಬಗ್ಗೆ ಅಂದಾಜುಪಟ್ಟಿಯನ್ನು ತಯಾರಿಸಲಾಗಿದೆ. ಇದಕ್ಕೆ ಅಗತ್ಯವಿರುವ ಅನುದಾನದ ಬಿಡುಗಡೆಯ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಯುಕ್ತರಿಗೆ ಸಚಿವರು ಸೂಚನೆ ನೀಡಿದರು. ದೇವಾಲಯದ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡುವಂತೆ ಸೂಚಿಸಿದ ಸಚಿವರು, ಘನತ್ಯಾಜ್ಯ ಮತ್ತು ದ್ರವತ್ಯಾಜ್ಯ ಸಂಸ್ಕರಣಾ ಯೋಜನೆಯ ಡಿಪಿಆರ್ ನ್ನು ಶೀಘ್ರವಾಗಿ ಸಿದ್ದಗೊಳಿಸಿ ಅನುಷ್ಠಾನಗೊಳಿಸಲು ಆದೇಶಿದರು.
ಮಹದೇಶ್ವರ ಬೆಟ್ಟದ ಶ್ರೀ ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನದಿಂದ ಸಿ ದರ್ಜೆಯ ದೇವಸ್ಥಾನಗಳ ದತ್ತು: ರಾಜ್ಯದ ಪ್ರಮುಖ ದೇವಸ್ಥಾನಗಳಲ್ಲೊಂದಾಗಿರುವ ಮಹದೇಶ್ವರ ಬೆಟ್ಟದ ಶ್ರೀ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಕಡಿಮೆ ಆದಾಯವಿರುವ ದೇವಸ್ಥಾನಗಳನ್ನು ದತ್ತು ತಗೆದುಕೊಳ್ಳುವಂತೆ ಸೂಚನೆ ನೀಡಲು ಸಭೆಯಲ್ಲಿ ನಿರ್ಧರಿಸಲಾಯಿತು. ಇದರಿಂದ ಕಡಿಮೆ ಆದಾಯವಿರುವ ದೇವಸ್ಥಾನಗಳ ಸೂಕ್ತ ನಿರ್ವಹಣೆ ಸಾಧ್ಯವಾಗಲಿದ್ದು, ಈ ಬಗ್ಗೆ ದತ್ತು ತಗೆದುಕೊಳ್ಳಬೇಕಾದ ಸಿ ದರ್ಜೆಯ ದೇವಸ್ಥಾನಗಳ ಪಟ್ಟಿಯನ್ನು ತಯಾರಿಸಿ ಪ್ರಾಧಿಕಾರಕ್ಕೆ ಕಳುಹಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಾಮಾನ್ಯ ಸಂಗ್ರಹಣ ನಿಧಿ ವಂತಿಗೆ ಸಂಗ್ರಹಕ್ಕೆ ಆದ್ಯತೆ: ರಾಜ್ಯದ ಎ ಮತ್ತು ಬಿ ದರ್ಜೆಯ ದೇವಸ್ಥಾನಗಳಿಂದ ಸಾಮಾನ್ಯ ಸಂಗ್ರಹಣ ನಿಧಿಗೆ ಪ್ರತಿವರ್ಷ ಶೇಕಡಾ 10 ರಷ್ಟು ವಂತಿಗೆಯನ್ನು ಸಂಗ್ರಹಿಸಲಾಗುತ್ತದೆ. ಇದನ್ನು ಕಡಿಮೆ ಆದಾಯವಿರುವ ದೇವಸ್ಥಾನಗಳ ಅಭಿವೃದ್ದಿಗೆ ಬಳಸಲಾಗುತ್ತದೆ. ಈ ನಿಧಿಗೆ ವಂತಿಗೆ ಸಂಗ್ರಹಕ್ಕೆ ಆದ್ಯತೆ ನೀಡಬೇಕಾಗಿದೆ. ಪ್ರತಿವರ್ಷ ದೇವಸ್ಥಾನದ ಲೆಕ್ಕಪತ್ರ ಪರಿಶೀಲನೆಯಾಗಿ ಜೂನ್ ತಿಂಗಳ ಒಳಗಾಗಿ ಆಯುಕ್ತರಿಗೆ ಆಡಿಟ್ ವರದಿ ನೀಡದಿದ್ದಲ್ಲಿ ಆಯಾ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ಜವಾಬ್ದಾರರನ್ನಾಗಿಸಿ ಶಿಸ್ತು ಕ್ರಮ ಜರುಗಿಸುವಂತೆ ಸೂಚಿಸಿದರು.
ಮಲೈ ಮಹದೇಶ್ವರ ಸ್ವಾಮಿ ದೇವಸ್ಥಾನದಿಂದ ವಂತಿಗೆ ಸಂಗ್ರಹ: ಮಹದೇಶ್ವರ ಬೆಟ್ಟದ ಶ್ರೀ ಮಲೈ ಮಹದೇಶ್ವರ ಸ್ವಾಮಿ ದೇವಾಲಯದ ವಾರ್ಷಿಕ ಆದಾಯದಿಂದ ಸಾಮಾನ್ಯ ಸಂಗ್ರಹಣಾ ನಿಧಿಗೆ ವಂತಿಗೆಯನ್ನು ನೀಡಲಾಗುತ್ತಿಲ್ಲ. ಈ ದೇವಸ್ಥಾನದಿಂದಲೂ ವಂತಿಗೆ ಯನ್ನು ನೀಡುವಂತೆ ಪ್ರಾಧಿಕಾರಕ್ಕೆ ಸೂಚನೆ ನೀಡುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ರಾಮದುರ್ಗದ ಗೊಡಚಿ ವೀರಭದ್ರ ದೇವಸ್ಥಾನ, ಬೆಳಗಾವಿಯ ಪಂಥಬಾಳೇಕುಂದ್ರಿ ಶ್ರೀ ದತ್ತ ದೇವಸ್ಥಾನ, ಶ್ರೀ ಪರಮಾರ್ಥನಿಕೇತನ ಹರಿಮಂದಿರ, ರಾಯಭಾಗದ ಶ್ರೀ ಮಹಾಕಾಳಿ (ಮಾಯಕ್ಕ) ದೇವಿ ದೇವಸ್ಥಾನ ಸೇರಿದಂತೆ ಹಲವು ದೇವಸ್ಥಾನಗಳ ಅಭಿವೃದ್ದಿ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಸರಕಾರದ ಪ್ರಧಾನ ಕಾರ್ಯದರ್ಶಿಗಳಾದ ತುಷಾರ್ ಗಿರಿನಾಥ್, ಮುಜರಾಯಿ ಆಯುಕ್ತರಾದ ಶ್ರೀಮತಿ ರೋಹಿಣಿ ಸಿಂಧೂರಿ, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯರು ಉಪಸ್ಥಿತರಿದ್ದರು.
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…