ಕಲಬುರಗಿ: ಈ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಲು ಹುಟ್ಟಿಕೊಂಡ ಕಾಂಗ್ರೆಸ್ ಪಕ್ಷ ಕಾಶ್ಮೀರ ದಿಂದ ಕನ್ಯಾಕುಮಾರಿವರೆಗೆ ಹೋರಾಟ ನಡೆಸಿದೆ. ಅಸಂಖ್ಯಾತ ಬ್ರಿಟೀಷರ ಗುಂಡೇಟಿಗೆ ಎದೆಯೊಡ್ಡಿದ ಇತಿಹಾಸ ನಮ್ಮ ಮುಂದಿದೆ ಎಂದು ಮಾಜಿ ಸಚಿವರಾದ ಡಾ ಶರಣಪ್ರಕಾಶ್ ಪಾಟೀಲ್ ಅಭಿಪ್ರಾಯಪಟ್ಟರು
ಜಿಲ್ಲಾ ಕಾಂಗ್ತೆಸ್ ಪಕ್ಷದ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಸಂಸ್ಥಾ ಪನಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
1885 ರಲ್ಲಿ ಹುಟ್ಟಿಕೊಂಡ ಕಾಂಗ್ರೆಸ್ ಪಕ್ಷ ಕಳೆದ ಮಹಾತ್ಮಾಗಾಂಧಿ, ಸರ್ದಾರ ವಲ್ಲಭಭಾಯಿ ಪಟೇಲ್, ಜವಾಹರ್ ಲಾಲ್ ಅಬ್ದುಲ್ ಕಲಾಂ ಆಜಾದ್ ರಂತ ಮಹಾನ್ ನಾಯಕರ ಮಾರ್ಗದರ್ಶನದಲ್ಲಿ ಲಕ್ಷಾಂತರ ಜನ ನಾಯಕರು ಬ್ರಿಟೀಷರ ವಿರುದ್ದ ಹೋರಾಡಿ ಈ ದೇಶದ ಜನರಿಗೆ ಸ್ವಾತಂತ್ರ್ಯ ಕೊಡಿಸಲು ಸರ್ವಸ್ವವನ್ನೇ ತ್ಯಾಗ ಮಾಡಿದ್ದಾರೆ. ಅಲ್ಲಿಂದ ನಿರಂತರ 136 ವರ್ಷಗಳ ಕಾಲ ಯಾವಗ ಅಧಿಕಾರದಲ್ಲಿಯೋ ಆಗೆಲ್ಲ ಪಕ್ಷ ದೇಶದ ಜನರ ಪರವಾದ ಅಭಿವೃದ್ದಿ ಯೋಜನೆಗಳನ್ನು ಜಾರಿಗೆ ತಂದಿದೆ. ವಿರೋಧಪಕ್ಷದಲ್ಲಿದ್ದಾಗ ಆಳುವ ಸರ್ಕಾರಕ್ಕೆ ಸೂಕ್ತ ಸಲಹೆ ನೀಡಿದೆ ಎಂದರು.
ಸ್ವಾತಂತ್ರ್ಯ ನಂತರ ಈ ದೇಶ ಪ್ರಜಾತಂತ್ರ ವ್ಯವಸ್ಥೆಯಲ್ಲಿ ನಡೆಯಬೇಕು. ಸಮಾಜದ ಕಟ್ಟಕಡೆಯ ಜನರಿಗೆ ಸೌಲಭ್ಯ ತಲುಪಬೇಕು ಎನ್ನುವ ಆಶಯದಿಂದಾಗಿ, ಭಾರತರತ್ನ ಡಾ ಬಾಬಾಸಾಹೇಬ ಅಂಬೇಡ್ಕರ ಅವರ ನೇತೃತ್ವದಲ್ಲಿ ಸಂವಿಧಾನ ರಚನೆ ಮಾಡಲಾಯಿತು.
ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರು ಐಐಟಿ ಸೇರಿದಂತೆ ಹಲವಾರು ಸಂಸ್ಥೆಗಳನ್ನು, ಕಾರ್ಖಾನೆಗಳನ್ನು ವೈದ್ಯಕೀಯ ಸಂಸ್ಥೆ ಗಳನ್ನು ಸ್ಥಾಪಿಸಿದರು. ಅವರ ನಂತರ ಲಾಲ್ ಬಹಾದ್ದೂರ್ ಶಾಸ್ತ್ರಿ, ಇಂದಿರಾಗಾಂಧಿ ಹಾಗೂ ರಾಜೀವ್ ಗಾಂಧೀ ಅವರು ಕೂಡಾ ಜನರಪರ ಆಡಳಿತ ನೀಡುವುದರ ಜೊತೆಗೆ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ಬೆಳವಣಿಗೆಗೆ ಶ್ರಮವಹಿಸಿದ್ದರು ಎಂದು ನೆನಪಿಸಿಕೊಂಡರು.
ಆ ನಂತರ ಪ್ರಧಾನಿಗಳಾದ ಪಿ.ವಿ. ನರಸಿಂಹರಾವ್ ಹಾಗೂ ಮನಮೋಹನಸಿಂಗ್ ಅವರು ಅದೇ ಪರಂಪರೆ ಮುಂದುವರೆಸಿದರು. ನರೇಗಾ, ಆಹಾರ ಹಕ್ಕು ಕಾಯ್ದೆ, ಶಿಕ್ಷಣ ಹಕ್ಕು ಕಾಯ್ದೆ ಯಂತಹ ಜನಪರ ಕಾಯಿದೆಗಳು ಮನಮೋಹನಸಿಂಗ್ ಅವರ ಕಾಲದಲ್ಲಿ ಜಾರಿಗೆ ಬಂದು ಜನರಿಗೆ ಅನುಕೂಲವಾದವು ಎಂದು ಅವರು ಸ್ಮರಿಸಿದರು.
ಇದೇ ಸಂದರ್ಭದಲ್ಲಿ ಹಿರಿಯ ಕಾಂಗ್ರೆಸ್ ನಾಯಕರಿಗೆ ಸನ್ಮಾನಿಸಲಾಯಿತು. ಮಾಜಿ ಸಚಿವರಾದ, ಶಾಸಕರಾದ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ, ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ ಸೇರಿದಂತೆ ಮತ್ತಿತರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…