ಸುರಪುರ: ತಾಲೂಕಿನ ರುಕ್ಮಾಪುರ ಕ್ರಾಸ್ ಬಳಿಯ ಬೀದರ್ ಬೆಂಗಳೂರು ರಾಜ್ಯ ಹೆದ್ದಾರಿಯಲ್ಲಿ ಸಗರ ಗ್ರಾಮದ ವ್ಯಕ್ತಿಯ ಶವ ಪತ್ತೆಯಾಗಿದೆ.
ಬೆಳ್ಳಂಬೆಳಗ್ಗೆ ವ್ಯಕ್ತಿಯ ಶವವನ್ನು ಕಂಡವರು ಪೊಲೀಸರಿಗೆ ಮಾಹಿತಿ ನೀಡಿದ್ದು ನಂತರ ಶವವನ್ನು ತಾಲೂಕು ಆಸ್ಪತ್ರೆಗೆ ತಂದು ಇರಿಸಲಾಗಿತ್ತು. ವ್ಯಕ್ತಿಗೆ ಯಾವುದೋ ವಾಹನ ಅಪಘಾತ ಮಾಡಿರುವ ಶಂಕೆ ವ್ಯಕ್ತವಾಗಿತ್ತು ಸಂಜೆಯವರೆಗೂ ಕೂಡ ವ್ಯಕ್ತಿ ಯಾರೆಂಬುದು ಗುರುತು ಪತ್ತೆಯಾಗಿರಲಿಲ್ಲ. ಸಂಜೆಯ ವೇಳೆಗೆ ಮೃತವ್ಯಕ್ತಿ ಶಹಾಪುರ ತಾಲೂಕಿನ ಸಗರ ಗ್ರಾಮದವರೆಂದು ಗೊತ್ತಾಗಿದೆ.
ಸಾಯಿಬಣ್ಣ ತಂದೆ ಶಿವಶರಣಪ್ಪ ಮರ್ಸ್ ಎಂಬ 34 ವರ್ಷದ ವ್ಯಕ್ತಿ ಎಂದು ಗೊತ್ತಾಗಿದ್ದು, ಮೃತ ವ್ಯಕ್ತಿಯು ತನ್ನ ಪತ್ನಿಯ ಗ್ರಾಮವಾದ ದೇವದುರ್ಗ ತಾಲೂಕಿನ ನಿಲವಂಜಿ ಗ್ರಾಮಕ್ಕೆ ಹೋಗುವುದಾಗಿ ಹೇಳಿ ಬಂದಿದ್ದರು ಎಂದು ತಿಳಿದುಬಂದಿದೆ.ಸಂಜೆ ವೇಳೆ ಸಂಬಂಧಿಕರು ಶವವನ್ನು ತೆಗೆದುಕೊಂಡು ಹೋಗಿದ್ದಾರೆ.
ಮೃತ ವ್ಯಕ್ತಿ ಕೃಷಿಕರಾಗಿದ್ದು ಗ್ರಾಮದಲ್ಲಿ ಕೃಷಿ ಚಟುವಟಿಕೆ ಮಾಡಿಕೊಂಡಿದ್ದರು ಎಂದು ತಿಳಿದುಬಂದಿದ್ದು,ಪತ್ನಿ ಮತ್ತು ಒಂದು ಮಗು ಇರುವ ಬಗ್ಗೆ ತಿಳಿದುಬಂದಿದ್ದು ಸಾವಿಗೆ ನಿಖರವಾದ ಕಾರಣ ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ. ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…