ಸುರಪುರ: ಬೆಳಗಾವಿಯಲ್ಲಿ ಕಿಡಿಗೇಡಿಗಳು ಬಸವೇಶ್ವರರ ನಾಮಫಲಕಕ್ಕೆ ಅವಮಾನಿಸಿದ್ದನ್ನು ಯುವ ಮುಖಂಡ ಮಲ್ಲಿಕಾರ್ಜುನರಡ್ಡಿ ಅಮ್ಮಾಪುರ ತೀವ್ರವಾಗಿ ಖಂಡಿಸಿದ್ದಾರೆ. ಬೆಳಗಾವಿ ಭಾಗದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ನಿರಂತರವಾಗಿ ಕನ್ನಡದ್ರೋಹದ ಕೆಲಸ ಮಾಡುತ್ತಿದೆ,ಸರಕಾರ ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದರು.
ಸಂಗೊಳ್ಳಿ ರಾಯಣ್ಣನವರ ಮೂರ್ತಿಯನ್ನು ಭಗ್ನಗೊಳಿಸಿದ್ದು,ಕೊಲ್ಲಾಪುರದಲ್ಲಿ ಕನ್ನಡ ಧ್ವಜವನ್ನು ಸುಟ್ಟಿರುವುದು ಮಹಾರಾಷ್ಟ್ರದಲ್ಲಿ ಕರ್ನಾಟಕದ ಸಾರಿಗೆ ಬಸ್‌ಗಳ ಮೇಲೆ ಕಲ್ಲೆಸೆಯುವ ಮೂಲಕ ಉದ್ಧಟತನ ಮೆರೆಯುತ್ತಿದೆ.ಕೂಡಲೇ ಇಂತಹ ಗೂಂಡಾಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವ ಮೂಲಕ ಈ ಸಂಘಟನೆಗಳ ಮೇಲೆ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತು ಶಿವಸೇನೆ ಸಂಘಟನೆಗಳು ಕನ್ನಡಿಗರ ತಾಳ್ಮೆಯನ್ನು ಪರೀಕ್ಷಿಸುತ್ತಿವೆ,ಆದರೆ ಜಗತ್ತಿಗೆ ಈ ನಾಡಿನ ಅರಸರು ತಮ್ಮ ಶೌರ್ಯ ಸಾಹಸಗಳ ಮೂಲಕ ಚಿರಪರಿಚಿತರಿದ್ದಾರೆ.ಅಂತಹ ನಾಡಿನಲ್ಲಿರುವ ನಾಡ ಸ್ವಾಭಿಮಾನಿಗಳು ಇಂತಹ ಸಂಘಟನೆಗಳನ್ನು ನಾಡಿನಿಂದ ಓಡಿಸುವ ಮುನ್ನ ಸರಕಾರ ಈ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಕಲಬುರಗಿ: ಸ್ಲಂ ಜನರ ಸಂಘಟನೆ ಕರ್ನಾಟಕ ವತಿಯಿಂದ ಆಯೋಜಿಸಿದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತ ಹೈ -ಕೋರ್ಟ್ ರಸ್ತೆ…
ಕಲಬುರಗಿ: ಕರ್ನಾಟಕ ರಾಜ್ಯದ ಕಲಬುರಗಿ-ಜಿಲ್ಲೆಯಲ್ಲಿ ದಲಿತ (ಮಾದಿಗ) ಸಮುದಾಯದವರಿಗೆ ರಾಷ್ಟ್ರೀಕೃತ ಬ್ಯಾಂಕ್‍ಗಳು ಸಾಲ ಸೌಲಭ್ಯ ನೀಡದಿರುವ ಕುರಿತು ಶೋಷಿತ ಜನಜಾಗೃತಿ…
ಕಲಬುರಗಿ: ಪ್ರಶಸ್ತಿ ಪುರಸ್ಕೃತರು ಸನ್ಮಾನ ಸಮಾರಂಭಕ್ಕೆ ಗೈರಾಗಿರುವುದು ಬೇಸರದ ಸಂಗತಿ ಎಂದು ಜಿಲ್ಲಾ ವೈದ್ಯ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ…
ಕಲಬುರಗಿ: ಹಣೆಯ ಮೇಲೆ ಹಚ್ಚಿದ ವಿಭೂತಿ ಸಮಾನತೆ ಸಾರುವದರೊಂದಿಗೆ ಮನುಷ್ಯನ ಆತ್ಮವಿಶ್ವಾಸ ಹೆಚ್ಚಿಸುತ್ತದೆ ಎಂದು ಆರಾಧನಾ ಪದವಿ ಪೂರ್ವ ಕಾಲೇಜಿನ…
ಕಲಬುರಗಿ ಕೇಂದ್ರ ಕಾರಾಗೃಹದಲ್ಲಿರುವ ಸಂವಿಧಾನ ದಿನವನ್ನು ಸರ್ಕಾರದ ಸುತ್ತೋಲೆ ಆದೇಶದಂತೆ ಕಾರಾಗೃಹದ ಲಿಪಿಕ/ ಕಾನಿನಿರ್ವಹಕ ಅಧಿಕಾರಿ/ಸಿಬ್ಬಂದಿಯವರೊಂದಿಗೆ ಡಾ|| ಬಾಬಾ ಸಾಹೇಬ್…
ಕಲಬುರಗಿ; ಸಂವಿಧಾನವನ್ನು ರಕ್ಷಿಸಲು ಮತ್ತು ಜನರಲ್ಲಿ ಸಂವಿಧಾನದ ಮೇಲಿನ ನಂಬಿಕೆಯನ್ನು ಬಲಪಡಿಸಲು ಜಾಗೃತ ಶಕ್ತಿಯಾಗಿ ಕಾರ್ಯನಿರ್ವಹಿಸುವ ಗುರುತರವಾದ ಜವಾಬ್ದಾರಿಯನ್ನು ದೇಶದ…