ಹಾವೇರಿ : ನಮ್ಮ ಸರ್ಕಾರದ ಒಂದೂವರೆ ವರ್ಷದ ಅವಧಿಯಲ್ಲಿ ನಗರ ಪ್ರದೇಶದಲ್ಲಿ ಒಂದು ಲಕ್ಷ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಾಲ್ಕು ಸೇರಿದಂತೆ ಐದು ಲಕ್ಷ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಣೆಬೆನ್ನೂರು ನಗರದ ಸಿದ್ದೇಶ್ವರ ದೇವಸ್ಥಾನದ ಆವರಣದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾರ್ಯಕ್ರಮ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ರಾಣೇಬೆನ್ನೂರ ಮತ್ತು ಬ್ಯಾಡಗಿ ತಾಲೂಕಿನ ಕೋವಿಡ್‍ನಿಂದ ಮೃತರಾದವರ ಕುಟುಂಬಗಳಿಗೆ ತಲಾ ರೂ. ಒಂದು ಲಕ್ಷ ಪರಿಹಾರ ಚೆಕ್ ವಿತರಿಸಿ ಸಾರ್ವಜನಿಕರನ್ನುದ್ದೇಶಿಸಿ ಅವರು ಮಾತನಾಡಿದರು.
ನಮ್ಮ ಸರ್ಕಾರದ ಒಂದೂವರೆ ವರ್ಷದ ಅವಧಿಯಲ್ಲಿ ನಗರ ಪ್ರದೇಶದಲ್ಲಿ ಒಂದು ಲಕ್ಷ ಹಾಗೂ ಗ್ರಾಮೀಣ ಪ್ರದೇಶದಲ್ಲಿ ನಾಲ್ಕು ಸೇರಿದಂತೆ ಐದು ಲಕ್ಷ ಮನೆಗಳನ್ನು ನಿರ್ಮಾಣ ಮಾಡುವ ಗುರಿ ಹಾಕಿಕೊಳ್ಳಲಾಗಿದೆ. ಈಗಾಗಲೇ ಐದು ಲಕ್ಷ ಮನೆಗಳನ್ನು ವಸತಿ ರಹಿತರಿಗೆ ನೀಡಲು ಸರ್ಕಾರ ಘೋಷಣೆ ಮಾಡಿದೆ ಎಂದರು.
ನಮ್ಮ ಸರ್ಕಾರದ ಅಧಿಕಾರ ಅವಧಿಯ ಮುಂದಿನ ಒಂದೂವರೆ ವರ್ಷಗಳ ಕಾಲ ಅಧಿಕಾರ ರಾಜಕಾರಣಮಾಡದೇ ಜನಪರ ರಾಜಕಾರಣಮಾಡುವೆ. ರಾಜ್ಯದ ಜನರ ಬದುಕಿನಲ್ಲಿ ಬಹುದೊಡ್ಡ ಬದಲಾವಣೆ ತರುತ್ತೇನೆ. ಜನರ ಕಲ್ಯಾಣಕ್ಕಾಗಿ ಆಡಳಿತದಲ್ಲಿ ಹೊಸ ಚಿಂತನೆ, ಹೊಸ ಚೈತನ್ಯ ಹಾಗೂ ಹೊಸ ಕಾರ್ಯಕ್ರಮಗಳನ್ನು ಜಾರಿಗೊಳಿಸುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೇಳಿದರು.
ಅಭಿವೃದ್ಧಿ ಎನ್ನುವುದು ನಿರಂತರವಾಗಿ ಚಾಲನೆಯಲ್ಲಿರುವ ಪ್ರಗತಿಯ ಚಕ್ರ. ಇದು ನಿರಂತರವಾಗಿದ್ರೆ ಎಲ್ಲ ರಂಗದಲ್ಲೂ ಸರ್ವಾಂಗೀಣ ಅಭಿವೃದ್ಧಿ ಆಗುತ್ತದೆ. ಬರುವ ದಿನಗಳಲ್ಲಿ ಎಲ್ಲ ವಿಚಾರಗಳಿಗೆ ಆದ್ಯತೆ ಕೊಟ್ಟು ಕಾರ್ಯಕ್ರಮ ರೂಪಿಸುತ್ತೇವೆ. ಜನರ ಬದುಕಿನಲ್ಲಿ ಸಮಗ್ರ ಬದಲಾವಣೆ ತರುವೆ. 2023ರ ಚುನಾವಣೆಯಲ್ಲಿ ಅಭಿವೃದ್ಧಿಯ ಮಾನದಂಡದಿಂದ ಜನರ ಮುಂದೆ ಹೋಗುವೆ ಎಂದು ಘೋಷಿಸಿದರು.
ಗ್ರಾಮೀಣ, ನಗರ ಪ್ರದೇಶದಲ್ಲಿ ಅಭಿವೃದ್ಧಿಯಾಗಬೇಕು. ರೈತರ ಬದುಕು, ಕೂಲಿಕಾರರ ಶ್ರಮದಲ್ಲಿ, ತಾಯಂದಿರ ಬದುಕಿನಲ್ಲಿ ಅಭಿವೃದ್ಧಿಯಾಗಬೇಕು. ಧೀನದಲಿತರಿಗೆ, ಹಿಂದುಳಿದವರಿಗೆ ಸ್ವಾಭಿಮಾನದ ಬದುಕು ಕೊಡುವ ಕೆಲಸವಾಗಬೇಕು. ಅಂದಾಗ ಮಾತ್ರ ಪ್ರಗತಿಪರ ಹಾಗೂ ಕಲ್ಯಾಣ ರಾಜ್ಯವಾಗಲು ಸಾಧ್ಯ ಎಂದರು.
ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ರಾಣೇಬೆನ್ನೂರಿನ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಮೆಡ್ಲೇರಿ ಹಾಗೂ ಹೊಳೆಆನ್ವೇರಿ ನೀರಾವರಿ ಕಾಮಗಾರಿಗೆ 206 ಕೋಟಿ ಮಂಜೂರ ಮಾಡಲಾಗಿದೆ. ಆಣೂರು ಕುಡಿಯುವ ನೀರಿನ ಯೊಜನೆಗೆ ರೂ.110 ಕೋಟಿ ಕಾಮಗಾರಿಗೆ ಬೆಳಗಾವಿ ಸಚಿವ ಸಂಪುಟ ಸಭೆಯಲ್ಲಿ ಅನುಮೊದನೆ ನೀಡಲಾಗಿದೆ. ಶಿಗ್ಗಾಂವಿ-ಸವಣೂರು, ಹಾನಗಲ್ ಮೂರು ತಾಲೂಕಿನ ಕುಡಿಯುವ ನೀರಿನ ಯೋಜನೆಗಳಿಗೆ ಅನುನೋದನೆ ನೀಡಲಾಗಿದೆ. ಕರೂರು ಗ್ರಾಮದಲ್ಲಿ ರೂ.ಮೂರು ವೆಚ್ಚದಲ್ಲಿ ಹೆಬ್ಬಾಗಿಲು ನಿರ್ಮಾಣ ಮಾಡಲಾಗುತ್ತಿದೆ. ಮುಂದಿನ ಡಿಸೆಂಬರ್‍ನಲ್ಲಿ ಉದ್ಘಾಟನೆ ಮಾಡುತ್ತೇನೆ ಎಂದು ಘೋಷಿಸಿದರು.
ರಾಣೇಬೆನ್ನೂರ ಅಭಿವೃದ್ಧಿ ಹಿನ್ನೆಯಲ್ಲಿ ಇಂದು ರೂ. ಐದು ಕೋಟಿ ವೆಚ್ಚದ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕೊಟ್ಟ ಭರವಸೆಯಂತೆ ರೂ.20 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಲಾಗಿದೆ ಎಂದು ಹೇಳಿದರು.
ಉದ್ಯೋಗ ನೀತಿ: ಉದ್ಯೋಗ ಆಧಾರಿತ ಕೈಗಾರಿಕಾ ನೀತಿ ಜಾರಿಗೆ ತರಲಾಗುತ್ತಿದ್ದು, ಅತೀ ಹೆಚ್ಚು ಉದ್ಯೋಗಾವಕಾಶ ಕಲ್ಪಿಸುವ ಕೈಗಾರಿಕೆಗೆ ಹೆಚ್ಚಿನ ಉತ್ತೇಜನ ನೀಡುವ ಕಾರ್ಯಕ್ರಮ ರೂಪಿಸಲಾಗುತ್ತಿದೆ. ಜನೇವರಿ 26ರೊಳಗೆ ಯುವಕರಿಗೆ ಉದ್ಯೋಗ ಕೊಡುವ ಕೈಗಾರಿಕಾ ನೀತಿ ರೂಪಿಸುವದರೊಂದಿಗೆ ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಉದ್ಯೋಗ ಕ್ರಾಂತಿ ಮಾಡುವ ಯೋಜನೆ ಜಾರಿಗೆ ತರಲಾಗುವುದು ಎಂದರು.
ಎಸ್ ಸಿ, ಎಸ್ಟಿ ಮತ್ತು ಓಬಿಸಿ ಮಹಿಳೆಯರಿಗಾಗಿ ಬರುವ ಬಜೆಟ್‍ನಲ್ಲಿ ವಿಶೇಷ ಯೋಜನೆ ಜಾರಿ ತರಲಾಗುವುದು. ನಮ್ಮದು ಸ್ಪಂಧನಾಶೀಲವಾಗಿರೋ ಸರಕಾರ. ನಾನು ಸಿಎಂ ಅದ ಕೂಡಲೆ ರೈತರ ಮಕ್ಕಳಿಗೆ ವಿದ್ಯಾನಿಧಿ ಕಾರ್ಯಕ್ರಮ ರೂಪಿಸಿದೆ. 2.40 ಲಕ್ಷ ಮಕ್ಕಳಿಗೆ ಇದರ ಲಾಭ ಸಿಕ್ಕಿದೆ. ಪಿಜಿವರೆಗೆ ವಿದ್ಯಾನಿಧಿ ಕಾರ್ಯಕ್ರಮ ವಿಸ್ತರಿಸುತ್ತೇವೆ. ಪ್ರಾಥಮಿಕ ಹಂತದಿಂದ ಪ್ರೌಢಶಾಲೆಗೆ ಬರುವ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆ ಇರುವ ಕಾರಣ ವಿದ್ಯಾನಿಧಿ ಕಾರ್ಯಕ್ರಮವನ್ನು ಗ್ರಾಮೀಣ ರೈತರ ಹೆಣ್ಣು ಮಕ್ಕಳಿಗೆ ವಿಸ್ತರಣೆ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ಸಂಕಷ್ಟದಲ್ಲಿರೋ ನೇಕಾರರಿಗೆ ವಿಶೇಷ ಕಾರ್ಯಕ್ರಮ ರೂಪಿಸಿ ಮಾರುಕಟ್ಟೆಯನ್ನು ಅವರ ಮನೆ ಬಾಗಿಲಿಗೆ ತರುವ ಕೆಲಸ ಮಾಡುತ್ತಿದ್ದೇವೆ. ಅಮೇಜಾನ್, ಪ್ಲಿಪ್‍ಕಾರ್ಟ್ ಮೂಲಕ ನೇಕಾರರು ತಯಾರಿಸಿದ ಬಟ್ಟೆಗಳಿಗೆ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಲಾಗುವುದು. ಶಾಸಕರು, ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲರೂ ಒಂದಾಗಿ ಕೆಲಸ ಮಾಡಿ ಹೊಸ ಚಿಂತನೆಯ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದರು.
ಬೆಳೆಹಾನಿ ಪರಿಹಾರ ದ್ವಿಗುಣ: ಬೆಳಗಾವಿ ಅಧಿವೇಶನದಲ್ಲಿ ರೈತರ ಬೆಳೆ ಹಾನಿಗೆ ಹೆಚ್ಚಿನ ಪರಿಹಾರ ನೀಡು ತೀರ್ಮಾನ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದ ಎನ್.ಡಿ.ಆರ್.ಎಫ್. ಹಾಗೂ ಎಸ್.ಡಿ.ಆರ್.ಎಂ. ಮಾರ್ಗಸೂಚಿಯಂತೆ ಒಂದು ಹೆಕ್ಟೇರ್ ಒಣ ಭೂಮಿಗೆ 6,800 ಹಾಗೂ ರಾಜ್ಯ ಸರ್ಕಾರದಿಂದ ರೂ.6800 ಸೇರಿ ಪ್ರತಿ ಹೆಕ್ಟೇರ್‍ಗೆ ರೂ.13,600, ನೀರಾವರಿ ಬೆಳೆ ಪರಿಹಾರವನ್ನು ರೂ.13,500 ರಿಂದ ರೂ.25 ಸಾವಿರ ಹಾಗೂ ತೋಟಗಾರಿಕೆ ಬೆಳೆಹಾನಿಗೆ ರೂ.18 ಸಾವಿರದಿಂದ ರೂ.28 ಸಾವಿರಕ್ಕೆ ಹೆಚ್ಚಿಸಲಾಗಿದೆ. ಇದರಿಂದ ಸರ್ಕಾರಕ್ಕೆ ರೂ.1300 ಕೋಟಿ ಹೊರೆ ಹೊರೆಯಾಗಲಿದೆ ಆದರೂ ರೈತರಿಗೆ ಸ್ಪಂದಿಸುವ ಕೆಲಸ ಮಾಡುತ್ತೀದ್ದೇವೆ ಎಂದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…