ಬೆಂಗಳೂರು: ರಾಜ್ಯ ಸಾರಿಗೆ ಇಲಾಖೆಯಲ್ಲಿ 1565 ಹುದ್ದೆಗಳು ಖಾಲಿ ಉಳಿದಿವೆ. ಬಡ್ತಿ ಹಾಗೂ ನೇರ ನೇಮಕಾತಿ ಮೂಲಕ ತುಂಬಲು ಕ್ರಮ ವಹಿಸಲಾಗುವುದು ಎಂದು ಸಾರಿಗೆ ಹಾಗೂ ಪರಿಶಿಷ್ಟ ಪಂಗಡದ ಕಲ್ಯಾಣ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯ ಪ್ರಕಾಶ ಕೆ. ರಾಠೋಡ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿರುವ ಸಚಿವರು ನೇರ ನೇಮಕಾತಿ ಮೂಲಕ 150 ವಾಹನ ನಿರೀಕ್ಷಕರ ಪಟ್ಟಿಯನ್ನು ಲೋಕಸೇವಾ ಆಯೋಗದಿಂದ ನಿರೀಕ್ಷಿಸಲಾಗುತ್ತಿದೆ. ಉಳಿದ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಗೆ ಪರಿಶೀಲನೆ ನಡೆಸಲಾಗುತ್ತಿದೆ.
ಅನುಕಂಪ ಆಧಾರಿತ ಹುದ್ದೆಗಳನ್ನು ನೇರ ನೇಮಕಾತಿ ಅಡಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಬಡ್ತಿ ಮೀಸಲಿರುವ ಹುದ್ದೆಗಳ ಪೈಕಿ ಆಯಾ ವೃಂದದಲ್ಲಿ ಅರ್ಹತೆಯಿರುವವರನ್ನು ಪರಿಗಣಿಸಿ ಭರ್ತಿಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಕಲಬುರಗಿ: ವೀರಶೈವ ಮಹಾಸಭಾದ ಜಿಲ್ಲಾ ಘಟಕದ ಚುನಾವಣೆಯ ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾಗರುವ ಇಂದು 2024-2029 ಸಾಲಿನ, ಜಿಲ್ಲಾ ಘಟಕಕ್ಕೆ…
ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2024-25ನೇ ಸಾಲಿಗೆ ಈ ಕೆಳಕಂಡ 13 ಫಲಾನುಭವಿ ಆಧಾರಿತ…
ಕಲಬುರಗಿ: ರಾಜ್ಯದ ಕಾರ್ಮಿಕ ಸಚಿವರಾದ ಸಂತೋಷ ಎಸ್. ಲಾಡ್ ಅವರು ಜುಲೈ 5 ರಂದು ಶುಕ್ರವಾರ ಕೈಗೊಳ್ಳಬೇಕಿದ್ದ ಕಲಬುರಗಿ ಜಿಲ್ಲಾ…
ಕರ್ನಾಟಕ ವಿಧಾನಸಭೆ ಅರ್ಜಿಗಳ ಸಮಿತಿಯಿಂದ ಗಾಣಗಾಪುರ ದೇವಸ್ಥಾನ ಅಭಿವೃದ್ಧಿ ಕುರಿತು ಚರ್ಚೆ ಕೇಂದ್ರಕ್ಕೆ ಸಮಿತಿ ನಿಯೋಗ ತೆರಳಲು ನಿರ್ಧಾರ ಕಲಬುರಗಿ;…
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಚುನಾವಣೆ ಚಿಂಚೋಳಿ: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಗೆ ಇದೆ 21 ರಂದು…
ಕಲಬುರಗಿ: ಹೊರಗುತ್ತಿಗೆ ನೇಮಕಾತಿ ಮೀಸಲಾತಿ ಅಳವಡಿಸುವಲ್ಲಿ ಈ ಕೆಳಕಂಡತೆ ತಿದ್ದು ಪಡಿ ಮಾಡಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ದಲಿತ ಹಕ್ಕುಗಳ ಸಮಿತಿ,…