ಬಿಸಿ ಬಿಸಿ ಸುದ್ದಿ

ರಾಜೀನಾಮೆ ನೀಡಿದ ಶಾಸಕರಿಗೆ ಅನರ್ಹಗೊಳಿಸಬೇಕೆಂದೂ ಸ್ಪೀಕರ್‌ ಗೆ ಮನವಿ

ಕಲಬುರಗಿ: ವಿಶ್ವದ ಎದುರು ನಾಚಿ ತಲೆ ತಗ್ಗಿಸುವ ಕೆಲಸ ಕರ್ನಾಟಕದ ರಾಜಕೀಯ ರಂಗದಲ್ಲಿ ನಡೆಯುತ್ತಿದ್ದು, ಶಾಸಕರು ಮೂಕಪ್ರಾಣಿಗಳಂತೆ ಬಿಕರಿಗೊಳಗಾಗುತ್ತಿರುವುದು ಪ್ರಜಾಪ್ರಭುತ್ವ ಕ್ಕೆ ಮಾರಕ, ಯಾವುದೇ ಕಾರಣಕ್ಕೂ ಶಾಸಕರ ರಾಜೀನಾಮೆ ಅಂಗೀಕರಿಸಬಾರದು. ಮತ್ತು ಅವರು ಜನಹಿತ ಕಾಪಾಡಲು ಬದ್ಧರಾಗಿಲ್ಲದ ಕಾರಣ ಅವರನ್ನು ಅನರ್ಹಗೊಳಿಸಬೇಕೆಂದೂ ರಾಜ್ಯದ ಸಭಾಧ್ಯಕ್ಷರಿಗೆ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ಪತ್ರ ಬರೆದು ಮತ್ತು ಇ-ಮೇಲ್ ಕಳುಹಿಸುವ ಮೂಲಕ ಆಗ್ರಹಿಸಿದೆ.

ಪತ್ರದಲ್ಲಿ ಜನವಾದಿ ಮಹಿಳಾ ಸಂಘಟನೆಯಿಂದ “ಪ್ರಜಾಪ್ರಭುತ್ವ ಉಳಿಸಿ” ಅಭಿಯಾನದ ಭಾಗವಾಗಿ ಈ ಪತ್ರ ಬರೆಯಲಾಗಿದೆ ಎಂದು ಅಧ್ಯಕ್ಷೆ ಕೆ ನೀಲಾ ಅವರು ತಿಳಿಸಿದ್ದಾರೆ.

ಕೇಂದ್ರದಲ್ಲಿ ಸರಕಾರ ನಡೆಸುತ್ತಿರುವ, ರಾಜ್ಯದಲ್ಲಿ ವಿರೋಧ ಪಕ್ಷ ಬಿಜೆಪಿ ಪಕ್ಷದ ಪ್ರಮುಖ ನಾಯಕರುಗಳು ರಾಜಾರೋಷವಾಗಿ ‘ಅತೃಪ್ತ’ ಶಾಸಕರ ಜೊತೆ ನಿಂತಿರುವುದು, ಪಕ್ಷದ ಪ್ರಮುಖರ ವಿಶೇಷ ವಿಮಾನಗಳಲ್ಲಿ ಶಾಸಕರನ್ನು ಕರೆದೊಯ್ಯುತ್ತಿರುವುದು ಮಾಧ್ಯಮಗಳ ಮೂಲಕ ಜಗಜ್ಜಾಹೀರು ಆಗುತ್ತಿದೆ, ರಾಜ್ಯದಲ್ಲಿ ಭೀಕರ ಬರಗಾಲವಿದೆ. ಕುಡಿಯುವ ನೀರಿಗೂ ತತ್ವಾರವಾಗಿದೆ. ಮಳೆ ಕೈಕೊಟ್ಟು, ರೈತರು ಕೂಲಿಕಾರರು, ಕಂಗಾಲಾಗಿ, ಊರು ಕೇರಿ ಬಿಟ್ಟು ನಗರಗಳತ್ತ ತುತ್ತು ಕೂಳಿಗಾಗಿ ಗುಳೆ ಹೊರಟಿದ್ದಾರೆ. ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದರು.

ಮಹಿಳೆಯರು ಮಕ್ಕಳ ಮೇಲೆ, ಹಿಂಸೆ ಅತ್ಯಾಚಾರಗಳು ಹೆಚ್ಚಿವೆ. ದಲಿತರ ಮತ್ತು ಅಲ್ಪಸಂಖ್ಯಾತರ ಮೇಲೆ ಜಾತಿ ಕೋಮಿನ ನೆಲೆಯ ದೌರ್ಜನ್ಯಗಳು ವರದಿಯಾಗುತ್ತಲೇ ಇವೆ. ಈ ಯಾವ ವಿಷಯಗಳ ಕುರಿತೂ ತಲೆ ಕೆಡಿಸಿಕೊಳ್ಳದೆ ಕೆಲವು ಶಾಸಕರು ಹೊಣೆ ಗೇಡಿತನದಿಂದ ವರ್ತಿಸುತಿದ್ದಾರೆಂದು ಅವರು ಆರೋಪಿಸಿದರು.

ಈಗ ರಾಜಿನಾಮೆ ಕೊಟ್ಟಿರುವ ಯಾವ ಶಾಸಕರೂ ಜನಹಿತ ಅಥವಾ ತಮ್ಮ ಕ್ಷೇತ್ರದ ಮತದಾರರ  ಹಿತದ ದೃಷ್ಟಿಯಿಂದ ರಾಜಿನಾಮೆ ಕೊಟ್ಟಿರುವುದಿಲ್ಲ. ಅವರಲ್ಲಿ ಹಣ ಮತ್ತು ಅಧಿಕಾರದ ಲಾಲಸೆ ಇರುವುದು ಮೇಲ್ನೋಟಕ್ಕೆ ಗೋಚರವಾಗುತ್ತಿದ್ದು, ಸಾರ್ವಜನಿಕ ಹಿತದೃಷ್ಟಿಯಿಂದ ಇನ್ನು ಮುಂದೆ ಈ ರೀತಿಯ ಕುದುರೆ ವ್ಯಾಪಾರಕ್ಕೆ ಶಾಸಕರು ಒಳಗಾಗದಂಥಹ ಒಂದು ಕಟ್ಟುನಿಟ್ಟಾದ ಕಾನೂನು ಬರುವಂತೆ ತಾವು ಕ್ರಮ ಕೈಗೊಳ್ಳಬೇಕೆಂದು ವಿನಂತಿಸುವ ಜೊತೆಗೆ ಯಾವುದೇ ಕಾರಣಕ್ಕೂ ಶಾಸಕರ ರಾಜೀನಾಮೆಯನ್ನು ಅಂಗೀಕರಿಸಬಾರದು. ಜನಹಿತ ಕಾಪಾಡಲು ಬದ್ಧರಾಗಿಲ್ಲದ ಶಾಸಕರನ್ನು ಅನರ್ಹಗೊಳಿಸಿ ಎಂದು ತಮ್ಮ ಮನವಿ ಪತ್ರದಲ್ಲಿ ಸಂಘಟನೆಯ ಪದಾಧಿಕಾರಿಗಳು ಮತ್ತು ಸದಸ್ಯರು  ಒತ್ತಾಯಿಸಿದ್ದಾರೆ.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

6 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

16 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

16 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

16 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

1 day ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago