ಸುರಪುರ: ನಮ್ಮ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ವಾದ ಸಂಘಟನೆಯಿಂದ ಬೆಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಸಂಘಟನೆಯ ಜಿಲ್ಲಾ ಉಪ ಪ್ರಧಾನ ಸಂಚಾಲಕ ಮಾಳಪ್ಪ ಕಿರದಹಳ್ಳಿ ಹಾಗು ಮುಖಂಡ ರಮೇಶ ಅರಕೇರಿ ವಿನಂತಿಸಿದ್ದಾರೆ.
ಈ ಕುರಿತು ಭಿತ್ತಿ ಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದ ಅವರು, ರಾಜ್ಯದಲ್ಲಿನ ದೀನ ದಲಿತ ಹಿಂದುಳಿದ ಮತ್ತು ಅಲ್ಪಸಂಖ್ಯಾತರು ಸೇರಿದಂತೆ ನಾಡಿನ ಸಮಗ್ರ ಅಭಿವೃಧ್ಧಿಗಾಗಿ ಮುಖ್ಯಮಂತ್ರಿಗಳಿಗೆ ಒತ್ತಾಯಿಸಿ ಬೆಂಗಳೂರು ಚಲೋ ಹಮ್ಮಿಕೊಳ್ಳಲಾಗಿದೆ.ಇದೇ ತಿಂಗಳು ೨೮ನೇ ತಾರೀಖು ಮಂಗಳವಾರ ಬೆಳಿಗ್ಗೆ ೧೧ ಗಂಟೆಗೆ ಚಿಕ್ಕ ಲಾಲ್‌ಬಾಗ್‌ನಿಂದ ಮೆರವಣಿಗೆ ಹೊರಟು ವಿಧಾನ ಸೌಧಕ್ಕೆ ತಲುಪಲಿದೆ.
ಈ ಸಂದರ್ಭದಲ್ಲಿ ಪರಿಶಿಷ್ಟ ಜಾತಿ ವರ್ಗ ದೌರ್ಜನ್ಯ ನಿಯಂತ್ರಣ ಕಾಯ್ದೆ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು,ಕೇಂದ್ರ ಸರಕಾರ ಕರ್ನಾಟಕ ಮಾದರಿಯಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆ ಜಾರಿಗೊಳಿಸಬೇಕು,ವಿದ್ಯಾರ್ಥಿ ವೇತನ,ಬಡ್ತಿ ಮೀಸಲಾತಿ,ಬ್ಯಾಕ್‌ಲಾಗ್ ನೇಮಕಾತಿ,ಗುತ್ತಿಗೆ ಮತ್ತು ಸಂಗ್ರಹಣೆ ಒಂದು ಕೋಟಿ ಅನುಷ್ಠನಗೊಳಿಸಲು,ರಾಜ್ಯದ ಎಸ್‌ಸಿಎಸ್‌ಪಿ/ಟಿಎಸ್‌ಪಿ ಯೋಜನೆಯ ಅನುಸಾರ ೨೦೧೪ ರಿಂದ ಹಂಚಿಕೆಯಾಗಿರುವ ಹಣದ ಬಗ್ಗೆ ಸಾರ್ವಜನಿಕ ಲೆಕ್ಕ ಪರಿಶೋಧನೆ ಕಾಯ್ದೆಯ ಕಲಂ ೭ರಡಿ ರದ್ದಾಗಬೇಕು,ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಆಗ್ರಹಿಸಿ ವಿಧನ ಸೌಧ ಚಲೋದಲ್ಲಿ ಒತ್ತಾಯಿಸಲಾಗುವುದು.
ಆದ್ದರಿಂದ ನಮ್ಮ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ ಅವರ ನೇತೃತ್ವದಲ್ಲಿ ನಡೆಯುವ ಈ ಹೋರಾಟದಲ್ಲಿ ನಾಡಿನಾದ್ಯಂತ ಸಾವಿರಾರು ಜನರು ಭಾಗವಹಿಸಲಿದ್ದು ನಮ್ಮ ಸುರಪುರ ತಾಲೂಕಿನಿಂದ ಹಾಗು ಯಾದಗಿರಿ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಪಾಲ್ಗೊಳ್ಳಲು ವಿನಂತಿಸುವುದಾಗಿ ತಿಳಿಸಿದರು.