ಬಿಸಿ ಬಿಸಿ ಸುದ್ದಿ

ಎಚ್.ಎನ್. ಪ್ರಶಸ್ತಿಗೆ ಆಯ್ಕೆಯಾದ ಎಸ್.ಕೆ. ಕಾಂತಾ ಅವರಿಗೆ ಅಧಿಕೃತ ಆಹ್ವಾನ

ಕಲಬುರಗಿ: ಸಜ್ಜನ ರಾಜಕಾರಣಿ, ಪ್ರಾಮಾಣಿಕ ಹೋರಾಟಗಾರ, ಮಾಜಿ ಸಚಿವ ಎಸ್.ಕೆ. ಕಾಂತಾ ಅವರಿಗೆ ರಾಜ್ಯ ಮಟ್ಟದ ಪ್ರಥಮ ವೈಜ್ಞಾನಿಕ ಸಮ್ಮೇಳನ ೨೦೨೧ನೇ ಸಾಲಿನ ಎಚ್.ಎನ್. ಪ್ರಶಸ್ತಿ ಸ್ವೀಕರಿಸಲು ಶಿವಮೊಗ್ಗಕ್ಕೆ ಆಗಮಿಸುವಂತೆ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ಶನಿವಾರ ಅಧಿಕೃತ ಆಹ್ವಾನ ನೀಡಲಾಯತು.

ಜಿಲ್ಲಾ ಘಟಕದ ಅಧ್ಯಕ್ಷ ರವೀಂದ್ರ ಶಾಬಾದಿ ಮಾತನಾಡಿ, ಎಸ್.ಕೆ. ಕಾಂತಾ ಅವರು ಕಲಬಯರಗಿಯ ಎಂ.ಎಸ್.ಕೆ. ಮಿಲ್ ನೌಕರರಾಗಿ, ಕಾರ್ಮಿಕ ಮುಖಂಡರಾಗಿ ಮಾಡಿದ ಹೋರಾಟಗಳು ಇಂದಿಗೂ ಸ್ಮರಣೀಯವಾಗಿವೆ. “ಕಾಣಿಯ ಸೋಲ ಅರ್ಧ ಗಾಣಿಯ ಗೆಲ್ಲ” ಎಂಬಂತೆ ಯಾರಿಂದ ಏನನ್ನೂ ಬಯಸದೆ ಸದಾ ಕೃಷಿ, ಕೂಲಿ, ಕಾರ್ಮಿಕರ ಸಮಸ್ಯೆ, ಸಂಕಟ, ನೋವುಗಳಿಗೆ ಸ್ಪಂದಿಸುತ್ತ ನಡೆದಿದ್ದಾರೆ. ಸಾರ್ವಜನಿಕರ ಸಮಸ್ಯೆಗಳ ಇತ್ಯರ್ಥಕ್ಕೆ  ಒತ್ತಾಯಿಸಿ ಅನೇಕ ಬಾರಿ ಉಪವಾಸ ಸತ್ಯಾಗ್ರಹ ಹಾಗೂ ಜೈಲು ವಾಸ ಅನುಭವಿಸಿದ್ದಾರೆ ಎಂದರು.

ಬುದ್ದ, ಬಸವ, ಅಂಬೇಡ್ಕರ್ , ಗಾಂಧಿ, ಲೋಹಿಯಾ ಮುಂತಾದವರ ವಿಚಾರಗಳಿಂದ ಪ್ರಭಾವಿತರಾದ ಇವರು ನ್ಯಾಯ “ನಿಷ್ಠುರಿ ದಾಕ್ಷಿಣ್ಯಪರ ನಾನಲ್ಲ. ಲೋಕವಿರೋಧಿ ಶರಣನಾರಿಗೂ ಅಂಜಲಾರ” ಎಂಬಂತೆ ಸಾಮಾಜಿಕ ವ್ಯವಸ್ಥೆಯ ವಿರುದ್ಧ ಒಂಟಿ ಸಲಗದಂತೆ ಹೋರಾಟ ನಡೆಸುತ್ತಿದ್ದಾರೆ ಎಂದು ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಡಾ. ಶಿವರಂಜನ್ ಸತ್ಯಂಪೇಟೆ ಅಭಿಪ್ರಾಯಪಟ್ಟರು.

ರಾಮಕೃಷ್ಣ ಹೆಗಡೆ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿ ಸೇವೆ ಸಲ್ಲಿಸಿರುವ ಇವರು, ಆ ಕಾಲದಲ್ಲಿಯೇ ಶಿಕ್ಷಣ, ಭಾಷೆಗೆ ಸಂಬಂಧಿಸಿದಂತೆ ಖ್ಯಾತ ವಿಚಾರವಾದಿ ಎಚ್. ನರಸಿಂಹಯ್ಯ ಅವರ ಜೊತೆ ಅನೇಕ ಬಾರಿ ಸಭೆ ನಡೆಸಿದ್ದುಂಟು. ಜಾತಿಯತೆ, ಶೋಷಣೆ, ಕಂದಾಚಾರ, ಮೂಢನಂಬಿಕೆ, ಡಂಬಾಚಾರ, ದಬ್ಬಾಳಿಕೆ ವಿರುದ್ಧ ಹೋರಾಡುತ್ತಿರುವ ಇವರು, ಅಮಾಯಕ, ಅಲಕ್ಷಿತ, ತುಳಿತಕ್ಕೊಳಗಾದ ಜನರಿಗೆ ನ್ಯಾಯ ಒದಗಿಸಿ ಸಹಸ್ರಾರು ಕುಟುಂಬಗಳಿಗೆ ನೆರವಾಗಿದ್ದಾರೆ. ಸರಳ ಸಾದಾ, ಸೀದಾ ಜೀವನ ನಡೆಸುತ್ತಿದ್ದಾರೆ. ಅಂತೆಯೇ ಇಂದಿನ ನಮಗೆಲ್ಲರಿಗೂ ಇವರು ಮಾದರಿಯಾಗಿದ್ದಾರೆ ಎಂದು ಅವರು ತಿಳಿಸಿದರು.

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಸಂಚಾಲಕ ಸತೀಶ ಸಜ್ಜನ್, ಖಜಾಂಚಿ ಹಣಮಂತರಾಯ ಐನೂಲಿ, ನಿರ್ದೇಶಕ ರಾದ ಸಂಗಣ್ಣ ಜಿ. ಸತ್ಯಂಪೇಟೆ, ಅಯ್ಯಣ್ಣ ನಂದಿ ಮುಂತಾದವರು ಆಮಂತ್ರಣ ಪತ್ರಿಕೆ, ಫಲ ಪುಷ್ಪ ನೀಡಿ ಸತ್ಕರಿಸಿ ಡಿ. ೨೯ರಂದು ನಡೆಯುವ ಸಮ್ಮೇಳನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದರು.

ಮಹಾನಗರ ಪಾಲಿಕೆ ಮಾಜಿ  ಸಾಹಿತಿ ಡಾ. ಸೂರ್ಯಕಾಂತ ಪಾಟೀಲ, ಶರಣು ಮಹಾಜನ, ವಿಜಯಕುಮಾರ ಧೂಳೆ ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

10 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

20 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

20 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

20 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago