ಕಲಬುರಗಿ: ಜಗದ ಕವಿ-ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ- ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದ ಪ್ರಯುಕ್ತ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಡಿ.29 ರ ಬೆಳಗ್ಗೆ 10.30 ಕ್ಕೆ ನಗರದ ಕನ್ನಡ ಭವನದಲ್ಲಿ ‘ವಿಶ್ವಮಾನವ’ ದಿನಾಚರಣೆ ವಿಶೇಷ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ವಿಜಯಕುಮಾರ ಪಾಟೀಲ ತೇಗಲತಿಪ್ಪಿ ತಿಳಿಸಿದ್ದಾರೆ.
ರಾಷ್ಟ್ರಕವಿ ಕುವೆಂಪು ಅವರು ತಮ್ಮ ಬರಹದ ಮೂಲಕ ವಿಶ್ವವನ್ನು ಪ್ರೀತಿಸುವುದನ್ನು ಕಲಿಸಿಕೊಟ್ಟವರು ಮತ್ತು ಎಲ್ಲರನ್ನೂ ಒಂದೆಡೆ ಗೆ ತರಲು ಶ್ರಮಿಸಿದ ಅವರು, ಜನರಲ್ಲಿನ ಅಂಧ ವಿಶ್ವಾಸವನ್ನು ಬಿಡಿಸಿ ವೈಚಾರಿಕತೆಯನ್ನು ಬೆಳೆಸಿದರು. ಇಂಥ ಶ್ರೇಷ್ಠ ಜಗದ ಕವಿಯ ಚಿಂತನೆಗಳನ್ನು ಇಂದಿನ ಹೊಸ ಪೀಳಿಗೆಗೆ ಮುಟ್ಟಿಸುವ ಪ್ರಾಮಾಣಿಕ ಪ್ರಯತ್ನ ಹಂತ ಹಂತವಾಗಿ ಮಾಡಲಾಗುತ್ತದೆ ಎಂದು ಅವರು ವಿವರಿಸಿದ್ದಾರೆ.
ಸೇಡಂನ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿಯ ಪೂಜ್ಯ ಶ್ರೀ ಸದಾಶಿವ ಮಹಾಸ್ವಾಮಿಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಲಿದ್ದು, ಶಾಸಕರೂ ಆದ ಡಿಸಿಸಿ ಬ್ಯಾಂಕ್ ಅಧ್ಯಕ್ಷ ರಾಜಕುಮಾರ ಪಾಟೀಲ ತೆಲ್ಕೂರ, ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಡಾ.ಅಜಯಸಿಂಗ್ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…