ಹಾವೇರಿ : ಮಧ್ಯಾಹ್ನದ ಬಿಸಿಯೂಟ ಸೇವಿಸಿದ ನಂತ್ರ ವಾಂತಿ, ಬೇಧಿ ಕಾಣಿಸಿಕೊಂಡು ಅಸ್ವಸ್ಥರಾಗಿ 89 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಹಾವೇರಿಯ ರಾಣೆಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡಾದಲ್ಲಿ ನಡೆದಿದೆ.
ಇಂದು ಮಧ್ಯಾಹ್ನ ಹಾವೇರಿ ಜಿಲ್ಲೆಯ ರಾಣಿಬೆನ್ನೂರು ತಾಲೂಕಿನ ವೆಂಕಟಾಪುರ ತಾಂಡದಲ್ಲಿರುವಂತ ಸರ್ಕಾರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದವು.
ಈ ಊಟ ಸೇವಿಸಿದ ನಂತ್ರ 89ಕ್ಕೂ ಹೆಚ್ಚು ಮಕ್ಕಳಿಗೆ ವಾಂತಿ, ಬೇಧಿ ಕಾಣಿಸಿಕೊಂಡು, ಅಸ್ವಸ್ಥಗೊಂಡಿದ್ದಾರೆ.
ವಿಷಯ ತಿಳಿದು ಸ್ಥಳೀಯ ಗ್ರಾಮಸ್ಥರು ಸೇರಿದಂತೆ ಶಾಲಾ ಶಿಕ್ಷಕರು ಮಕ್ಕಳನ್ನು ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ತಾಲೂಕು ಆಸ್ಪತ್ರೆಗೆ ಡಿಡಿಪಿಐ ಅಂದಾನಪ್ಪ ವಡಗೇರಿ ಭೇಟಿ ನೀಡಿ, ಮಕ್ಕಳ ಆರೋಗ್ಯ ವಿಚಾರಿಸಿದರು. ಇದೀಗ ಚಿಕಿತ್ಸೆ ಬಳಿಕ ಅಸ್ವಸ್ಥಗೊಂಡಿದ್ದಂತ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.