ಕಲಬುರಗಿ: 12ನೇ ಶತಮಾನದಲ್ಲಿ ಬಸವಣ್ಣನವರ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಆಪ್ತರಲ್ಲಿ ಒಬ್ಬರಾದ ಶಿವಶರಣ ಹಡಪದ ಅಪ್ಪಣ್ಣನವರು ತಮ್ಮ ವಚನಗಳ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ ಎಂದು ಚಿತ್ತಾಪುರ ಕಂಬಳೇಶ್ವರ ಮಠದ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ನಗರದ ಎಸ್.ಎಂ.ಪಂಡಿತ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರಪಾಲಿಕೆ ಆಶ್ರಯದಲ್ಲಿ ಮಂಗಳವಾರ ನಡೆದ ಶಿವಶರಣ ಹಡಪದ ಅಪ್ಪಣ್ಣನವರ 885ನೇ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯದರ್ಶಿ ಆರ್.ಜಿ.ಶೇಟಗಾರ ಮಾತನಾಡಿ, ಸಮಾಜದಲ್ಲಿರುವ ಅಸಮಾನತೆ ವಿರುದ್ಧ ಶರಣರು ಹೋರಾಟ ಮಾಡಿದ್ದಾರೆ. ಇಂದು ಲಿಂಗಾಯತ ಸಮುದಾಯದಲ್ಲಿ ಸುಮಾರು 99 ಪಂಗಡಗಳಿವೆ ಇದರಲ್ಲಿ ಹಡಪದ ಸಮಾಜ ಕೂಡ ಸೇರಿದೆ. ಜಾತಿರಹಿತವಾದ ಸಮಾಜ ಕಟ್ಟಬೇಕು ಮತ್ತು ಹಡಪದ ಸಮಾಜದ ಮೇಲೆ ನಿರಂತರ ಅನ್ಯಾಯ ದೌರ್ಜನ್ಯ ಗಳು ಹೆಚ್ಚುತ್ತಿವೆ ಇವುಗಳನ್ನು ಮೆಟ್ಟಿನಿಲ್ಲಲು ಹೋರಾಟ ಮಾಡಬೇಕು ನಿಮ್ಮ ಜೊತೆ ಜಾಗತಿಕ ಲಿಂಗಾಯತ ಮಹಾಸಭಾ ಇರುತ್ತದೆ ಎಂದು ಹೇಳಿದರು.
ಹಡಪದ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಈರಣ್ಣಾ ಸಿ. ಹಡಪದ ಪ್ರಾಸ್ತಾವಿಕ ಮಾತನಾಡಿ, ಹಲೋ ವರ್ಷಗಳ ಹೋರಾಟದ ಪ್ರತಿಫಲವಾಗಿ ಇವತ್ತು ಇಡೀ ರಾಜ್ಯವೇ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿಯನ್ನು ಆಚರಣೆ ಮಾಡುತ್ತಿದ್ದೇವೆ. ರಾಜ್ಯದಲ್ಲಿ ನಮ್ಮ ಸಮಾಜದ 28 ಲಕ್ಷ ಜನಸಂಖ್ಯೆ ಇದೆ. ಆದರೂ ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ಜಿಲ್ಲೆಯಲ್ಲಿ ಸಮಾಜ ಅಭಿವೃದ್ಧಿಗಾಗಿ ಸಮುದಾಯ ಭವನ ನಿರ್ಮಾಣ ಮಾಡಬೇಕು. ವಸತಿ ನಿಲಯ, ಶಾಲೆ ನಿರ್ಮಿಸಲು 2 ಎಕರೆ ಜಮೀನು ನೀಡಬೇಕು ಎಂದು ಮನವಿ ಮಾಡಿದರು.
ಹಡಪದ ಸಮಾಜದ ಸಂಘಟನಾ ಕಾರ್ಯದರ್ಶಿಯಾದ ರಮೇಶ್ ನೀಲೂರ್ ಮಾತನಾಡಿ ಇವತ್ತು ವರ್ಷಕ್ಕೊಂದು ಬಾರಿ ಶಿವಶರಣ ಹಡಪದ ಅಪ್ಪಣ್ಣನವರ ಜಯಂತಿಯನ್ನು ಆಚರಣೆ ಮಾಡುತ್ತಿದ್ದು ಈ ಕಾರ್ಯಕ್ರಮಕ್ಕೆ ಸಾಲು-ಸಾಲು ರಾಜಕಾರಣಿಗಳ ಗೈರ್ ಆಗಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು ಹಡಪದ ಅಪ್ಪಣ್ಣನವರ ಜಯಂತಿ ನಿಮಿತ್ಯ ಕ್ರಿಕೆಟ್ ಟೂರ್ನಾಮೆಂಟ್ ನಡೆಸಲಾಗಿತ್ತು ಅದರ ಬಗ್ಗೆ ಸಮಾಜದ ಜನರಿಗೆ ಮಾಹಿತಿ ನೀಡಿದರು.
ಕರ್ನಾಟಕ ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕದ ಅಧ್ಯಕ್ಷ ಪ್ರಭುಲಿಂಗ ಮಹಾಗಾಂವಕರ್, ತಹಶೀಲ್ದಾರ್ ಸಂಜಿವಕುಮಾರ ಕಲಬುರ್ಗಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಜಿಲ್ಲಾ ಸಹಾಯಕ ನಿರ್ದೇಶಕ ಕೊಟ್ರೇಶ್ ಮರಬನಳ್ಳಿ, ಶಿವಶರಣ ಹಾಗರಗಿ, ಈರಣ್ಣ ಗಿರಣಿ, ಮಹಾಂತೇಶ ಇಸ್ತಾಪುರ, ನರಸಪ್ಪ, ಎಸ್.ಕೆ. ಕಲ್ಲೂರು, ಮಲ್ಲಿಕಾರ್ಜುನ ಮಾನೆ, ಸುನಿಲ್ ಕುಮಾರ್ ಹಡಪದ, ಅಪ್ಪಾರಾವ್ ಹಡಪದ್, ಮಾಂತೇಶ್ ಇಸ್ಲಾಂ ಪುರ್, ಸಂತೋಷ್ ಭದ್ರಗಿರಿ, ಚಂದ್ರಕಾಂತ್ ಹಡಪದ, ಇನ್ನು ಮುಂತಾದವರು ಇದ್ದರು
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
View Comments
Eranna averigi