ಕಲ್ಬುರ್ಗಿ : ನಗರದ ಸರ್ಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಾಲೇಜಿನಲ್ಲಿ ಭಾರತೀಯ ರೆಡ್ಕ್ರಾಸ್ ಕರ್ನಾಟಕ ರಾಜ್ಯ ಶಾಖೆಯ ಶತಮಾನೋತ್ಸವ ಸಂಭ್ರಮ – 2021 ಭಾರತೀಯ ರೆಡ್ ಕ್ರಾಸ್ ಜಿಲ್ಲಾ ಶಾಖೆ ಕಲಬುರ್ಗಿ ಸರ್ಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಲಬುರ್ಗಿ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ವಿಪತ್ತು ನಿರ್ವಹಣೆ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಅಪ್ಪಾರಾಯ ಅಕೋಣೆ ಉದ್ಘಾಟಿಸಿದರು. ಸರ್ಕಾರಿ ಮಹಾವಿದ್ಯಾಲಯ ಸ್ವಾಯತ್ತ ಕಾಲೇಜಿನ ಪ್ರಾಚಾರ್ಯರಾದ ಡಾಕ್ಟರ್ ಶಂಕ್ರಪ್ಪ ಎಸ್ ಹತ್ತಿ ಅಧ್ಯಕ್ಷತೆ ವಹಿಸಿದ್ದರು. ಕಲಬುರ್ಗಿ ವಿಭಾಗದ ಪ್ರಭಾರ ಪ್ರಾದೇಶಿಕ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಅಧಿಕಾರಿ ಪರಶುರಾಮ್ ವಿಪತ್ತು ನಿರ್ವಹಣೆ ಕುರಿತು ಉಪನ್ಯಾಸ ನೀಡಿದರು.
ಸರ್ಕಾರಿ ಆಸ್ಪತ್ರೆ ಜಿಲ್ಲಾ ಶಾಸ್ತ್ರ ತಜ್ಞರಾದ ಡಾಕ್ಟರ್ ಅಂಬರಾಯ ರುದ್ರವಾಡಿ ಕರಣ ಕುರಿತು ಉಪನ್ಯಾಸ ನೀಡಿದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಉಪಸಭಾಪತಿ ಯಾದ ಅರುಣ್ ಕುಮಾರ್ ಲೋಹ ಗೌರವ ಉಪಸ್ಥಿತಿ ವಹಿಸಿದ್ದರು. ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಗೌರವ ಕಾರ್ಯದರ್ಶಿ ರವೀಂದ್ರ ಶಾಬಾದಿ, ಭಾರತ ರೆಡ್ ಕ್ರಾಸ್ ಸಂಸ್ಥೆಯ ಖಜಾಂಚಿ ಭಾಗ್ಯಲಕ್ಷ್ಮಿ ಎಂ, ಇವರ ಕ್ರಾಸ್ ಸಂಸ್ಥೆಯ ಸಂಯೋಜಕ ಧನರಾಜ್ ಸ್ವಾಗತಿಸಿದರು.