ಶಹಾಬಾದ : ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹಲಸಿ ಗ್ರಾಮದಲ್ಲಿ ವಿಶ್ವಗುರು ಮಹಾ ಮಾನವತಾವಾದಿ ಶ್ರೀ ಜಗಜ್ಯೋತಿ ಬಸವೇಶ್ವರರ ಮೂರ್ತಿಗೆ ಮಸಿ ಬಳೆದು ಪುಂಡಾಟಿಕೆ ಮೆರೆದ ಕಿಡಿಗೇಡಿಗಳ ಬಂಧನಕ್ಕೆ ಆಗ್ರಹಿಸಿ ಮತ್ತು ಶ್ರೀ ಸಂಗೊಳ್ಳಿ ರಾಯಣ್ಣನ ಪ್ರತಿಮೆ ವಿರೂಪಗೊಳಿಸಿದ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ಮೂರ್ತಿಗಳಿಗೆ ಆದ ಅವಮಾನ ಖಂಡಿಸಿ, ಆರೋಪಿಗಳನ್ನು ಕೂಡಲೇ ಬಂಧಿsಸಬೇಕೆಂದು ಕಾಂಗ್ರೆಸ್ ಜಿಲ್ಲಾ ವಕ್ತಾರ ಪೀರಪಾಶಾ ಸರಕಾರಕ್ಕೆ ಒತ್ತಾಯಿಸಿದರು.
ಬಿಜೆಪಿ ಸರಕಾರ ಅವಧಿಯಲ್ಲಿ ಈ ರಿತೀಯ ಘಟನೆಗಳು ನಡೆಯುತ್ತಿರುವುದು ನೋಡಿದರೇ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ತಿಳಿದುಬರುತ್ತದೆ. ಸಮಾಜದಲ್ಲಿ ಶಾಂತಿಯನ್ನು ಕದಡುವ ಹುನ್ನಾರ ನಡೆಯುತ್ತಿದೆ.ಇದನ್ನು ತಡೆಯುವಲ್ಲಿ ಸರಕಾರ ವಿಫಲವಾಗಿದೆ.ಅಲ್ಲದೇ ಅಫಜಲಪೂರ ತಾಲೂಕಿನ ತಾಡ್ ತೆಗನೂರ ಮಸೀದಿಯಲ್ಲಿ ಪವಿತ್ರ ಗ್ರಂಥ ಕುರಾನ್‌ನನ್ನು ಸುಟ್ಟು ಹಾಕಿ ಕಿಡಿಗೇಡಿಗಳು ಸಮಾಜದಲ್ಲಿ ಅಶಾಂತಿಯ ವಾತಾವರಣ ಸೃಷ್ಠಿಸಲು ಹೊರಟಿದ್ದಾರೆ.
ಈಗಾಗಲೇ ಸಮಾಜದಲ್ಲಿ ಜಾತಿ, ಧರ್ಮದ ನಡುವೆ ಕಂದಕ ನಿರ್ಮಾಣ ಮಾಡುವ ಕೆಲಸಗಳು ಹೆಚ್ಚಿವೆ. ಆದ್ದರಿಂದ ಈ ಘಟನೆ ಮಾಡಿದಕಿಡಿಗೇಡಿಗಳನ್ನು ಬಂಧಿಸಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.ಅಲ್ಲದೇ ಈ ರಿತೀಯ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಬೇಕೆಂದು ಆಗ್ರಹಿಸಿದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…