ಉಡುಪಿ: ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಅತಿಥಿ ಉಪನ್ಯಾಸಕರು ಬಹಳಷ್ಟು ಸಂಕಷ್ಟಗಳನ್ನು ಎದುರಿಸುತ್ತಿದ್ದರೂ ಸರಕಾರ ಅವರ ಬೇಡಿಕೆಗಳನ್ನು ಈಡೇರಿಸದೇ ಚೆಲ್ಲಾಟವಾಡುತ್ತಿದೆ. ರಾಜ್ಯದಲ್ಲಿ ಸುಮಾರು 14,447 ಅತಿಥಿ ಶಿಕ್ಷಕರಿದ್ದಾರೆ.
ಗುತ್ತಿಗೆ ಆಧಾರದಲ್ಲಿ ನೇಮಕಗೊಂಡು ಅರೆಕಾಲಿಕವಾಗಿ ಅಲ್ಪವೇತನ ಪಡೆದುಕೊಂಡು ಸಮಾಜದಲ್ಲಿ ಸ್ವಾಭಾಮಾನದ ಬದುಕನ್ನು ಕಟ್ಟಿಕೊಂಡಿದ್ದಾರೆ. ಪದವಿ ಹಾಗೂ ಸ್ನಾತಕೋತ್ತರ ಪದವಿ ತರಗತಿಗಳಿಗೆ ಉಪನ್ಯಾಸ ನೀಡಿವ ಶಿಕ್ಷಕರು ಮಾಸಿಕವಾಗಿ ಹನ್ನೊಂದು ಸಾವಿರದಿಂದ ಹದಿಮೂರು ಸಾವಿರದಷ್ಟು ವೇತನವನ್ನು ಪಡೆಯುತ್ತಿದ್ದಾರೆ. ವರ್ಷದಲ್ಲಿ ಎಂಟು ತಿಂಗಳು ಮಾತ್ರ ವೇತನ ಸಿಗುವುದಾದರೂ, ಅದು ಕೈ ಸೇರಲು ಮೂರು ತಿಂಗಳು ಕಾಯಬೇಕಿದೆ.
ಉದ್ಯೋಗದಲ್ಲಿ ಯಾವುದೇ ಭಧ್ರತೆಯಾಗಲಿ, ಪಿಎಫ್ ಇಎಸ್ಐ ಸಹಿತ ಯಾವುದೇ ಸೌಲಭ್ಯಗಳಿಲ್ಲದೆ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರು ಬೀದಿಗೆ ಬರುವಂತಾಗಿದೆ. ಕಳೆದ ಲಾಕ್‌ಡೌನ್ ಸಂದರ್ಭದಲ್ಲಿ 163 ಅತಿಥಿ ಶಿಕ್ಷಕರು ಪ್ರಾಣ ಕಳೆದುಕೊಂಡಿದ್ದಾರೆಂದು ವರದಿಯಾಗಿದೆ. ಅದರಲ್ಲಿ ಕೆಲವರು ಮನೆಯ ಆರ್ಥಿಕ ಸಂಕಷ್ಟದಿಂದ ಕಂಗೆಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕೆಲವರು ಸರಿಯಾದ ಚಿಕಿತ್ಸೆ ಪಡೆಯಲು ಹಣವಿಲ್ಲದೆ ಪ್ರಾಣ ಕಳೆದುಕೊಂಡಿದ್ದಾರೆ.
ಅವರಿಗೆ ಯಾವುದೇ ಪರಿಹಾರ ಧನವಾಗಲಿ ಕನಿಷ್ಟ ಪಕ್ಷ ಸಾಂತ್ವನವಾಗಲಿ ದೊರಕಲಿಲ್ಲ! ಸಮಾಜವನ್ನು ಶೈಕ್ಷಣಿಕವಾಗಿ ಕಟ್ಟಿಬೆಳೆಸುವಲ್ಲಿ ಮಹತ್ತರವಾದ ಪಾತ್ರ ನಿರ್ವಹಿಸುವ ಅತಿಥಿ ಉಪನ್ಯಾಸಕರನ್ನು ತಕ್ಷಣ ಖಾಯಂಗೊಳಿಸಬೇಕು. ಉದ್ಯೋಗ ಭಧ್ರತೆಯೊಂದಿಗೆ ಪಿಎಫ್, ಇಎಸ್ಐ ನೀಡಬೇಕು. ಗೌರವಧನ ಹೆಚ್ಚಿಸಬೇಕು. ಬಾಕಿ ಇರುವ ಗೌರವಧನವನ್ನು ತಕ್ಷಣ ಮಂಜೂರುಗೊಳಿಸಬೇಕು. ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಪರಿಹಾರ ಧನ ನೀಡಬೇಕೆಂದು ಆಗ್ರಹಿಸಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಉಡುಪಿ ಜಿಲ್ಲಾ ಸಮಿತಿ ನಿಯೋಗವು ಉಡುಪಿ ಜಿಲ್ಲಾಧಿಕಾರಿಗೆ ಮನವಿಯನ್ನು ನೀಡಿದರು.
ನಿಯೋಗದಲ್ಲಿ ಜಿಲ್ಲಾ ಸಮಿತಿ ಸದಸ್ಯರಾದ ನಝಹತ್ ಅಸ್ಸಾದಿ, ಸುಹೇಲ್ ಮತ್ತು ಉಡುಪಿ ವಲಯ ಅಧ್ಯಕ್ಷ ತಾಬಿಶ್ ರವರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…