ಸುರಪುರ: ಹುಣಸಗಿ ಭಾಗಕ್ಕೆ ಹೋಗಲು ಬಸ್‌ಗಳಿಲ್ಲವೆಂದು ಆರೋಪಿಸಿ ಮಂಗಳವಾರ ಮದ್ಹ್ಯಾನ ವಿದ್ಯಾರ್ಥಿಗಳು ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ರಸ್ತೆ ತಡೆ ನಡೆಸಿದರು.
ನಗರಕ್ಕೆ ಸಚಿವರು ಆಗಮಿಸಿದ ಸಂದರ್ಭದಲ್ಲಿ ನಡೆದ ಪ್ರತಿಭಟನೆ ಹಲವಾರು ಚರ್ಚೆಗೂ ಕಾರಣವಾಯಿತು.ಅನೇಕ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ,ನಾವು ಕವಡಿಮಟ್ಟಿಗೆ ಹೋಗಬೇಕು,ದೇವಾಪುರಕ್ಕೆ ಹೋಗಬೇಕು ಆದರೆ ರಸ್ತೆ ಬಂದ್ ಮಾಡಿದ್ದರಿಂದ ಬಸ್‌ಗಳಿಲ್ಲದೆ ಮದ್ಹ್ಯಾನದಿಂದ ಎಲ್ಲಾ ವಿದ್ಯಾರ್ಥಿಗಳು ಪರದಾಡುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸಚಿವರು ಮತ್ತು ಶಾಸಕರು ಕಾರ್ಯಕ್ರಮದ ವೇದಿಕೆ ಕಡೆಗೆ ಬರುತ್ತಿರುವ ಸಂದರ್ಭದಲ್ಲಿಯೇ ಪ್ರತಿಭಟನೆ ನಡೆಸಿದ್ದನ್ನು ತೆರವುಗೊಳಿಸಲು ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಆಗಮಿಸಿ ವಿದ್ಯಾರ್ಥಿಗಳ ಮನವೊಲಿಸುವ ಪ್ರಯತ್ನ ಮಾಡಿದರಾದರು ವಿದ್ಯಾರ್ಥಿಗಳು ಮಣಿಯದೆ ಹೋರಾಟವನ್ನು ಮುಂದುವರೆಸಿದರು.
ನಂತರ ಸ್ಥಳಕ್ಕೆ ಡಿವೈಎಸ್ಪಿ ಡಾ:ದೇವರಾಜ ಬಿ ಆಗಮಿಸಿ ಎಲ್ಲಾ ವಿದ್ಯಾರ್ಥಿಗಳಿಗೆ ಬಸ್ ಕಲ್ಪಿಸುವುದಾಗಿ ತಿಳಿಸಿದರು ಆಗಲೂ ವಿದ್ಯಾರ್ಥಿಗಳು ವಾಗ್ವಾದ ಮುಂದುವರೆಸಿದರು,ನಂತರ ನಿಮ್ಮ ಗ್ರಾಮಗಳಿಗೆ ಹೋಗಲು ಬೈಪಾಸ್ ಮೂಲಕ ಬಸ್‌ಗಳನ್ನು ಬಿಡಲಾಗಿದೆ ಎಂದು ಎಲ್ಲಾ ವಿದ್ಯಾರ್ಥಿಗಳನ್ನು ಬಸ್ ನಿಲ್ದಾಣಕ್ಕೆ ಕರೆದುಕೊಂಡು ಹೋಗುವ ಮೂಲಕ ಪ್ರತಿಭಟನೆಯನ್ನು ಅಂತ್ಯಗೊಳಿಸಿ ವಿದ್ಯಾರ್ಥಿಗಳು ಅವರು ಊರುಗಳಿಗೆ ತೆರಳಲು ಅನುಕೂಲ ಮಾಡಿಕೊಡಲಾಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…