ಶಹಾಬಾದ: ಅನಧಿಕೃತ ನೀರಿನ ಘಟಕಗಳ ವಿರುದ್ಧ ಕ್ರಮಕೈಗೊಳ್ಳಬೇಕು ಮತ್ತು ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಜೆಸ್ಕಾಂ ಅಧಿಕಾರಿಗಳು ವಿಳಂಬ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಅಫರೋಜ ನೀರು ಶುದ್ಧಿಕರಣ ಘಟಕದ ವತಿಯಿಂದ ಜೆಸ್ಕಾಂ ಕಚೇರಿಯ ಮುಂಭಾಗದಲ್ಲಿ ಧರಣಿ ನಡೆಸಲಾಯಿತು.
ಅಫರೋಜ ಶುದ್ಧಿಕರಣ ಘಟಕದ ಮಾಲೀಕರಾದ ಶೇಖ ಬಾಬು ಉಸ್ಮಾನ (ಗೋವಾ ಬಾಬು)ಮಾತನಾಡಿ, ನಗರದಲ್ಲಿ ಅನಧಿಕೃತ ನೀರಿನ ಘಟಕಗಳು ತಲೆ ಎತ್ತಿವೆ.ಅಲ್ಲದೇ ಸರ್ಕಾರದಿಂದ ಮಾನ್ಯತೆಯಿಲ್ಲದೇ ಕಾರ್ಯಕನಿರ್ವಹಿಸುತ್ತಿವೆ.ಈ ಬಗ್ಗೆ ಕ್ರಮಕೈಗೊಳ್ಳಬೇಕಾದ ಅಧಿಕಾರಿ ವರ್ಗದವರು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ.ಅಲ್ಲದೇ ಈ ಬಗ್ಗೆ ಅನೇಕ ಬಾರಿ ದೂರು ಸಲ್ಲಿಸಿದರೂ ನಗರಸಭೆಯ ಹಾಗೂ ಜೆಸ್ಕಾಂ ಅಧಿಕಾರಿಗಳು ಒಬ್ಬರ ಮೇಲೆ ಇನ್ನೊಬ್ಬರು ಹಾಕಿ ಕೈತೊಳೆದುಕೊಳ್ಳುತ್ತಿದ್ದಾರೆ ಹೊರತು ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂದು ದೂರಿದರು.
ಅಲ್ಲದೇ ಮಾನ್ಯತೆ ಪಡೆದ ನಾವು ಐಎಸ್‌ಐ ಮಾನ್ಯತೆ ಪಡೆದುಕೊಳ್ಳಲು ಸಾಕಷ್ಟು ಹಣ ವ್ಯಯಿಸಿದ್ದೆವೆ.ತಿಂಗಳಾದರೆ ತೆರಿಗೆ ಕಟ್ಟಬೇಕು.ಆದರೆ ಈ ಮಧ್ಯೆ ಯಾವುದೇ ಮಾನ್ಯತೆ ಪಡೆಯದೇ, ತೆರಿಗೆ ನೀಡದೇ ಸರ್ಕಾರದ ಆದೇಶವನ್ನು ಉಲ್ಲಂಘಿಸಿ ಅನಧಿಕೃತ ಘಟಕಗಳು ಕಾರ್ಯನಿರ್ವಹಿಸುತ್ತಿದ್ದರೂ ಅಧಿಕಾರಿ ವರ್ಗ ಮೌನ ವಹಿಸಿರುವುದು ಗೊತ್ತಾಗುತ್ತಿಲ್ಲ.ಕೂಡಲೇ ಕ್ರಮಕೈಗೊಳ್ಳದಿದ್ದರೇ ಇನ್ನೂ ಉಗ್ರವಾದ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ನಂತರ ತಹಸೀಲ್ದಾರ ಸುರೇಶ ವರ್ಮಾ ಹಾಗೂ ಜೆಸ್ಕಾಂ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಶಿವಶಾಲ ಪಟ್ಟಣಕರ,ಆಂಜನೆಯ ಕುಸಾಳೆ,ಪುನೀತ ಹಳ್ಳಿ,ಕಿರಣ ಜಿಡಗಿಕರ, ಮರಲಿಂಗ ಗಡೆಸೂಗೂರ, ಶಿವನಾಗ,ಶರಣು ತಲವಾರ, ಶೆಕ ಸುಫಿಯಾನ ಇತರರು ಇದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…