ಜಿ ರಾಮೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ನೋಟ್ ಬುಕ್ ವಿತರಣೆ

0
6

ಮಾಲೂರು: ತಾಲ್ಲೂಕಿನ ಅರಳೇರಿ ಗ್ರಾಮ ಪಂಚಾಯಿತಿಯ ನೀಲಕಂಠ ಅಗ್ರಹಾರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ಜಿ.ರಾಮೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೋಟ್ ಪುಸ್ತಕ ವಿತರಣೆ.

ಮಾಲೂರು ತಾಲ್ಲೂಕಿನ ಜೆಡಿಎಸ್ ನ ಜಿ ರಾಮೇಗೌಡರು ಮಾಲೂರು ತಾಲ್ಲೂಕಿನ ಜನತೆಗೆ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡುತ್ತಲೇ ಬರುತ್ತಿದ್ದಾರೆ. ಮುಖ್ಯವಾಗಿ ಮಾಲೂರು ಪಟ್ಟಣ ಸೇರಿದಂತೆ ತಾಲ್ಲೂಕಿನ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಬಡ ವಿದ್ಯಾರ್ಥಿಗಳಿಗೆ ತಮ್ಮ ಜಿ.ರಾಮೇಗೌಡ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತವಾಗಿ ನೋಟ್ ಪುಸ್ತಕಗಳನ್ನು ವಿತರಿಸುತ್ತಿದ್ದಾರೆ. ಇವರ ಕಾಳಜಿಯಿಂದ ಬಡ ವಿದ್ಯಾರ್ಥಿಗಳಿಗೆ ತುಂಬಾ ಸಹಾಯಕವಾಗಿದೆ ಎಂದು ನೀಲಕಂಠ ಅಗ್ರಹಾರದ ಸಂಪತ್ ಕುಮಾರ್ ತಿಳಿಸಿದ್ದಾರೆ.

Contact Your\'s Advertisement; 9902492681

ಈ ಸಂದರ್ಭದಲ್ಲಿ ಜಿ.ರಾಮೇಗೌಡ ಚಾರಿಟೇಬಲ್ ಟ್ರಸ್ಟ್ ನ  ಸಂಸ್ಥಾಪಕರು, ಅಖಿಲ ಕರ್ನಾಟಕ ಕೊರಮ-ಕೊರಚ ಯುವ ವೇದಿಕೆಯ ರಾಜ್ಯಾಧ್ಯಕ್ಷ ಸಂಪತ್ ಕುಮಾರ್  ಹಾಗೂ ಶಾಲೆಯ ಶಿಕ್ಷಕರು ಮತ್ತು ಗ್ರಾಮಸ್ಥರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here