ಬಿಸಿ ಬಿಸಿ ಸುದ್ದಿ

ಗುವಿವಿಯಲ್ಲಿ ರಾಷ್ಟ್ರಕವಿ ಕುವೆಂಪುರವರ ೧೧೭ನೇ ಜಯಂತ್ಯೋತ್ಸವ

ಕಲಬುರಗಿ: ರಾಷ್ಟ್ರಕವಿ ಕುವೆಂಪುರವರ ೧೧೭ನೇ ಜಯಂತ್ಯುತ್ಸವ ಕಾರ್ಯಕ್ರಮ ವನ್ನು ಕನ್ನಡ ಅಧ್ಯಯನ ಸಂಸ್ಥೆಯ, ಹರಿಹರ ಸಭಾಂಗಣದಲ್ಲಿ ಏರ್ಪಡಿಸಲಾಗಿತ್ತು. ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿಗಳಾದ ಪ್ರೊ. ದಯಾನಂದ ಅಗಸರ ಅವರು ರಾಷ್ಟ್ರಕವಿ ಕುವೆಂಪುರವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು ರಾಷ್ಟ್ರ ಕವಿ ಕುವೆಂಪುರವರ ಸಾಹಿತ್ಯ ಇರದೇ ಹೋಗಿದ್ದರೆ, ನಮ್ಮ ಸಾಹಿತ್ಯ, ಸಂಸ್ಕೃತಿ, ಸಮಾಜ ಹೇಗಿರುತ್ತಿತ್ತು ಎಂಬುದನ್ನು ಊಹಿಸಿಕೊಳ್ಳುವದಕ್ಕೂ ಅಸಾಧ್ಯವೆನಿಸುತ್ತದೆ. ಕುವೆಂಪುರವರು ಕೇವಲ ಕವಿಯಾಗಿರದೆ ಅವರೊಬ್ಬ ಭಾಷಾ ತಜ್ಞರಾಗಿ, ಸಮಾಜ ವಿಜ್ಞಾನಿಯಾಗಿ, ಚಿಂತಕರಾಗಿ ಅನೇಕತೆಯಲ್ಲಿ ಏಕತೆಯನ್ನು, ಏಕತೆಯಲ್ಲಿ ವಿವಿಧತೆಯನ್ನು ಕಂಡ ಮಹಾನ್ ವಿಜ್ಞಾನಿಯಾಗಿ ಕಾಣುತ್ತಾರೆ. ಭಾರತ ವಿಶಾಲವಾದ ದೇಶ, ಹಲವು ಮತ, ಧರ್ಮ, ಸಂಸ್ಕೃತಿಗಳ ನೆಲೆಬೀಡು. ಇಂತಹ ವಿಶ್ವಮಾನವ ಸಂದೇಶವನ್ನು ಜನತೆಗೆ ಸಾರಿದಂತಹ ಅಪರೂಪದ ದಾರ್ಶನಿಕ ಮಹಾನ್ ಕವಿ. ಕುವೆಂಪುರವರು ವೈಚಾರಿಕ ನೆಲೆಯಲ್ಲಿ ಸಾಹಿತ್ಯಿಕವಾಗಿ ತೊಡಗಿಸಿಕೊಂಡು, ಜನಪರ, ಜೀವಪರ ಚಿಂತನೆ, ವೈಚಾರಿಕ ಪ್ರಜ್ಞೆಗಳನ್ನು ಮಾನವನ ಬದುಕಿಗೆ ಬಿತ್ತಿದಂತವರು. ಇವರ ವೈಚಾರಿಕ ಚಿಂತನೆಗಳನ್ನು ಪ್ರತಿಯೊಬ್ಬ ಪ್ರಜೆಗಳು, ವಿದ್ಯಾರ್ಥಿಗಳು ಮೈಗೂಡಿಸಿಕೊಂಡರೆ ಸದೃಢ ಭಾರತ ನಿರ್ಮಾಣವಾಗುತ್ತದೆ ಎಂದು ಸಲಹೆ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕನ್ನಡ ಅಧ್ಯಯನ ಸಂಸ್ಥೆಯ ನಿರ್ದೇಶಕರಾದ ಪ್ರೊ. ಎಚ್.ಟಿ. ಪೋತೆ ಅವರು ದೇಶಕಂಡ ಅಪರೂಪದ ಮಹಾನ್ ಕವಿ ಕುವೆಂಪು. ಭಾರತ ದೇಶದಂತ ಸಂಕೀರ್ಣ ಸಂಸ್ಕೃತಿಯಲ್ಲಿ ಏಕತೆಯನ್ನು ಬಿತ್ತುವಂತಹ ಮಹತ್ವದ ಕಾರ್ಯ ಮಾಡಿದ ವಿಶ್ವಮಾನವ ವ್ಯಕ್ತಿತ್ವ ದರ್ಶನ ಮಾಡಿದ್ದಾರೆ. ಅಂದಿನ ಮೌಢ್ಯ ಸಂಪ್ರದಾಗಳನ್ನು ಮೆಟ್ಟಿ, ಮಾನವೀಕರಣಗೊಳಿಸಿದ ಮಹಾನ್ ವೈಚಾರಿಕ ಕುವೆಂಪು ಅವರ ಚಿಂತನೆಗಳು ಪ್ರತಿಯೊಬ್ಬ ನಾಗರಿಕರಿಗೂ ಅವಶ್ಯಕವಾಗುವಂತಹಗಳಾಗಿವೆ.

ಕಲಾನಿಕಾಯದ ಡೀನರಾದ ಪ್ರೊ. ರಮೇಶ ರಾಠೋಡ, ಪ್ರೊ. ಅಬ್ದುಲ್ ರಬ್ ಉಸ್ತಾದ್ ಡಾ. ಪರಿಮಳಾ ಅಂಬೇಕರ್ ಹಾಗೂ ಡಾ. ನಿಂಗಣ್ಣ ಟಿ. ವೇದಿಕೆ ಮೇಲೆ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಕಲಾನಿಕಾಯದ ಎಲ್ಲಾ ಬೋಧಕ ಬೋಧಕೇತರ ಸಿಬ್ಬಂದಿ ವರ್ಗ ಹಾಗೂ ವಿಧ್ಯಾರ್ಥಿಗಳು ಪಾಲ್ಗೊಂಡಿದ್ದರು. ಕಾರ್ಯಕ್ರಮವನ್ನು ಡಾ. ಎಂ.ಬಿ. ಕಟ್ಟಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago